Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:12 - ಕನ್ನಡ ಸಮಕಾಲಿಕ ಅನುವಾದ

12 ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು. ಏಕೆಂದರೆ ನೀತಿಯಿಂದ ಸಿಂಹಾಸನವು ಸ್ಥಾಪಿಸಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ರಾಜರು ಸಿಂಹಾಸನಕ್ಕೆ ಧರ್ಮವೇ ಆಧಾರವೆಂದು ತಿಳಿದು, ಅಧರ್ಮವನ್ನಾಚರಿಸಲು ಅಸಹ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ರಾಜರಲ್ಲಿ ದುಷ್ಟಕಾರ್ಯ ಖಂಡನೀಯ; ಸದಾಚಾರ ಸಿಂಹಾಸನಕ್ಕೆ ನಿಜ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ರಾಜರು ಸಿಂಹಾಸನಕ್ಕೆ ಧರ್ಮವೇ ಆಧಾರವೆಂದು ತಿಳಿದು ಅಧರ್ಮವನ್ನಾಚರಿಸಲು ಅಸಹ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ರಾಜನು ಕೆಟ್ಟದ್ದನ್ನು ಸಹಿಸಲಾರನು; ಯಾಕೆಂದರೆ ಒಳ್ಳೆಯದರಿಂದಲೇ ಅವನ ರಾಜ್ಯಕ್ಕೆ ಬಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:12
11 ತಿಳಿವುಗಳ ಹೋಲಿಕೆ  

ಅರಸನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ, ಆಗ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವುದು.


ದಂಡನೆಗೆ ಯೋಗ್ಯವಾದದ್ದನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳಿಗೆ ಗುರಿಯಾಗುವನು. ಯಾವನಿಗೆ ಹೆಚ್ಚು ಕೊಡಲಾಗಿದೆಯೋ, ಅವನಿಂದ ಹೆಚ್ಚು ಕೇಳಲಾಗುವುದು; ಯಾವನಿಗೆ ಹೆಚ್ಚಾಗಿ ಒಪ್ಪಿಸಿರುವುದೋ, ಅವನಿಂದ ಹೆಚ್ಚಾಗಿಯೇ ಕೇಳಲಾಗುವುದು.”


ಅರಸನು ಬಡವರಿಗೆ ಪಕ್ಷಪಾತವಿಲ್ಲದೆ ನ್ಯಾಯತೀರಿಸಿದರೆ, ಅವನ ಸಿಂಹಾಸನವು ಎಂದೆಂದಿಗೂ ಸ್ಥಿರಗೊಳ್ಳುವುದು.


ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ ಪ್ರಾರ್ಥನೆಯು ದೇವರಿಗೆ ಅಸಹ್ಯ.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ.


ಸಲಹೆಯಿಂದ ಯೋಜನೆಗಳು ನೆರವೆರುವವು; ಜ್ಞಾನಿಯ ಸಲಹೆಯಿಲ್ಲದೆ ಯುದ್ಧಕ್ಕೆ ಹೋಗಬೇಡಿ.


ನ್ಯಾಯ ಪ್ರಿಯ ರಾಜರೇ, ನೀವು ನೀತಿಯನ್ನು ಸ್ಥಿರಪಡಿಸುತ್ತೀರಿ. ನ್ಯಾಯವನ್ನೂ ನೀತಿಯನ್ನೂ ಯಾಕೋಬ್ಯರಲ್ಲಿ ನೀವು ಮನದಟ್ಟಾಗಿಸಿರುವಿರಿ.


ಅಂಥ ಅನ್ಯಾಯ ಮಾಡುವವರೆಲ್ಲರೂ ನಿನ್ನ ದೇವರಾದ ಯೆಹೋವ ದೇವರಿಗೆ ಅಸಹ್ಯ.


ನೀತಿಯ ತುಟಿಗಳಲ್ಲಿ ಅರಸರು ಆನಂದಿಸುತ್ತಾರೆ, ಯಥಾರ್ಥವಾದಿಯನ್ನು ಅವರು ಪ್ರೀತಿಸುತ್ತಾರೆ.


ಆದ್ದರಿಂದ ಯೆಹೋವ ದೇವರು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದರು. ಯೆಹೂದವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟದ್ದರಿಂದ, ಅವನಿಗೆ ಐಶ್ವರ್ಯವೂ, ಘನತೆಯೂ ಅಧಿಕವಾಯಿತು.


ನ್ಯಾಯದಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ, ಆದರೆ ಲಂಚಕೋರ ಅಧಿಕಾರಿ ದೇಶವನ್ನು ಕೆಡವಿ ಹಾಕುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು