ಜ್ಞಾನೋಕ್ತಿಗಳು 15:9 - ಕನ್ನಡ ಸಮಕಾಲಿಕ ಅನುವಾದ9 ದುಷ್ಟರ ಮಾರ್ಗವು ಯೆಹೋವ ದೇವರಿಗೆ ಅಸಹ್ಯ. ಆದರೆ ನೀತಿಯನ್ನು ಹಿಂಬಾಲಿಸುವವನನ್ನು ಅವರು ಪ್ರೀತಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ, ಧರ್ಮಾಸಕ್ತನು ಆತನಿಗೆ ಪ್ರಿಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದುರುಳರ ನಡತೆ ಸರ್ವೇಶ್ವರನಿಗೆ ಹೇಯ; ನೀತಿವಂತರ ನಡತೆ ಆತನಿಗೆ ಸುಪ್ರಿಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ; ಧರ್ಮಾಸಕ್ತನು ಆತನಿಗೆ ಪ್ರಿಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದುಷ್ಟರ ಜೀವಿತವು ಯೆಹೋವನಿಗೆ ಅಸಹ್ಯ. ಒಳ್ಳೆಯದನ್ನು ಮಾಡಲಿಚ್ಛಿಸುವವರು ಯೆಹೋವನಿಗೆ ಪ್ರಿಯ. ಅಧ್ಯಾಯವನ್ನು ನೋಡಿ |
ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು.