Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:17 - ಕನ್ನಡ ಸಮಕಾಲಿಕ ಅನುವಾದ

17 ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ, ಜನರು ಕುಯುಕ್ತಿಯುಳ್ಳವನನ್ನು ಹಗೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮುಂಗೋಪಿಗೆ ಬುದ್ಧಿಮಟ್ಟುಂಟು; ವಿವೇಕಿಗಾದರೊ ಸಹನೆಯುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮುಂಗೋಪಿಯು ಬುದ್ಧಿಗೆಡುವನು; ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಮುಂಗೋಪಿಯು ಮೂಢಕಾರ್ಯಗಳನ್ನು ಮಾಡುವನು. ಕುತಂತ್ರಿಗಳನ್ನು ಜನರು ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:17
18 ತಿಳಿವುಗಳ ಹೋಲಿಕೆ  

ತಾಳ್ಮೆಯುಳ್ಳವನು ಬಹು ವಿವೇಕಿ, ಮುಂಗೋಪಿಯು ಮೂರ್ಖತನವನ್ನು ಎತ್ತಿಹಿಡಿಯುವನು.


ಕೋಪಿಷ್ಟನು ಜಗಳವನ್ನೆಬ್ಬಿಸುವನು, ಮುಂಗೋಪಿಯು ಅನೇಕ ಪಾಪಗಳನ್ನು ಮಾಡುತ್ತಾನೆ.


ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ನೀನು ಕೋಪಿಸಿಕೊಳ್ಳುವುದಕ್ಕೆ ಆತುರಪಡದಿರು, ಏಕೆಂದರೆ ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.


ಕೋಪಿಷ್ಟನು ವಿವಾದವನ್ನು ಎಬ್ಬಿಸುವನು. ಆದರೆ ತಾಳ್ಮೆಯಿಂದ ಇರುವವನು ಜಗಳವನ್ನು ಶಾಂತಗೊಳಿಸುವನು.


ಮುಂಗೊಪಿಯೊಂದಿಗೆ ಸ್ನೇಹ ಬೆಳೆಸಬೇಡ; ಸುಲಭವಾಗಿ ಕೋಪಗೊಳ್ಳುವವರೊಂದಿಗೆ ಸಹವಾಸ ಮಾಡಬೇಡ;


ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ, ತನ್ನ ಮನಸ್ಸನ್ನು ಆಳುವವನು, ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.


ಮೋಸಗಾರನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವನು ಬಡವರನ್ನು ಸುಳ್ಳು ಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.


ಮೂರ್ಖನ ಕೋಪವು ತಟ್ಟನೆ ರಟ್ಟಾಗುವುದು, ಆದರೆ ಜಾಣನು ಅವಮಾನವನ್ನು ನಿರ್ಲಕ್ಷಿಸುತ್ತಾನೆ.


ಒಳ್ಳೆಯವನು ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ, ಆದರೆ ಕುಯುಕ್ತಿ ಮಾಡುವವನನ್ನು ಅವರು ದುಷ್ಟನೆಂದು ಖಂಡಿಸುತ್ತಾರೆ.


ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ನುಗ್ಗಲು ತ್ವರೆಪಡುವ ಕಾಲುಗಳು,


ಮೊರ್ದೆಕೈ ಮತ್ತು ಅವನ ಜನರು ಯೆಹೂದ್ಯರೆಂದು ಹಾಮಾನನಿಗೆ ಗೊತ್ತಾದಾಗ ಮೊರ್ದೆಕೈಯನ್ನು ಮಾತ್ರ ಕೊಲ್ಲಬಾರದೆಂದು ಅವನಿಗೆ ತೋರಿತು. ಅದರ ಬದಲು ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನರಾದ ಯೆಹೂದ್ಯರನ್ನೆಲ್ಲಾ ಸಂಹರಿಸಲು ಮಾರ್ಗವನ್ನು ಹುಡುಕಿದನು.


ನಾನು ಹೊಳೆಗಳಲ್ಲಿ ಸ್ನಾನಮಾಡಿ ಶುದ್ಧನಾಗುವಂತೆ ದಮಸ್ಕದ ನದಿಗಳಾದ ಅಬಾನಾವೂ, ಪಾರ್ಪರೂ ಇಸ್ರಾಯೇಲಿನ ಸಮಸ್ತ ನೀರುಗಳಿಗಿಂತ ಉತ್ತಮವಾಗಿಲ್ಲವೋ?” ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.


ಜ್ಞಾನಿಯು ಯೆಹೋವ ದೇವರಿಗೆ ಭಯಪಟ್ಟು ಕೆಟ್ಟತನದಿಂದ ದೂರ ಹೋಗುವನು, ಆದರೆ ಬುದ್ಧಿಹೀನನು ಯೋಚಿಸದೆ ಆತ್ಮವಿಶ್ವಾಸದಿಂದ ನಡೆಯುವನು.


ಅರಿವಿಲ್ಲದವರು ಮೂರ್ಖತನಕ್ಕೆ ಬಾಧ್ಯರಾಗುತ್ತಾರೆ, ಆದರೆ ಜಾಣರು ಪರಿಜ್ಞಾನದಿಂದ ಆವರಿಸುತ್ತಾರೆ.


ಕಲಹವನ್ನು ತಡೆಯುವವನು, ಮಾನಕ್ಕೆ ಯೋಗ್ಯನು; ಆದರೆ ಬುದ್ಧಿಹೀನನು ಮಾತ್ರ ಜಗಳವಾಡಲು ಒತ್ತಾಯಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು