Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:10 - ಕನ್ನಡ ಸಮಕಾಲಿಕ ಅನುವಾದ

10 ಅರಸನ ತುಟಿಗಳಲ್ಲಿ ದೈವೋಕ್ತಿ. ನ್ಯಾಯತೀರ್ಪಿನಲ್ಲಿ ಅವನ ಬಾಯಿಯು ದೋಷ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ರಾಜನ ತುಟಿಗಳಲ್ಲಿ ದೈವೋಕ್ತಿ, ನ್ಯಾಯತೀರಿಸುವುದರಲ್ಲಿ ಅವನ ಬಾಯಿ ತಪ್ಪಿಹೋಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೈವೋಕ್ತಿ ಹೊರಡುವುದು ಅರಸನ ಬಾಯಿಂದ; ತಪ್ಪುಮಾಡದು ಅವನ ಬಾಯಿ ತೀರ್ಪು ನೀಡುವಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ರಾಜನ ತುಟಿಗಳಲ್ಲಿ ದೈವೋಕ್ತಿ; ನ್ಯಾಯತೀರಿಸುವದರಲ್ಲಿ ಅವನ ಬಾಯಿ ತಪ್ಪಿಹೋಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ರಾಜನ ಮಾತು ದೇವರಿಂದ ಬಂದ ಸಂದೇಶದಂತಿದೆ. ಅವನ ತೀರ್ಮಾನ ಯಾವಾಗಲೂ ನ್ಯಾಯವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:10
17 ತಿಳಿವುಗಳ ಹೋಲಿಕೆ  

ಆಗ ಯೋಸೇಫನು ಅವರಿಗೆ, “ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದನು.


ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ,’ ಎಂದು ಅವರಿಗೆ ಹೇಳು,” ಎಂದನು.


ನ್ಯಾಯವನ್ನು ಕಹಿಯಾಗಿ ತಿರುಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ.


ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡುವುದಕ್ಕೆ ಸುಳ್ಳು ಪ್ರಮಾಣವನ್ನು ಮಾಡುತ್ತಾರೆ. ಆದ್ದರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.


ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು.


ಕುದುರೆಗಳು ಬಂಡೆಯ ಮೇಲೆ ಓಡುವುದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷವನ್ನಾಗಿ, ನೀತಿ ಫಲವನ್ನು ಕಹಿಯನ್ನಾಗಿ ಬದಲಾಯಿಸಿದ್ದೀರಿ.


ನ್ಯಾಯ ಪ್ರಿಯ ರಾಜರೇ, ನೀವು ನೀತಿಯನ್ನು ಸ್ಥಿರಪಡಿಸುತ್ತೀರಿ. ನ್ಯಾಯವನ್ನೂ ನೀತಿಯನ್ನೂ ಯಾಕೋಬ್ಯರಲ್ಲಿ ನೀವು ಮನದಟ್ಟಾಗಿಸಿರುವಿರಿ.


ಆದರೆ ಅವನು ಬಲ ಹೊಂದಿದ ಮೇಲೆ ಅವನ ಗರ್ವವು ನಾಶಕ್ಕೆ ನಡೆಸಿತು. ಅವನು ಧೂಪಪೀಠದ ಮೇಲೆ ಧೂಪಸುಡುವುದಕ್ಕೂ, ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದನು.


ಏಕೆಂದರೆ ಅರಸನು ಕೇಳಿ ನನ್ನನ್ನೂ, ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕೆಂದಿರುವ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು,’ ಎಂದುಕೊಂಡೆನು.


ನ್ಯಾಯದಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ, ಆದರೆ ಲಂಚಕೋರ ಅಧಿಕಾರಿ ದೇಶವನ್ನು ಕೆಡವಿ ಹಾಕುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು