Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:33 - ಕನ್ನಡ ಸಮಕಾಲಿಕ ಅನುವಾದ

33 ಉಡಿಯಲ್ಲಿ ಚೀಟು ಹಾಕಬಹುದು, ಆದರೆ ಪ್ರತಿ ತೀರ್ಪು ಯೆಹೋವ ದೇವರದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಮಡಲಿನಲ್ಲಿ ಚೀಟು ಹಾಕಬಹುದು, ಅದರ ತೀರ್ಪು ಯೆಹೋವನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅದೃಷ್ಟದ ಚೀಟನ್ನು ಕುಲುಕಿ ಮಡಲಿಗೆ ಹಾಕಬಹುದು; ಆದರೆ ತೀರ್ಪು ಸರ್ವೇಶ್ವರನ ಕೈಯಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಉಡಿಯಲ್ಲಿ ಚೀಟು ಹಾಕಬಹುದು; ಅದರ ತೀರ್ಪು ಯೆಹೋವನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಜನರು ಚೀಟುಹಾಕಿ ನಿರ್ಧಾರ ಮಾಡಿದರೂ ಆ ನಿರ್ಧಾರಗಳು ಬರುವುದು ಯೆಹೋವನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:33
15 ತಿಳಿವುಗಳ ಹೋಲಿಕೆ  

ಚೀಟು ಹಾಕುವುದರಿಂದ ವ್ಯಾಜ್ಯಶಮನ; ಬಲಿಷ್ಠ ಪ್ರತಿವಾದಿಗಳ ವಿವಾದಗಳನ್ನು ಸಹ ಬಗೆಹರಿಸುತ್ತದೆ.


ಅನಂತರ ಅವರು ಚೀಟು ಹಾಕಲು, ಅದು ಮತ್ತೀಯನ ಪಾಲಿಗೆ ಬಂದಿತು; ಆದ್ದರಿಂದ ಅವನು ಹನ್ನೊಂದು ಜನ ಅಪೊಸ್ತಲರೊಂದಿಗೆ ಸೇರಿದನು.


ಆಗ ನಾವಿಕರು ಒಬ್ಬರಿಗೊಬ್ಬರು, “ಬನ್ನಿ, ಚೀಟುಗಳನ್ನು ಹಾಕೋಣ. ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ,” ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟುಗಳನ್ನು ಹಾಕಿದಾಗ, ಯೋನನ ಮೇಲೆ ಚೀಟು ಬಿತ್ತು.


ಅನೇಕರು ಅಧಿಕಾರಿಯ ದಯೆಯನ್ನು ಹುಡುಕುತ್ತಾರೆ. ಆದರೆ ಯೆಹೋವ ದೇವರಿಂದಲೇ ಪ್ರತಿಯೊಬ್ಬರಿಗೂ ನ್ಯಾಯ ದೊರಕುತ್ತದೆ.


ಈಗ ಜನರ ನಾಯಕರು ಯೆರೂಸಲೇಮಿನಲ್ಲಿ ನೆಲೆಸಿದರು. ಉಳಿದ ಜನರೊಳಗೆ ಹತ್ತು ಮಂದಿಯಲ್ಲಿ ಒಂಬತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಹತ್ತರಲ್ಲೊಬ್ಬರು ಪವಿತ್ರ ನಗರವಾದ ಯೆರೂಸಲೇಮಿನಲ್ಲಿ ಬಂದು ವಾಸಿಸಲು ಚೀಟುಹಾಕಿದರು.


ಆಗ ಯೆಹೋಶುವನು ಅವರಿಗೆ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ಚೀಟುಗಳನ್ನು ಹಾಕಿದನು. ಅಲ್ಲಿ ಯೆಹೋಶುವನು ಇಸ್ರಾಯೇಲರಿಗೆ ನಾಡನ್ನು ಅವರ ಗೋತ್ರಗಳ ಪ್ರಕಾರ ಪಾಲುಗಳನ್ನು ಹಂಚಿಕೊಟ್ಟನು.


ನೀವು ಅದನ್ನು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೆಹೂದವು, ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲೆಸಬೇಕು.


“ ‘ಆದ್ದರಿಂದ ಬೆಳಿಗ್ಗೆ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಯೆಹೋವ ದೇವರು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರವಾಗಿಯೂ ಯೆಹೋವ ದೇವರು ಹಿಡಿಯುವ ಕುಟುಂಬವು ಮನೆಮನೆಯಾಗಿಯೂ ಯೆಹೋವ ದೇವರು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.


ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಅವರಿಗೆ, ‘ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು,’ ಎಂದು ಹೇಳಿದಿರಿ. ಆದ್ದರಿಂದ ಈಗ ಯೆಹೋವ ದೇವರ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ, ನಿಮ್ಮ ಕುಲಗಳ ಪ್ರಕಾರವಾಗಿಯೂ ಬನ್ನಿರಿ,” ಎಂದನು.


ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ, ತನ್ನ ಮನಸ್ಸನ್ನು ಆಳುವವನು, ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.


ಬಾಬಿಲೋನಿನ ಅರಸನು, ಮಾರ್ಗವು ಒಡೆಯುವ ಸ್ಥಳದಲ್ಲಿ ಶಕುನವನ್ನು ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿದನು; ಮೂರ್ತಿಗಳ ಹತ್ತಿರ ವಿಚಾರಿಸಿದನು; ಅವನು ಹತ್ಯೆ ಮಾಡಿದ ಪ್ರಾಣಿಯ ಯಕೃತ್ತನ್ನು ಪರೀಕ್ಷಿಸುತ್ತಾರೆ.


ಆರೋನನು ಆ ಎರಡು ಹೋತಗಳಿಗಾಗಿ ಚೀಟುಹಾಕಬೇಕು. ಒಂದು ಚೀಟು ಯೆಹೋವ ದೇವರಿಗೋಸ್ಕರ, ಮತ್ತೊಂದು ಚೀಟು ಬಲಿಪಶುವಿಗೋಸ್ಕರ.


ಈಗ ನಾವು ಗಿಬೆಯಕ್ಕೆ ಮಾಡುವುದು ಇದೇ. ಅದಕ್ಕೆ ವಿರೋಧವಾಗಿ ಚೀಟುಗಳು ಬಿದ್ದ ಪ್ರಕಾರ ಹೋಗೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು