ಜ್ಞಾನೋಕ್ತಿಗಳು 13:13 - ಕನ್ನಡ ಸಮಕಾಲಿಕ ಅನುವಾದ13 ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದೇವವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ನಿಷ್ಠೆಯಿಂದ ಪಾಲಿಸುವವನು ಫಲಪಡೆಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 [ದೇವರ] ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸುಫಲವನ್ನು ಹೊಂದುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬುದ್ಧಿಮಾತನ್ನು ಕೇಳದವನು ತನಗೆ ತೊಂದರೆಯನ್ನು ಬರಮಾಡಿಕೊಳ್ಳುವನು. ಬುದ್ಧಿವಾದವನ್ನು ಗೌರವಿಸುವವನು ಪ್ರತಿಫಲವನ್ನು ಹೊಂದುವನು. ಅಧ್ಯಾಯವನ್ನು ನೋಡಿ |
“ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.