Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:16 - ಕನ್ನಡ ಸಮಕಾಲಿಕ ಅನುವಾದ

16 ಜ್ಞಾನವನ್ನು ಸಂಪಾದಿಸುವುದಕ್ಕೆ ಬುದ್ಧಿಹೀನನ ಕೈಯಲ್ಲಿ ಹಣ ಏಕೆ? ಅವನಿಗೆ ಕಲಿಯಲು ಮನಸ್ಸಿಲ್ಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಇದನ್ನು ಕೊಳ್ಳಲು ಬೇಕಾದ ಬುದ್ಧಿಯೇ ಅವನಿಗಿಲ್ಲವಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮೂಢನಲ್ಲಿ ಹಣವಿದ್ದರೂ ಪ್ರಯೋಜನವಿಲ್ಲ. ಯಾಕೆಂದರೆ ಜ್ಞಾನವನ್ನು ಪಡೆದುಕೊಳ್ಳುವುದಕ್ಕೆ ಅವನ ಹಣ ನಿಷ್ಪ್ರಯೋಜಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:16
16 ತಿಳಿವುಗಳ ಹೋಲಿಕೆ  

ಸತ್ಯವನ್ನೂ ಜ್ಞಾನವನ್ನೂ ಶಿಕ್ಷಣವನ್ನೂ ವಿವೇಕವನ್ನೂ ಕೊಂಡುಕೋ; ಆದರೆ ಅವುಗಳನ್ನು ಮಾರಬೇಡ.


ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.


ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,


ಅವರು ನನಗೆ ಭಯಪಟ್ಟು, ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಗೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು. ಆಗ ಅವರಿಗೂ, ಅವರ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವುದು.”


ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ.


ಕೇಡನ್ನು ಮಾಡುವವರು ಬೆಳಕನ್ನು ದ್ವೇಷಿಸುತ್ತಾರೆ ಮತ್ತು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವರು ಮಾಡಿರುವ ಕೆಟ್ಟ ಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.


ಮದ್ಯಪಾನ, ದ್ರಾಕ್ಷಾರಸ ಇವು ಜನರನ್ನು ಜ್ಞಾನಹೀನರನ್ನಾಗಿ ಮಾಡುತ್ತವೆ.


ಅಪಹಾಸ್ಯ ಮಾಡುವವನು ಜ್ಞಾನವನ್ನು ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ, ಆದರೆ ವಿವೇಚಿಸುವವನಿಗೆ ಜ್ಞಾನವು ಸುಲಭವಾಗಿದೆ.


ಜ್ಞಾನವು ಬುದ್ಧಿಹೀನನಿಗೆ ನಿಲುಕದು; ಪುರದ್ವಾರದಲ್ಲಿ ಕೂಡಿಬಂದ ಸಭೆಯಲ್ಲಿ ಅವನು ತನ್ನ ಬಾಯಿಯನ್ನು ತೆರೆಯುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು