Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:30 - ಕನ್ನಡ ಸಮಕಾಲಿಕ ಅನುವಾದ

30 ಹರ್ಷಚಿತ್ತದ ನೋಟವು ಹೃದಯಕ್ಕೆ ಸಂತೋಷವನ್ನು ತರುತ್ತದೆ. ಒಳ್ಳೆಯ ವಾರ್ತೆಯು ಎಲುಬುಗಳನ್ನು ಪುಷ್ಟಿಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಹಸನ್ಮುಖ ಹೃದಯಕ್ಕೆ ಆನಂದ, ಶುಭಸಮಾಚಾರ ದೇಹಕ್ಕೆ ಆರೋಗ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಹಸನ್ಮುಖ ಕಂಡಾಗ ಹೃದಯಕ್ಕೆ ಆನಂದ; ಶುಭಸಮಾಚಾರದಿಂದ ದೇಹಕ್ಕೆ ಉತ್ತೇಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಕಣ್ಣಿಗೆ ಬಿದ್ದ ಬೆಳಕು ಹೃದಯಕ್ಕೆ ಆನಂದ; ಕಿವಿಗೆ ಬಿದ್ದ ಒಳ್ಳೇ ಸುದ್ದಿ ಎಲುಬಿಗೆ ಪುಷ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಗುಮುಖವು ಜನರನ್ನು ಸಂತೋಷಗೊಳಿಸುವುದು; ಒಳ್ಳೆಯ ಸುದ್ದಿಯಿಂದ ಜನರ ಆರೋಗ್ಯ ಹೆಚ್ಚುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:30
14 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನಿನ್ನನ್ನು ನಿತ್ಯವೂ ನಡೆಸುತ್ತಾ, ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ, ನಿನ್ನ ಎಲುಬುಗಳನ್ನು ಬಲಪಡಿಸುವರು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಇರುವೆ. ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ


ಬಾಯಾರಿದವನಿಗೆ ತಣ್ಣೀರು ಹೇಗೋ ದೂರದೇಶದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.


ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.


ಬೆಳಕು ಹಿತಕರ. ಸೂರ್ಯನ ಕಾಂತಿ ಕಣ್ಣುಗಳಿಗೆ ಮೆಚ್ಚಿಕೆ.


ಹರ್ಷಹೃದಯವು ಒಳ್ಳೆಯ ಔಷಧ; ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.


ನೀತಿವಂತರ ಬೆಳಕು ಪ್ರಕಾಶಮಾನವಾಗಿ ಹೊಳೆಯುತ್ತದೆ; ದುಷ್ಟರ ದೀಪವು ಆರಿಹೋಗುವುದು.


ನಿಮ್ಮ ಉತ್ಸಾಹ ಧ್ವನಿಯನ್ನು ಕೇಳಿದ ಜನರು ಧನ್ಯರು. ಯೆಹೋವ ದೇವರೇ, ನಿಮ್ಮ ಸನ್ನಿಧಿಯ ಬೆಳಕಿನಲ್ಲಿ ನಡೆಯುವವರು ಧನ್ಯರು.


“ಈಗ ನಮ್ಮ ಯೆಹೋವ ದೇವರೇ, ಸ್ವಲ್ಪ ಹೊತ್ತು ನಮಗೆ ದಯೆತೋರಿ ನಮ್ಮ ದಾಸತ್ವದಿಂದ ನಮಗೆ ಬಿಡುಗಡೆ ಕೊಟ್ಟಿದ್ದೀರಿ. ನಮ್ಮ ಕಣ್ಣುಗಳನ್ನು ಬೆಳಗಿಸಿ, ತಮ್ಮ ಪರಿಶುದ್ಧ ಸ್ಥಾನದಲ್ಲಿ ನೆಲೆಗೊಳಿಸುವಂತೆ ಮಾಡಿದ್ದೀರಿ


ನಿನ್ನ ದೇಹಕ್ಕೆ ಅದು ಆರೋಗ್ಯವನ್ನು ತರುವುದು; ನಿನ್ನ ಎಲುಬುಗಳಿಗೆ ಅದು ಪೋಷಣೆಯನ್ನೂ ತರುವುದು.


ಯೆಹೋವ ದೇವರು ದುಷ್ಟರಿಗೆ ದೂರ; ಆದರೆ ನೀತಿವಂತರ ಪ್ರಾರ್ಥನೆಯನ್ನು ಅವರು ಕೇಳುತ್ತಾರೆ.


ಜೀವದ ಗದರಿಕೆಗೆ ಕಿವಿಗೊಡುವವನು, ಜ್ಞಾನಿಗಳ ನಡುವೆ ವಾಸಿಸುವವನಾಗಿದ್ದಾನೆ.


ಆತಂಕವು ಹೃದಯವನ್ನು ಕುಗ್ಗಿಸುವುದು, ಆದರೆ ಕನಿಕರದ ಮಾತು ಹುರಿದುಂಬಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು