Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:16 - ಕನ್ನಡ ಸಮಕಾಲಿಕ ಅನುವಾದ

16 ಮೂರ್ಖನ ಕೋಪವು ತಟ್ಟನೆ ರಟ್ಟಾಗುವುದು, ಆದರೆ ಜಾಣನು ಅವಮಾನವನ್ನು ನಿರ್ಲಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು, ಜಾಣನು ಅವಮಾನವನ್ನು ಮರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು; ಜಾಣನು ನಿಂದೆಯನ್ನು ಮರೆಮಾಚುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮೂಢನು ತನ್ನ ಸಿಟ್ಟನ್ನು ತಟ್ಟನೆ ತೋರಿಸುವನು. ಆದರೆ ಜ್ಞಾನಿಯು ಅವಮಾನವನ್ನು ಕಡೆಗಣಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:16
12 ತಿಳಿವುಗಳ ಹೋಲಿಕೆ  

ಮೂಢನು ತನ್ನ ಕೋಪವನ್ನೆಲ್ಲಾ ವ್ಯಕ್ತಪಡಿಸುವನು. ಆದರೆ ಜ್ಞಾನಿಯು ಕೋಪವನ್ನು ಶಾಂತಿಯಿಂದ ತಡೆಹಿಡಿಯುತ್ತಾನೆ.


ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಆದರೆ ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚುತ್ತದೆ.


ದೋಷವನ್ನು ಕ್ಷಮಿಸುವವನು ಪ್ರೀತಿಯನ್ನು ಹುಡುಕುತ್ತಾನೆ; ಆದರೆ ದೋಷವನ್ನು ಎತ್ತಿ ಆಡುವವನು ಸ್ನೇಹಿತರಿಂದ ಪ್ರತ್ಯೇಕಗೊಳ್ಳುತ್ತಾನೆ.


ತನ್ನ ಸ್ವಂತ ಆತ್ಮವನ್ನು ಆಳದಿರುವವನು, ಗೋಡೆ ಬಿದ್ದ ಹಾಳೂರಿಗೆ ಸಮಾನ.


ವಿವೇಕವು ವಿವೇಕಿಗಳಿಗೆ ಜೀವನದ ಬುಗ್ಗೆ, ಆದರೆ ಮೂರ್ಖತನವು ಮೂರ್ಖರಿಗೆ ಶಿಕ್ಷೆಯನ್ನು ತರುತ್ತದೆ.


ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆಯಾಗಿದೆ, ಆದರೆ ಮೂರ್ಖರಲ್ಲಿ ಜ್ಞಾನವು ಕಂಡುಬರುವುದಿಲ್ಲ.


ಮೂಢನನ್ನು ಅಸಮಾಧಾನವು ಕೊಲ್ಲುವುದು; ಮುಗ್ಧನನ್ನು ಅಸುಹೆ ಸಾಯುವಂತೆ ಮಾಡುವುದು.


ಒಬ್ಬ ಪ್ರಾಮಾಣಿಕ ಸಾಕ್ಷಿ ಸತ್ಯವನ್ನು ಹೇಳುತ್ತಾನೆ, ಆದರೆ ಸುಳ್ಳುಸಾಕ್ಷಿಯು ಸುಳ್ಳನ್ನು ಹೇಳುತ್ತಾನೆ.


ಕಲ್ಲು ಭಾರ, ಮರಳು ಭಾರ; ಆದರೆ ಇವೆರಡಕ್ಕಿಂತ ಮೂಢನ ಕೋಪವು ಬಹು ಭಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು