Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:23 - ಕನ್ನಡ ಸಮಕಾಲಿಕ ಅನುವಾದ

23 ನ್ಯಾಯದ ಮಾರ್ಗಗಳನ್ನು ತಿರುಗಿಸಿಬಿಡುವುದಕ್ಕೆ ದುಷ್ಟನು ಗುಪ್ತವಾಗಿ ಲಂಚವನ್ನು ತೆಗೆದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದುಷ್ಟನು ಲಂಚವನ್ನು ಗುಪ್ತವಾಗಿ ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಲಂಚವನ್ನು ಗುಟ್ಟಾಗಿ ಪಡೆದ ದುಷ್ಟನು ಡೊಂಕಾಗಿಸುತ್ತಾನೆ ನ್ಯಾಯ ನಿರ್ಣಯವನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ದುಷ್ಟನು ಲಂಚವನ್ನು ಮಡಲಿನಿಂದ ತೆಗೆದುಕೊಂಡು ನ್ಯಾಯವನ್ನು ತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದುಷ್ಟನು ನ್ಯಾಯ ದೊರೆಯದಂತೆ ಮಾಡಲು ಗುಟ್ಟಾಗಿ ಲಂಚ ತೆಗೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:23
16 ತಿಳಿವುಗಳ ಹೋಲಿಕೆ  

ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವಂತೆ ಆಡಳಿತಗಾರರು ಉಡುಗೊರೆಗಳನ್ನು ಕೇಳುತ್ತಾರೆ. ನ್ಯಾಯಾಧಿಪತಿಗಳು ಲಂಚವನ್ನು ತೆಗೆದುಕೊಳ್ಳುತ್ತಾರೆ. ಶಕ್ತಿಶಾಲಿ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರೆಲ್ಲರೂ ಒಟ್ಟಾಗಿ ಒಳಸಂಚುಮಾಡುತ್ತಾರೆ.


ಕೊಡುವವನ ಕಣ್ಣಿಗೆ ಲಂಚವು ಆಕರ್ಷಣೆಯಾಗಿದೆ; ಪ್ರತಿ ತಿರುವಿನಲ್ಲಿಯೂ ಯಶಸ್ಸು ಬರುತ್ತದೆ ಎಂದು ಅವರು ಭಾವಿಸುತ್ತಾರೆ.


“ಲಂಚವನ್ನು ತೆಗೆದುಕೊಳ್ಳಬಾರದು. ಏಕೆಂದರೆ ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


ನೀವು ನ್ಯಾಯವನ್ನು ಕೆಡಿಸಬಾರದು. ನೀವು ಮುಖದಾಕ್ಷಿಣ್ಯ ನೋಡಬಾರದು, ಇಲ್ಲವೆ ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.


ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚ ತೆಗೆದುಕೊಂಡಿದ್ದಾರೆ. ಬಡ್ಡಿಯನ್ನು ಲಾಭವನ್ನೂ ತೆಗೆದುಕೊಂಡಿದ್ದಾರೆ. ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭ ಮಾಡಿಕೊಂಡಿದ್ದಾರೆ. ನನ್ನನ್ನು ಮರೆತುಬಿಟ್ಟಿದ್ದಾರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.


ಗುಟ್ಟಾಗಿ ಕೊಡುವ ಬಹುಮಾನವು ಕೋಪವನ್ನು ಅಡಗಿಸುವುದು; ಮಡಿಲಲ್ಲಿ ಇಟ್ಟ ಲಂಚವು ಮಹಾ ಕೋಪವನ್ನು ಆರಿಸುವುದು.


ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ.


ನಾನು ಇಲ್ಲಿದ್ದೇನೆ. ಯೆಹೋವ ದೇವರ ಮುಂದೆಯೂ, ಅವರ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿ ಕೊಡಿರಿ. ನಾನು ಯಾರ ಎತ್ತನ್ನಾದರೂ, ಕತ್ತೆಯನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ, ತಿರುಗಿಕೊಡುತ್ತೇನೆ,” ಎಂದನು.


ಆದರೆ ಅವರು ಸಮುಯೇಲನ ಮಾರ್ಗದಲ್ಲಿ ನಡೆಯದೆ, ಅಪ್ರಾಮಾಣಿಕತೆಯಿಂದ ಹಣ ಸಂಪಾದಿಸಿ, ಲಂಚವನ್ನು ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುತ್ತಿದ್ದರು.


ದಬ್ಬಾಳಿಕೆ ಜ್ಞಾನಿಯನ್ನು ಮೂರ್ಖನನ್ನಾಗಿ ಮಾಡುತ್ತದೆ. ಲಂಚವು ಹೃದಯವನ್ನು ಕೆಡಿಸುತ್ತದೆ.


ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ, ನೀತಿಯನ್ನು ನೀತಿವಂತನಿಂದ ತೆಗೆದು ಹಾಕುವವರಿಗೂ ಕಷ್ಟ!


ಅಲ್ಲಿಯ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ಪ್ರಾಣಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿದ್ದಾರೆ.


ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾಧಿಪತಿಗಳೇ, ನ್ಯಾಯವನ್ನು ನಿಂದಿಸಿ ಸರಿಯಾದದ್ದನ್ನೆಲ್ಲಾ ಡೊಂಕುಮಾಡುವವರೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು