Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:32 - ಕನ್ನಡ ಸಮಕಾಲಿಕ ಅನುವಾದ

32 ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು; ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:32
29 ತಿಳಿವುಗಳ ಹೋಲಿಕೆ  

ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.


ನಮ್ಮ ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವುದು ಉತ್ತಮವೆಂದು ಆಶಿಸಿ, ಅದರಲ್ಲಿ ಭರವಸೆ ಉಳ್ಳವರಾಗಿರುತ್ತೇವೆ.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀವು ನನ್ನೊಂದಿಗಿರುವುದರಿಂದ ನಾನು ಕೇಡಿಗೆ ಹೆದರೆನು; ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ ನನ್ನನ್ನು ಸಂತೈಸುತ್ತವೆ.


ಪರಲೋಕದಿಂದ ಒಂದು ಧ್ವನಿಯು ನನಗೆ, “ಇಂದಿನಿಂದ ಕರ್ತರಲ್ಲಿ ವಿಶ್ವಾಸವುಳ್ಳವರು ಧನ್ಯರು ಎಂಬುದಾಗಿ ಬರೆ!” ಎಂದು ಹೇಳಿತು. ಅದಕ್ಕೆ ಪವಿತ್ರಾತ್ಮ ದೇವರು, “ಹೌದು, ಅವರ ಪ್ರಯಾಸಗಳು ತೀರಿದವು ಅವರಿಗೆ ವಿಶ್ರಾಂತಿಯಾಗುವುದು, ಅವರ ಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ!” ಎಂದು ಹೇಳುತ್ತಾರೆ.


“ಯೆಹೋವ ದೇವರೇ, ನಿಮ್ಮ ವಿಮೋಚನೆಗಾಗಿ ಕಾಯುತ್ತಿದ್ದೇನೆ.


ಮರಣದ ಶಿಕ್ಷೆಯನ್ನು ನಾವು ಅನುಭವಿಸುತ್ತೇವೋ ಎಂಬಂತೆ ನಮಗಾಯಿತು. ನಾವು ನಮ್ಮ ಮೇಲೆ ಭರವಸೆಯಿಡದೆ, ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸೆ ಇಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.


ಏಕೆಂದರೆ ನೀತಿವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡು ಬಂದಾಗ ಬೀಳುವನು.


ನಿರ್ದೋಷಿಯನ್ನು ಗಮನಿಸು; ಯಥಾರ್ಥನನ್ನು ನೋಡು; ಸಮಾಧಾನ ಹುಡುಕುವವರಿಗೆ ಒಳ್ಳೆಯ ಭವಿಷ್ಯವಿದೆ.


ದೇವರು ನನ್ನನ್ನು ಕೊಂದರೂ, ನಾನು ದೇವರ ಮೇಲೆ ನಿರೀಕ್ಷೆಯಿಂದಿರುವೆನು; ನಾನು ನಿಶ್ಚಯವಾಗಿ ನನ್ನ ನಡತೆಯ ಒಳ್ಳೆಯತನವನ್ನು ದೇವರ ಮುಂದೆ ಸ್ಥಾಪಿಸುವೆನು.


ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು.


ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ,


ನಾಶಕ್ಕೂ, ಕೋಪಾಗ್ನಿಗೂ ಪಾತ್ರೆಯಾಗಿರುವುದರ ಮೇಲೆ ದೇವರು ತಮ್ಮ ಕೋಪವನ್ನು ತೋರಿಸಿ ತಮ್ಮ ಸಾಮರ್ಥ್ಯವನ್ನು ತಿಳಿಯಪಡಿಸಬೇಕೆಂದಿದ್ದರೂ ಬಹು ಸಹನೆಯಿಂದ ತಾಳಿಕೊಂಡಿರಲು ಬಯಸಿದರೆ, ಯಾರು ಏನು ಮಾಡಬಹುದು?


ಆದ್ದರಿಂದ, ‘ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,’ ಎಂದು ನಾನು ನಿಮಗೆ ಹೇಳಿದೆನು. ಏಕೆಂದರೆ ನೀವು ನನ್ನನ್ನು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,” ಎಂದು ಹೇಳಿದರು.


ಯೇಸು ತಿರುಗಿ ಅವರಿಗೆ, “ನಾನು ಹೊರಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.


“ಸರ್ವೇಶ್ವರರಾದ ಕರ್ತದೇವರೇ, ನಿಮ್ಮ ವಾಗ್ದಾನದ ಪ್ರಕಾರ, ನಿಮ್ಮ ದಾಸನನ್ನು ಸಮಾಧಾನದಿಂದ ಈಗ ಕಳುಹಿಸಿರಿ.


ಆದ್ದರಿಂದ ಅವನಿಗೆ ವಿಪತ್ತು ಬೇಗ ಬರುವುದು; ಯಾವ ಪರಿಹಾರವಿಲ್ಲದೆ ಅವನು ತಟ್ಟನೆ ನಾಶವಾಗುವನು.


ಗಡಿಗೆಗಳು ಮುಳ್ಳಿನ ಬೆಂಕಿಯ ಶಾಖವನ್ನು ಇನ್ನೂ ಹಸಿಯಾಗಿ ಇಲ್ಲವೆ ಒಣಗಿರುವಾಗಲೇ, ಬಿರುಗಾಳಿ ಹಾರಿಸಿಬಿಡುವಂತೆ ಅವರಿಗೆ ಆಗಲಿ.


ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು.


ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ. ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ; ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.


ಬೆಳಕಿನಿಂದ ಅವನನ್ನು ಕತ್ತಲೆಗೆ ದಬ್ಬಲಾಗುವುದು; ಅವನು ಲೋಕದಿಂದ ಬಹಿಷ್ಕರಿಸಲಾಗುವನು.


ನಿಮ್ಮ ಆಲೋಚನೆಯಂತೆ ನನ್ನನ್ನು ನಡೆಸಿ, ತರುವಾಯ ಮಹಿಮೆಗೆ ನನ್ನನ್ನು ಸೇರಿಸುವಿರಿ.


ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆಯಾಗಿದೆ, ಆದರೆ ಮೂರ್ಖರಲ್ಲಿ ಜ್ಞಾನವು ಕಂಡುಬರುವುದಿಲ್ಲ.


ದುಷ್ಟನನ್ನು ಅವನ ಸ್ವಂತ ದ್ರೋಹಗಳೇ ಹಿಡಿಯುತ್ತವೆ; ತನ್ನ ಪಾಪಗಳ ಪಾಶಗಳೇ ಅವನನ್ನು ಬಂಧಿಸುತ್ತದೆ.


ನಿಷ್ಕಳಂಕರ ನೀತಿಯು ಅವರ ಮಾರ್ಗವನ್ನು ಸರಾಗ ಮಾಡುವುದು; ಆದರೆ ದುಷ್ಟರು ತಮ್ಮ ದುಷ್ಟತ್ವದಿಂದಲೇ ಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು