Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:6 - ಕನ್ನಡ ಸಮಕಾಲಿಕ ಅನುವಾದ

6 ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪ್ರೀತಿ ಸತ್ಯತೆಗಳಿಂದ ಪಾಪನಿವಾರಣೆ; ಸರ್ವೇಶ್ವರನ ಭಯಭಕ್ತಿಯಿಂದ ಹಾನಿ ನಿವಾರಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕೃಪಾಸತ್ಯತೆಗಳಿಂದ ಪಾಪನಿವಾರಣೆ; ಯೆಹೋವನ ಭಯಭಕ್ತಿಯಿಂದ ಹಾನಿ ನಿವಾರಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪ್ರೀತಿ ಮತ್ತು ನಂಬಿಗಸ್ತಿಕೆಗಳು ದೋಷಕ್ಕೆ ಪ್ರಾಯಶ್ಚಿತ್ತವಾಗಿವೆ. ಯೆಹೋವನಲ್ಲಿ ಭಯಭಕ್ತಿಯಿಂದಿರಿ, ಆಗ ನೀವು ದುಷ್ಟತನದಿಂದ ದೂರವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:6
27 ತಿಳಿವುಗಳ ಹೋಲಿಕೆ  

ಜ್ಞಾನಿಯು ಯೆಹೋವ ದೇವರಿಗೆ ಭಯಪಟ್ಟು ಕೆಟ್ಟತನದಿಂದ ದೂರ ಹೋಗುವನು, ಆದರೆ ಬುದ್ಧಿಹೀನನು ಯೋಚಿಸದೆ ಆತ್ಮವಿಶ್ವಾಸದಿಂದ ನಡೆಯುವನು.


ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.


ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


ನೀವು ನಿಮ್ಮೊಳಗೆ ಅಂಟಿಕೊಂಡಿರುವವುಗಳನ್ನು ಬಡವರಿಗೆ ದಾನ ಮಾಡಿಬಿಡಿರಿ, ಆಗ ನಿಮಗೆ ಎಲ್ಲವೂ ಶುದ್ಧವಾಗಿರುವುವು.


ಯೆಹೋವ ದೇವರ ಭಯವು ಜೀವದ ಬುಗ್ಗೆಯಾಗಿದೆ. ಅದು ಮನುಷ್ಯನನ್ನು ಮರಣದ ಪಾಶಗಳಿಂದ ತಿರುಗಿಸುತ್ತದೆ.


ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; ಗರ್ವ, ಅಹಂಕಾರ, ಕೆಟ್ಟನಡವಳಿಕೆ, ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ.


ಪ್ರೀತಿಯೂ ನಂಬಿಗಸ್ತಿಕೆಯೂ ಅರಸನನ್ನು ಕಾಯುತ್ತವೆ; ಪ್ರೀತಿಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.


ದೇವರು ಅವರಿಗೂ ನಮಗೂ ಮಧ್ಯದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡದೆ, ವಿಶ್ವಾಸದ ಮೂಲಕ ಅವರ ಹೃದಯಗಳನ್ನು ಶುದ್ಧೀಕರಿಸಿದರು.


ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ.


ನಾನು ಅವರಿಗೆ, “ನೀವು ಮಾಡುವುದು ಒಳ್ಳೆಯದಲ್ಲ. ಇತರ ದೇಶದವರಾದ ನಮ್ಮ ಶತ್ರುಗಳ ನಿಂದೆಗೆ ಗುರಿಯಾಗದಂತೆ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲವೇ.


ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.


ಇದಲ್ಲದೆ ಕ್ರಿಸ್ತನ ಭಯಭಕ್ತಿಯಲ್ಲಿ ಒಬ್ಬರಿಗೊಬ್ಬರು ಅಧೀನರಾಗಿ ನಡೆದುಕೊಳ್ಳಿರಿ.


ನನ್ನಲ್ಲಿದ್ದು ಫಲವನ್ನು ಕೊಡದ ಪ್ರತಿಯೊಂದು ಕವಲುಬಳ್ಳಿಯನ್ನು ತಂದೆ ಮೇಲಕ್ಕೆ ಎತ್ತಿಡುವರು. ಆದರೆ ಫಲಕೊಡುವ ಪ್ರತಿಯೊಂದು ಕವಲುಬಳ್ಳಿಯು ಹೆಚ್ಚು ಫಲಕೊಡುವಂತೆ ಅದನ್ನು ಕತ್ತರಿಸಿ ಶುದ್ಧ ಮಾಡುತ್ತಾರೆ.


ಪ್ರೀತಿಯೂ ಸತ್ಯತೆಯೂ ಸಂಧಿಸಿಕೊಳ್ಳುತ್ತವೆ. ನೀತಿಯೂ ಸಮಾಧಾನವೂ ಮುದ್ದಿಟ್ಟುಕೊಳ್ಳುತ್ತವೆ.


ಅದಕ್ಕೆ ಅಬ್ರಹಾಮನು, “ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ನೆನಸಿದೆನು.


ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಈಜಿಪ್ಟಿನ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.


ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ. ಏಕೆಂದರೆ ನಿಮ್ಮನ್ನು ಪರೀಕ್ಷಿಸುವುದಕ್ಕೋಸ್ಕರವೂ ನೀವು ಪಾಪಮಾಡದಂತೆ ಅವರ ಭಯವು ನಿಮಗಿರಲೆಂದೂ ದೇವರು ಬಂದಿದ್ದಾರೆ,” ಎಂದನು.


ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ; ಯೆಹೋವ ದೇವರಿಗೆ ಭಯಪಟ್ಟು, ಕೆಟ್ಟದ್ದನ್ನು ತೊರೆದುಬಿಡು.


ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಯೆಹೋವ ದೇವರಿಗೆ ಅಸಹ್ಯ. ದುಷ್ಟನಿಗೆ ಶಿಕ್ಷೆಯು ತಪ್ಪುವುದಿಲ್ಲ.


ಆದ್ದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು. ಆದರೆ ದೇವರಿಗೆ ನೀನು ಭಯಪಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


“ನಾವು ಅದನ್ನು ಕೈಗೊಳ್ಳುವಂತೆ ನಮಗೋಸ್ಕರ ಯಾರು ಸಮುದ್ರವನ್ನು ದಾಟಿ, ನಮಗೆ ತೆಗೆದುಕೊಂಡು ಬಂದು ಅದನ್ನು ತಿಳಿಸುವರು?” ಎಂದು ನೀವು ಕೇಳುವಂತೆ, ಆ ವಾಕ್ಯವು ಸಮುದ್ರದ ಆಚೆಯಲ್ಲಿ ಇರುವಂಥದ್ದೂ ಅಲ್ಲ.


ಪ್ರೀತಿ, ನಂಬಿಗಸ್ತಿಕೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಸುತ್ತಲೂ ಕಟ್ಟಿರಲಿ, ನಿನ್ನ ಹೃದಯದ ಹಲಗೆಯ ಮೇಲೆ ಅವು ಬರೆದಿರಲಿ.


ತನ್ನ ಯಥಾರ್ಥತೆಯಲ್ಲಿ ನಡೆಯುವವನು ಯೆಹೋವ ದೇವರಿಗೆ ಭಯಪಡುತ್ತಾನೆ, ಆದರೆ ಅವರನ್ನು ತಿರಸ್ಕರಿಸುವವರು ತಮ್ಮ ಮಾರ್ಗಗಳಲ್ಲಿ ಮೋಸ ಹೋಗುತ್ತಾರೆ.


“ಅರಸನೇ, ಇದರ ವ್ಯಾಖ್ಯಾನವು ಏನೆಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು