Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:20 - ಕನ್ನಡ ಸಮಕಾಲಿಕ ಅನುವಾದ

20 ವಕ್ರಹೃದಯವುಳ್ಳವನು ಸಮೃದ್ಧಿಯನ್ನು ಹೊಂದುವುದಿಲ್ಲ; ಮೋಸದ ನಾಲಿಗೆಯುಳ್ಳವನು ಹಾನಿಗೆ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ವಕ್ರ ಹೃದಯನು ಶುಭವನ್ನು ಪಡೆಯನು, ಕೆಟ್ಟ ನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ವಕ್ರಮನಸ್ಸುಳ್ಳವನು ಒಳಿತನ್ನು ಕಾಣನು; ಕೆಟ್ಟ ನಾಲಿಗೆಯವನು ಸಂಕಟಕ್ಕೆ ಸಿಕ್ಕಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ವಕ್ರಹೃದಯನು ಶುಭವನ್ನು ಪಡೆಯನು; ಕೆಟ್ಟನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಕೆಡುಕನಿಗೆ ಲಾಭವೆಂದೂ ಆಗದು. ಸುಳ್ಳುಗಾರನಿಗೆ ತೊಂದರೆಯೇ ಗತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:20
11 ತಿಳಿವುಗಳ ಹೋಲಿಕೆ  

ನೀತಿವಂತರ ಬಾಯಲ್ಲಿ ಜ್ಞಾನವು ಫಲಿಸುತ್ತದೆ; ಆದರೆ ಮೂರ್ಖನ ನಾಲಿಗೆಯು ಕತ್ತರಿಸಲಾಗುವುದು.


ಜ್ಞಾನಿಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ವಿನಾಶವನ್ನು ಆಹ್ವಾನಿಸುತ್ತದೆ.


ದುರುದ್ದೇಶದಿಂದ ಕಣ್ಣು ಮಿಟಕಿಸುವವನು ದುಃಖವನ್ನು ಉಂಟುಮಾಡುತ್ತಾನೆ, ಆದರೆ ಹರಟೆಯ ಮೂರ್ಖನು ಬೀಳುವನು.


ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; ಗರ್ವ, ಅಹಂಕಾರ, ಕೆಟ್ಟನಡವಳಿಕೆ, ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ.


ಏಕೆಂದರೆ ವಕ್ರಬುದ್ಧಿ ಯೆಹೋವ ದೇವರಿಗೆ ಅಸಹ್ಯ; ಆದರೆ ದೇವರ ನಂಬಿಗಸ್ತಿಕೆ ನೀತಿವಂತರೊಂದಿಗೆ ಇದೆ.


ಶುದ್ಧರಿಗೆ ನೀವು ಶುದ್ಧರಾಗಿ ತೋರಿಸುತ್ತೀರಿ. ವಕ್ರ ವ್ಯಕ್ತಿಗೆ ನಿಮ್ಮ ಬುದ್ಧಿವಂತಿಕೆಯನ್ನು ತೋರಿಸುತ್ತೀರಿ.


ಜ್ಞಾನಿಯ ಮಾತುಗಳು ಹಿತಕರ. ಆದರೆ ಬುದ್ಧಿಹೀನನ ಮಾತುಗಳು ಅವನಿಗೆ ವಿನಾಶಕರ.


ಏಕೆಂದರೆ ಕೆಡುಕನಿಗೆ ಭವಿಷ್ಯದ ನಿರೀಕ್ಷೆ ಇರುವುದಿಲ್ಲ; ದುಷ್ಟರ ದೀಪವು ಆರಿಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು