Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:28 - ಕನ್ನಡ ಸಮಕಾಲಿಕ ಅನುವಾದ

28 ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆನಿಸಿಕೊಳ್ಳುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿ ಎನಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮೂಢನು ಕೂಡ ಸುಮ್ಮನಿದ್ದರೆ ಜ್ಞಾನಿಯೆಂತಲೂ, ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮೂಢನು ಕೂಡ ಮೌನತಾಳಿದರೆ ಜ್ಞಾನಿಯೆನಿಸಿಕೊಳ್ಳುವನು; ತುಟಿಗಳನ್ನು ಬಿಗಿಹಿಡಿದರೆ ವಿವೇಕಿ ಎನಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮೂಢನು ಕೂಡ ಸುಮ್ಮನಿದ್ದರೆ, ಜ್ಞಾನಿಯೆಂತಲೂ ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಮೌನವಾಗಿದ್ದರೆ ಮೂಢನು ಸಹ ಜ್ಞಾನಿಯಂತೆ ಕಾಣುವನು; ಮಾತಾಡದಿದ್ದರೆ ವಿವೇಕಿಯಂತೆ ಕಾಣುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:28
7 ತಿಳಿವುಗಳ ಹೋಲಿಕೆ  

ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು; ಮೌನವೇ ನಿಮಗೆ ಜ್ಞಾನವು.


ಜ್ಞಾನಿಯ ನಾಲಿಗೆಯು ಒಳ್ಳೆಯ ಪರಿಜ್ಞಾನವನ್ನು ಹರಡುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನು ಹೊರಗೆಡವುತ್ತದೆ.


ಮೂಢನು ಮಾತುಗಳನ್ನು ಹೆಚ್ಚಿಸುತ್ತಾನೆ. ಆದರೂ ಅವನು ಭವಿಷ್ಯ ಏನೆಂದು ತಿಳಿಯನು. ಅವನ ತರುವಾಯ ಆಗುವುದನ್ನೂ ಅವನಿಗೆ ತಿಳಿಸುವವರು ಇಲ್ಲ.


ಬಹಳ ಚಿಂತೆ ಇದ್ದಾಗಲೂ ಕನಸು ಬರುತ್ತದೆ. ಮೂಢನು ಮಾತಾಡಿದರೆ ಸಾಕು, ಬಹು ಮಾತುಗಳು ಬರುತ್ತವೆ.


ಮೂರ್ಖನು ಮಾರ್ಗದಲ್ಲಿ ನಡೆಯುವಾಗಲೂ, ತಾನು ಅರಿವಿಲ್ಲದ ಮೂರ್ಖನೆಂದು ಪ್ರತಿಯೊಬ್ಬರಿಗೂ ಪ್ರಕಟಿಸುತ್ತಾನೆ.


ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು.


ಇವರು ಇನ್ನು ಉತ್ತರ ಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, ನಾನೂ ಕಾದುಕೊಂಡಿರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು