Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:10 - ಕನ್ನಡ ಸಮಕಾಲಿಕ ಅನುವಾದ

10 ನೀತಿವಂತನು ತನ್ನ ಪ್ರಾಣಿಗಳಿಗೂ ಕಾಳಜಿ ತೋರುವನು; ಆದರೆ ದುಷ್ಟರ ಕರುಣೆಯ ಕಾರ್ಯಗಳು ಕ್ರೂರತನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಶಿಷ್ಟನು ತನ್ನ ಪಶುಗಳ ಕ್ಷೇಮವನ್ನು ಲಕ್ಷಿಸುತ್ತಾನೆ, ದುಷ್ಟನ ವಾತ್ಸಲ್ಯವೋ ಕ್ರೂರತನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಒಳ್ಳೆಯವನು ದನಕರುಗಳಿಗೂ ದಯೆ ತೋರುವನು; ಕೆಟ್ಟವನು ತೋರುವ ಕರುಣೆಯು ಕ್ರೂರತನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಶಿಷ್ಟನು ತನ್ನ ದನದ ಕ್ಷೇಮವನ್ನು ಲಕ್ಷಿಸುತ್ತಾನೆ; ದುಷ್ಟನ ವಾತ್ಸಲ್ಯವೋ ಕ್ರೂರತನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಶಿಷ್ಟನು ತನ್ನ ಪಶುಗಳನ್ನು ನೋಡಿಕೊಳ್ಳುತ್ತಾನೆ. ಆದರೆ ದುಷ್ಟನ ವಾತ್ಸಲ್ಯವು ಕ್ರೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:10
13 ತಿಳಿವುಗಳ ಹೋಲಿಕೆ  

ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು.


ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರ ಸಹೋದರಿಯರನ್ನು ನೋಡಿ, ಕರುಣೆ ತೋರಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವುದು ಹೇಗೆ?


ಅದಕ್ಕೆ ಆ ಸ್ತ್ರೀಯು, “ಅಯ್ಯಾ, ನೀರು ಸೇದುವುದಕ್ಕೆ ನಿಮ್ಮ ಹತ್ತಿರ ಏನೂ ಇಲ್ಲವಲ್ಲಾ, ಬಾವಿಯೋ ಆಳವಾಗಿದೆ. ಹೀಗಿರುವಲ್ಲಿ ಜೀವಜಲವು ನಿನಗೆ ಎಲ್ಲಿಂದ ಬಂದೀತು?


ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು.


ಅಮ್ಮೋನ್ಯನಾದ ನಾಹಾಷನು ಅವರಿಗೆ, “ಇಸ್ರಾಯೇಲರಿಗೆ ಅವಮಾನಪಡಿಸುವುದಕ್ಕಾಗಿ ನಿಮ್ಮೆಲ್ಲರ ಬಲಗಣ್ಣುಗಳನ್ನು ಕಿತ್ತು ಹಾಕುವ ಒಂದೇ ನಿಬಂಧನೆಯಿಂದ, ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ,” ಎಂದನು.


“ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು,” ಎಂದು ಮೋಶೆಯ ನಿಯಮದಲ್ಲಿ ಬರೆದಿದೆ. ಇಲ್ಲಿ ದೇವರಿಗೆ ಎತ್ತಿನ ಬಗ್ಗೆ ಮಾತ್ರ ಚಿಂತೆಯಿದೆಯೋ?


ಹೊಟ್ಟೆಗೆ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸಾಮಾನ್ಯ ಸೇವಕನೇ ಮೇಲು.


ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು