Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:11 - ಕನ್ನಡ ಸಮಕಾಲಿಕ ಅನುವಾದ

11 ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು; ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಿಟ್ಟಿಯಾಗಿ ಸಿಕ್ಕಿದ ಸಂಪತ್ತು ಬೇಗನೆ ಕರಗುವುದು; ದುಡಿದು ಕೂಡಿಸಿದ ಹಣ ಅಭಿವೃದ್ಧಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವದು; ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮೋಸದಿಂದ ಸಂಪಾದಿಸಿದ ಹಣವು ಕ್ಷಯಿಸಿ ಹೋಗುವುದು. ದುಡಿದು ಸಂಪಾದಿಸಿದ ಹಣ ಹೆಚ್ಚುತ್ತಾ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:11
19 ತಿಳಿವುಗಳ ಹೋಲಿಕೆ  

ಪ್ರಾರಂಭದಲ್ಲಿ ತ್ವರೆಯಾಗಿ ಪಡೆದುಕೊಂಡ ಆಸ್ತಿಯೂ ಅಂತ್ಯದಲ್ಲಿ ಆಶೀರ್ವಾದವಾಗಿರುವುದಿಲ್ಲ.


ಅನ್ಯಾಯದ ಸಂಪತ್ತುಗಳು ಶಾಶ್ವತವಲ್ಲ, ಆದರೆ ನೀತಿಯು ಮರಣದಿಂದ ಬಿಡಿಸುತ್ತದೆ.


ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು, ಬಡವರ ಮೇಲೆ ದಯೆ ತೋರಿಸುವವನಿಗೆ ಅದನ್ನು ಕೂಡಿಸುವನು.


ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ; ತನಗೆ ಬಡತನವು ಬರುವುದನ್ನು ಅವನು ಯೋಚಿಸುವುದಿಲ್ಲ.


ನಂಬಿಗಸ್ತನಾದ ಮನುಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು, ನಿರ್ದೋಷಿಯಾಗಿರುವುದಿಲ್ಲ.


ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಹಾಗೆ, ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಹಾಗೆಯೇ ಇದ್ದಾನೆ. ಅವನು ತನ್ನ ಮಧ್ಯಪ್ರಾಯದಲ್ಲಿ ಅದನ್ನು ಬಿಡುವನು. ತನ್ನ ಅಂತ್ಯದಲ್ಲಿ ಅವನು ಮೂರ್ಖನೆಂದು ಸಾಬೀತಾಗುತ್ತದೆ.


ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಆಶೀರ್ವಾದವನ್ನೂ ಅಭಿವೃದ್ಧಿಯನ್ನೂ ಹೊಂದುವಿ.


ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡಿಸಿ ಬಿಡುವನು.


ಅದು ಹೇಗೆಂದರೆ, ಅನಾಹುತದಿಂದ ಆಸ್ತಿ ಕಳೆದುಹೋಗುತ್ತದೆ. ಅವನಿಗೆ ಮಗನಿದ್ದರೆ, ಅವನಿಗೆ ಏನೂ ಇರುವುದಿಲ್ಲ.


ಎಲ್ಲಿ ಗರ್ವವೋ ಅಲ್ಲಿ ಕಲಹ; ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ.


ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ; ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು.


ಸುಳ್ಳಿನ ನಾಲಿಗೆಯಿಂದ ಸಂಪಾದಿಸಿದ ಸಂಪತ್ತು ಕ್ಷಣಿಕ ಆವಿಯಂತೆಯೂ ಮೃತ್ಯುಪಾಶದಂತೆಯೂ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು