Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:11 - ಕನ್ನಡ ಸಮಕಾಲಿಕ ಅನುವಾದ

11 ನ್ಯಾಯದ ತೂಕವೂ ತಕ್ಕಡಿಯೂ ಯೆಹೋವ ದೇವರದೇ. ಚೀಲದ ತೂಕಗಳು ಅವರ ಕೈಕೆಲಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನ್ಯಾಯದ ಅಳತೆ ಮತ್ತು ತಕ್ಕಡಿಗಳು ಯೆಹೋವನ ಏರ್ಪಾಡು, ಚೀಲದಲ್ಲಿನ ತೂಕದಕಲ್ಲುಗಳೆಲ್ಲಾ ಆತನ ಕೈಕೆಲಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನ್ಯಾಯದ ತ್ರಾಸುತಕ್ಕಡಿಗಳೆಲ್ಲ ಸರ್ವೇಶ್ವರನ ಏರ್ಪಾಡು; ಚೀಲದ ಕಲ್ಲುತೂಕಗಳೆಲ್ಲ ಆತನ ಕೈಕೆಲಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನ್ಯಾಯದ ತ್ರಾಸುತಕ್ಕಡಿಗಳು ಯೆಹೋವನ ಏರ್ಪಾಡು; ಕಟ್ಲೆಚೀಲದ ಕಲ್ಲುಗಳೆಲ್ಲಾ ಆತನ ಕೈಕೆಲಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಲ್ಲಾ ನ್ಯಾಯವಾದ ಅಳತೆಮಾಪಕಗಳು ಮತ್ತು ತಕ್ಕಡಿಗಳು ಯೆಹೋವನಿಗೆ ಇಷ್ಟ. ನ್ಯಾಯವಾದ ಒಪ್ಪಂದವು ಆತನಿಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:11
9 ತಿಳಿವುಗಳ ಹೋಲಿಕೆ  

ಮೋಸದ ತಕ್ಕಡಿ ಯೆಹೋವ ದೇವರಿಗೆ ಅಸಹ್ಯವಾಗಿದೆ; ಆದರೆ ನ್ಯಾಯದ ತೂಕ ಅವರಿಗೆ ಮೆಚ್ಚುಗೆ.


ಮೋಸದ ತೂಕಗಳೂ, ಮೋಸದ ಅಳತೆಗಳೂ ಇವೆರಡೂ ಯೆಹೋವ ದೇವರಿಗೆ ಅಸಹ್ಯ.


ಅವನು ವ್ಯಾಪಾರಿಯಾಗಿದ್ದು, ಅವನ ಕೈಯಲ್ಲಿ ಮೋಸದ ತಕ್ಕಡಿ ಇದೆ. ಇತರರಿಂದ ಕಸಿದುಕೊಳ್ಳಬೇಕೆಂಬುದೇ ಅವನ ದುರಾಶೆ.


ನ್ಯಾಯವಾದ ತಕ್ಕಡಿಯೂ ನ್ಯಾಯವಾದ ಎಫಾವೂ ನ್ಯಾಯವಾದ ಬಾತ್ ಅಳತೆಯೂ ನಿಮಗಿರಬೇಕು.


ನಾನು ದುಷ್ಟತ್ವದ ತಕ್ಕಡಿಗಳುಳ್ಳವರನ್ನು ಮೋಸವಾದ ಕಲ್ಲುಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ?


ನೀವು ಹೇಳುವುದೇನೆಂದರೆ, “ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಯಾವಾಗ ಕೊನೆಗೊಳ್ಳುತ್ತದೆ? ಗೋಧಿಯನ್ನು ಮಾರುವ ಹಾಗೆ ಸಬ್ಬತ್ ದಿನವು ಯಾವಾಗ ಮುಗಿಯುವುದು? ಕೊಳಗವನ್ನು ಚಿಕ್ಕದಾಗಿಯೂ ತೊಲಗಳನ್ನು ದೊಡ್ಡದಾಗಿಯೂ, ಕಳ್ಳತಕ್ಕಡಿಗಳನ್ನು ಮೋಸಕ್ಕಾಗಿಯೂ ಮಾಡೋಣವೆಂದೂ,


ವ್ಯತ್ಯಾಸದ ತೂಕಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; ಅಪ್ರಾಮಾಣಿಕ ತಕ್ಕಡಿಗಳು ಅವರನ್ನು ಮೆಚ್ಚಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು