Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:14 - ಕನ್ನಡ ಸಮಕಾಲಿಕ ಅನುವಾದ

14 ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ, ಆದರೆ ಜ್ಞಾನಿಯು ಅದನ್ನು ಶಮನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ರಾಜನ ಕೋಪ ಮೃತ್ಯುವಿನ ದೂತ, ಜಾಣನು ಅದನ್ನು ಶಮನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಭೂಪನ ಕೋಪ ಮೃತ್ಯುವಿನ ದೂತ; ಅದನ್ನು ಶಮನಪಡಿಸಲು ಜಾಣನು ಶಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಭೂಪನ ಕೋಪ ಮೃತ್ಯುವಿನ ದೂತ; ಜಾಣನು ಅದನ್ನು ಶಮನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ರಾಜನು ಕೋಪದಿಂದಿರುವಾಗ ಯಾರನ್ನಾದರೂ ಕೊಂದರೂ ಕೊಲ್ಲಬಹುದು. ಆದರೆ ಜ್ಞಾನಿಯು ಆತನ ಕೋಪವನ್ನು ಶಮನಗೊಳಿಸಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:14
18 ತಿಳಿವುಗಳ ಹೋಲಿಕೆ  

ಅರಸನ ಭಯವು ಸಿಂಹದ ಘರ್ಜನೆಯಂತಿದೆ; ಅವನ ಕೋಪವನ್ನೆಬ್ಬಿಸುವವರು, ತಮ್ಮ ಪ್ರಾಣಕ್ಕೆ ಅಪಾಯ ತಂದುಕೊಳ್ಳುವರು.


ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.


ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ.


ಅವನು ಟೈರ್ ಮತ್ತು ಸೀದೋನಿನ ಜನರೊಂದಿಗೆ ಬಹು ಕೋಪವುಳ್ಳವನಾಗಿದ್ದನು. ಈಗ ಅವರೆಲ್ಲರೂ ಒಂದಾಗಿ ಅವನ ಬಳಿ ಬಂದು ಅರಸನ ನಂಬಿಗಸ್ತ ಸೇವಕನಾದ ಬ್ಲಾಸ್ತ ಎಂಬುವನ ಬೆಂಬಲವನ್ನು ಪಡೆದುಕೊಂಡು, ಸಂಧಾನ ಮಾಡಿಕೊಳ್ಳಲು ಅರಸನನ್ನು ಕೇಳಿಕೊಂಡರು. ಏಕೆಂದರೆ ಅವರ ಆಹಾರ ಧಾನ್ಯಗಳು ಅರಸನ ಸೀಮೆಯಿಂದ ಬರುತ್ತಿದ್ದವು.


ಕೂಡಲೇ ಅರಸನು ಯೋಹಾನನ ತಲೆಯನ್ನು ತರಬೇಕೆಂದು ಒಬ್ಬ ಕಾವಲುಗಾರನಿಗೆ ಅಪ್ಪಣೆಕೊಟ್ಟು ಕಳುಹಿಸಿದನು. ಅವನು ಹೋಗಿ ಸೆರೆಮನೆಯಲ್ಲಿದ್ದ ಯೋಹಾನನ ಶಿರಚ್ಛೇದನ ಮಾಡಿದನು.


ಅಧಿಕಾರಿಯು ನಿನಗೆ ವಿರುದ್ಧವಾಗಿ ಸಿಟ್ಟುಗೊಂಡರೆ, ನಿನ್ನ ಉದ್ಯೋಗವನ್ನು ಬಿಟ್ಟುಬಿಡಬೇಡ. ಏಕೆಂದರೆ ತಾಳ್ಮೆಯು ದೊಡ್ಡ ಅಪರಾಧಗಳನ್ನು ಶಾಂತಪಡಿಸುತ್ತದೆ.


ತಿರುಗಿ ಬೀಳುವವನು ಕೆಟ್ಟದ್ದಕ್ಕೇ ತವಕಪಡುತ್ತಾನೆ; ಆದಕಾರಣ ಮರಣ ದೂತರನ್ನು ಅವನ ವಿರುದ್ಧ ಕಳುಹಿಸಲಾಗುವದು.


ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ, ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿಕೊಂಡು,


ಕೋಪಿಷ್ಟನು ವಿವಾದವನ್ನು ಎಬ್ಬಿಸುವನು. ಆದರೆ ತಾಳ್ಮೆಯಿಂದ ಇರುವವನು ಜಗಳವನ್ನು ಶಾಂತಗೊಳಿಸುವನು.


ನೀತಿಯ ತುಟಿಗಳಲ್ಲಿ ಅರಸರು ಆನಂದಿಸುತ್ತಾರೆ, ಯಥಾರ್ಥವಾದಿಯನ್ನು ಅವರು ಪ್ರೀತಿಸುತ್ತಾರೆ.


ಪ್ರಕಾಶಮಾನವಾದ ಅರಸನ ಮುಖದಲ್ಲಿ ಜೀವ, ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.


ಪರಿಹಾಸ್ಯಗಾರರು ಪಟ್ಟಣದಲ್ಲಿ ಗಲಾಟೆ ಎಬ್ಬಿಸುತ್ತಾರೆ. ಆದರೆ ಜ್ಞಾನಿಗಳು ಕೋಪವನ್ನು ಆರಿಸುವರು.


ಅರಸನು ಕೋಪಗೊಂಡು ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟು, ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು. ಏಕೆಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ಅವನಿಗೆ ತಿಳಿದಿತ್ತು.


ಅನೇಕರು ಅಧಿಕಾರಿಯ ದಯೆಯನ್ನು ಹುಡುಕುತ್ತಾರೆ. ಆದರೆ ಯೆಹೋವ ದೇವರಿಂದಲೇ ಪ್ರತಿಯೊಬ್ಬರಿಗೂ ನ್ಯಾಯ ದೊರಕುತ್ತದೆ.


ಆಗ ದಾನಿಯೇಲನು ಅರಮನೆಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ, ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು