Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:9 - ಕನ್ನಡ ಸಮಕಾಲಿಕ ಅನುವಾದ

9 ಬುದ್ಧಿಹೀನರು ಪಾಪಪರಿಹಾರವನ್ನು ಅಪಹಾಸ್ಯ ಮಾಡುವರು, ಆದರೆ ನೀತಿವಂತರಿಗೆ ದಯೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವುದು, ಯಥಾರ್ಥವಂತರಲ್ಲಿ (ದೇವರ) ದಯೆಯಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪಾಪಪರಿಹಾರವನ್ನು ಪರಿಹಾಸ್ಯಮಾಡುತ್ತಾರೆ ಮೂರ್ಖರು; ಪಾಪಕ್ಷಮೆಯನ್ನು ಕೋರುತ್ತಾರೆ ಸತ್ಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವದು; ಯಥಾರ್ಥವಂತರಲ್ಲಿ [ದೇವರ] ದಯೆಯಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೂಢರಿಗೆ ಪ್ರಾಯಶ್ಚಿತ್ತವು ಹಾಸ್ಯಾಸ್ಪದವಾಗಿದೆ; ಯಥಾರ್ಥವಂತರು ಕ್ಷಮೆಗಾಗಿ ಶ್ರಮಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:9
15 ತಿಳಿವುಗಳ ಹೋಲಿಕೆ  

ಮೂರ್ಖನಿಗೆ ಕೇಡು ಮಾಡುವುದರಲ್ಲಿ ಆನಂದ; ಆದರೆ ತಿಳುವಳಿಕೆಯ ವ್ಯಕ್ತಿಯು ಜ್ಞಾನದಲ್ಲಿ ಸಂತೋಷಪಡುತ್ತಾನೆ.


“ಜಾರಸ್ತ್ರೀಯ ನಡತೆಯು ಹೀಗಿದೆ: ಅವಳು ತಿಂದು, ತನ್ನ ಬಾಯನ್ನು ಒರೆಸಿಕೊಂಡು ‘ನಾನು ಯಾವುದೇ ತಪ್ಪು ಮಾಡಿಲ್ಲ,’ ಎಂದು ಹೇಳುತ್ತಾಳೆ.


ಒಳ್ಳೆಯ ಪ್ರಜ್ಞೆ ಇರುವ ವ್ಯಕ್ತಿಯನ್ನು ಗೌರವಿಸಲಾಗುತ್ತದೆ; ಆದರೆ ವಿಶ್ವಾಸದ್ರೋಹಿಯ ಮಾರ್ಗವು ನಾಶಕರವಾಗಿದೆ.


“ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅಪೊಸ್ತಲರು ನಿಮಗೆ ಹೇಳಿದರು.


ಒಳ್ಳೆಯವನು ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ, ಆದರೆ ಕುಯುಕ್ತಿ ಮಾಡುವವನನ್ನು ಅವರು ದುಷ್ಟನೆಂದು ಖಂಡಿಸುತ್ತಾರೆ.


ಏಕೆಂದರೆ ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಯೆಹೋವ ದೇವರ ಕೃಪೆಯನ್ನು ಹೊಂದುವನು.


ಆಗ ದೇವರ ಮುಂದೆಯೂ ಮನುಷ್ಯರ ಮುಂದೆಯೂ ದಯೆಯನ್ನೂ, ಒಳ್ಳೆಯ ಹೆಸರನ್ನೂ ನೀನು ಪಡೆದುಕೊಳ್ಳುವೆ.


“ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ?


ಹಾಗಿರುವಾಗ, ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು, ದೇವರ ದೃಷ್ಟಿಯಲ್ಲಿ ಎಷ್ಟು ಅಲ್ಪನೂ ಅಶುದ್ಧನೂ ಆಗಿದ್ದಾನಲ್ಲವೇ?


“ ‘ಯಾರಾದರೂ ಒಂದು ಕುರಿಮರಿಯನ್ನು ತರುವುದಕ್ಕೆ ಅಶಕ್ತರಾಗಿದ್ದರೆ, ತಾವು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ, ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ಯೆಹೋವ ದೇವರಿಗೆ ತರಬೇಕು. ಒಂದನ್ನು ಪಾಪ ಪರಿಹಾರದ ಬಲಿಗಾಗಿ, ಮತ್ತೊಂದನ್ನು ದಹನಬಲಿಗಾಗಿ ತರಬೇಕು.


ದೇವರು ಗರ್ವಿಷ್ಠ ಪರಿಹಾಸ್ಯಗಾರರನ್ನು ಪರಿಹಾಸ್ಯ ಮಾಡುತ್ತಾರೆ; ದೀನರಿಗಾದರೋ ದೇವರು ಕೃಪೆಯನ್ನು ಕೊಡುತ್ತಾರೆ.


ವಕ್ರ ಹೃದಯವುಳ್ಳವರು ಯೆಹೋವ ದೇವರಿಗೆ ಅಸಹ್ಯವಾದವರು, ಆದರೆ, ಸನ್ಮಾರ್ಗದಲ್ಲಿ ಯಥಾರ್ಥವಾಗಿ ಇರುವವರಲ್ಲಿ ಅವರು ಆನಂದಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು