Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:13 - ಕನ್ನಡ ಸಮಕಾಲಿಕ ಅನುವಾದ

13 ಸಂತೋಷದ ಹೃದಯವು ಹರ್ಷವುಳ್ಳ ಮುಖಭಾವ ತೋರುವುದು. ಆದರೆ ನೊಂದ ಹೃದಯವು ಆತ್ಮಚೈತನ್ಯವನ್ನು ಕುಂದಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹರ್ಷ ಹೃದಯದಿಂದ ಹಸನ್ಮುಖ, ಮನೋವ್ಯಥೆಯಿಂದ ಆತ್ಮಭಂಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹರ್ಷಹೃದಯದಿಂದ ಮುಖ ಅರಳುವುದು; ಮನೋವ್ಯಥೆಯಿಂದ ಚೈತನ್ಯ ಕುಂದುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹರ್ಷಹೃದಯದಿಂದ ಹಸನ್ಮುಖ; ಮನೋವ್ಯಥೆಯಿಂದ ಆತ್ಮಭಂಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಂತೋಷವಾಗಿರುವವನ ಮುಖದಲ್ಲಿ ಆನಂದ ಎದ್ದುಕಾಣುವುದು. ದುಃಖಗೊಂಡಿರುವವನ ಆತ್ಮದಲ್ಲಿ ವ್ಯಥೆ ಎದ್ದುಕಾಣುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:13
10 ತಿಳಿವುಗಳ ಹೋಲಿಕೆ  

ಹರ್ಷಹೃದಯವು ಒಳ್ಳೆಯ ಔಷಧ; ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.


“ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ನೀವು ದೇವರನ್ನು ನಂಬಿರಿ; ನನ್ನನ್ನೂ ನಂಬಿರಿ.


ಮನುಷ್ಯನ ಆತ್ಮವು ಅಸ್ವಸ್ಥತೆಯನ್ನು ಸಹಿಸುವುದು; ಆದರೆ ಮುರಿದ ಆತ್ಮವನ್ನು ಸಹಿಸುವವರು ಯಾರು?


ಆತಂಕವು ಹೃದಯವನ್ನು ಕುಗ್ಗಿಸುವುದು, ಆದರೆ ಕನಿಕರದ ಮಾತು ಹುರಿದುಂಬಿಸುವುದು.


ಬಾಧಿತರ ದಿನಗಳೆಲ್ಲವೂ ದುಃಖಭರಿತ. ಆದರೆ ಸಂತೋಷ ಹೃದಯವುಳ್ಳವನಿಗೆ ನಿತ್ಯವೂ ಔತಣ.


ದೈವಿಕ ದುಃಖವು ಪಶ್ಚಾತ್ತಾಪವನ್ನು ತಂದು ರಕ್ಷಣೆಗೆ ನಡೆಸುತ್ತದೆ. ಆ ಪಶ್ಚಾತ್ತಾಪದಲ್ಲಿ ವಿಷಾಧವಿರುವುದಿಲ್ಲ. ಆದರೆ ಪ್ರಾಪಂಚಿಕ ದುಃಖವು ಮರಣಕ್ಕೆ ನಡೆಸುತ್ತದೆ.


ಈಗ ಅವನನ್ನು ನೀವು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ, ಅವನು ದುಃಖದಲ್ಲಿ ಮುಳುಗಿ ಹೋದಾನು.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ಆದಕಾರಣ ಅರಸನು ನನಗೆ, “ನಿನಗೆ ಕಾಯಿಲೆ ಇಲ್ಲದೆ ಇರುವಾಗ, ನಿನ್ನ ಮುಖವು ದುಃಖದಿಂದಿರುವುದೇನು? ನಿನಗೆ ರೋಗ ಏನೂ ಇಲ್ಲವಲ್ಲ? ಇದು ಮನೋವೇದನೆಯೇ ಹೊರತು ಬೇರೇನೂ ಅಲ್ಲ,” ಎಂದನು. ಆಗ ನಾನು ಬಹು ಭಯಪಟ್ಟು ಅರಸನಿಗೆ,


ಶಾಂತ ಹೃದಯವು ದೇಹಕ್ಕೆ ಜೀವ; ಆದರೆ ಮತ್ಸರವು ಎಲುಬುಗಳಿಗೆ ಕ್ಷಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು