Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:9 - ಕನ್ನಡ ಸಮಕಾಲಿಕ ಅನುವಾದ

9 ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ, ಆದರೆ ಯೆಹೋವ ದೇವರು ಅವನ ಹೆಜ್ಜೆಗಳನ್ನು ಸ್ಥಾಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮನುಷ್ಯ ಮನಬಂದಂತೆ ಮಾರ್ಗವನ್ನಾರಿಸಿಕೊಂಡರೂ ಸರ್ವೇಶ್ವರನೇ ಅವನ ನಡತೆಯನ್ನು ಪರಾಂಬರಿಸುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮನುಷ್ಯನು ತನ್ನ ಮನದಂತೆ ದಾರಿಯನ್ನಾರಿಸಿಕೊಂಡರೂ ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಒಬ್ಬನು ಅನೇಕ ಯೋಜನೆಗಳನ್ನು ಮಾಡಿಕೊಂಡರೂ ಭವಿಷ್ಯತ್ತನ್ನು ನಿರ್ಧರಿಸುವವನು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:9
11 ತಿಳಿವುಗಳ ಹೋಲಿಕೆ  

ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.


ಯೆಹೋವ ದೇವರಲ್ಲಿ ಯಾರು ಹರ್ಷಿಸುತ್ತಾರೋ ಅವರ ಹೆಜ್ಜೆಗಳನ್ನು ಸ್ಥಿರಪಡಿಸುವರು.


ಮನುಷ್ಯನಲ್ಲಿ ತನ್ನ ಹೃದಯದ ಯೋಜನೆಗಳು, ಆದರೆ ಸರಿಯಾದ ಉತ್ತರಕೊಡುವ ಶಕ್ತಿ ಯೆಹೋವ ದೇವರಿಂದಲೇ ಬರುವವು.


ಮನುಷ್ಯನ ಹೆಜ್ಜೆಗಳನ್ನು ಯೆಹೋವ ದೇವರು ನಿರ್ದೇಶಿಸುತ್ತಾರೆ. ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಳ್ಳಬಲ್ಲನು?


ಓ ಯೆಹೋವ ದೇವರೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ, ತನ್ನ ಹೆಜ್ಜೆ ನೆಟ್ಟಗೆ ಮಾಡುವುದು ನಡೆಯುವ ಮನುಷ್ಯನದ್ದಲ್ಲವೆಂದೂ ಬಲ್ಲೆನು.


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.


ಅನ್ಯಾಯದ ದೊಡ್ಡ ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು. ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು. ಏಕೆಂದರೆ ನನ್ನ ಜನರ ಕೂಗು ನನ್ನ ಬಳಿಗೆ ಬಂದು ಮುಟ್ಟಿತು,” ಎಂಬುದೆ.


ಯೋರಾಮನ ಬಳಿಗೆ ಅಹಜ್ಯನು ಬಂದಿದ್ದರಿಂದ ಅವನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗೆಂದರೆ, ಅಹಜ್ಯನು ಬಂದ ತರುವಾಯ ಯೆಹೋವ ದೇವರು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟರು.


ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು