Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:3 - ಕನ್ನಡ ಸಮಕಾಲಿಕ ಅನುವಾದ

3 ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ, ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬಾಯಿಯನ್ನು ಕಾಯುವವನು ಜೀವವನ್ನು ಕಾಯುವನು; ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಎಚ್ಚರಿಕೆಯಿಂದ ಮಾತಾಡುವವನು ತನ್ನ ಜೀವವನ್ನು ಕಾಪಾಡಿಕೊಳ್ಳುವನು. ಯೋಚಿಸದೆ ಮಾತಾಡುವವನು ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:3
18 ತಿಳಿವುಗಳ ಹೋಲಿಕೆ  

ತನ್ನ ಬಾಯಿಯನ್ನೂ, ನಾಲಿಗೆಯನ್ನೂ ಕಾಯುವವನು, ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.


ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.


ಬುದ್ಧಿಹೀನನ ಬಾಯಿಯು ಅವನ ನಾಶನ; ಅವನ ತುಟಿಗಳು ಅವನ ಪ್ರಾಣಕ್ಕೆ ಪಾಶ.


“ನನ್ನ ನಾಲಿಗೆಯಿಂದ ಪಾಪಮಾಡದಂತೆ ಜಾಗರೂಕನಾಗಿರುವೆನು, ನನ್ನ ಮಾರ್ಗಗಳನ್ನು ಕಾಪಾಡಿಕೊಳ್ಳುವೆನು. ದುಷ್ಟರು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಹಾಕಿಕೊಳ್ಳುವೆನು,” ಎಂದು ತೀರ್ಮಾನಿಸಿಕೊಂಡೆನು.


ಅತಿಯಾದ ಮಾತುಗಳಿಂದ ಪಾಪವು ಕೊನೆಗೊಳ್ಳುವುದಿಲ್ಲ. ಆದರೆ ಜ್ಞಾನವಂತನು ತನ್ನ ನಾಲಿಗೆಯನ್ನು ತಡೆಯುವನು.


ಚಾಡಿಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ; ಆದಕಾರಣ ಹರಟೆ ಹೊಡೆಯುವವನ ಸಹವಾಸ ಮಾಡಬೇಡ.


ನಿಮ್ಮಲ್ಲಿ ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜಕವಾಗಿದೆ.


ದುಷ್ಟನು ತನ್ನ ತಪ್ಪು ಮಾತುಗಳಿಂದ ಬಲೆಗೆ ಬೀಳುವನು, ಆದರೆ ನೀತಿವಂತರು ಇಕ್ಕಟ್ಟಿನೊಳಗಿಂದ ತಪ್ಪಿಸಿಕೊಳ್ಳುವರು.


ನೀನು ಕೇಡಿನಿಂದ ನಿನ್ನ ನಾಲಿಗೆಯನ್ನು, ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ನಿಯಂತ್ರಿಸಿಕೋ.


ಯೆಹೋವ ದೇವರೇ, ನನ್ನ ಬಾಯಿಗೆ ಕಾವಲಿಡಿರಿ; ನನ್ನ ತುಟಿಗಳ ಕದವನ್ನು ಕಾಯಿರಿ;


ಜ್ಞಾನಿಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ವಿನಾಶವನ್ನು ಆಹ್ವಾನಿಸುತ್ತದೆ.


ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ; ಆದರೆ ಶ್ರಮಪಡುವವರ ಆಸೆಗಳು ಸಂಪೂರ್ಣವಾಗಿ ಈಡೇರುವವು.


ಸಂಸೋನನು ಅವಳಿಗೆ, “ಯಾವ ಕೆಲಸಕ್ಕೆ ಬಳಸದೆ ಇರುವ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ, ನಾನು ಬಲಹೀನನಾಗಿ, ಬೇರೆ ಮನುಷ್ಯನಂತಾಗುವೆನು,” ಎಂದನು.


ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ, ಅವಳಿಗೆ, “ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ಏಕೆಂದರೆ ನಾನು ನನ್ನ ತಾಯಿಯ ಗರ್ಭದಲ್ಲಿಂದ ದೇವರಿಗೆ ಪ್ರತಿಷ್ಠಿತನಾದ ನಾಜೀರನಾಗಿದ್ದೇನೆ. ನನ್ನ ತಲೆಯನ್ನು ಬೋಳಿಸಿದರೆ, ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವುದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು,” ಎಂದನು.


ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು; ಆದರೆ ಹರಟೆಯ ಮೂರ್ಖನು ಬೀಳುವನು.


ಬುದ್ಧಿಹೀನನ ಬಾಯಿಯಲ್ಲಿ ಗರ್ವದ ಅಂಕುರವಿದೆ, ಆದರೆ ಜ್ಞಾನವಂತರ ತುಟಿಗಳು ಅವರನ್ನು ಕಾಪಾಡುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು