Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:6 - ಕನ್ನಡ ಸಮಕಾಲಿಕ ಅನುವಾದ

6 ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆತಾಯಿಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ, ತಂದೆತಾಯಿಗಳು ಮಕ್ಕಳಿಗೆ ಭೂಷಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮಕ್ಕಳ ಮಕ್ಕಳು ಮುದುಕರ ಮುಕುಟ; ಮಕ್ಕಳಿಗೆ ಹೆತ್ತವರೇ ಭೂಷಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ; ಹೆತ್ತವರು ಮಕ್ಕಳಿಗೆ ಭೂಷಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮೊಮ್ಮಕ್ಕಳು ವೃದ್ಧರಿಗೆ ಸಂತೋಷ. ಮಕ್ಕಳಿಗೆ ತಮ್ಮ ತಂದೆತಾಯಿಗಳ ಬಗ್ಗೆ ಹೆಮ್ಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:6
12 ತಿಳಿವುಗಳ ಹೋಲಿಕೆ  

ನರೆಗೂದಲು ಉಜ್ವಲ ಕಿರೀಟ, ಅದು ನೀತಿಯ ಜೀವಿತದಲ್ಲಿ ಒದಗುತ್ತದೆ.


ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು; ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ.


ಅವನ ತರುವಾಯ ಅವನ ಮಗನನ್ನು ನೇಮಿಸುವುದಕ್ಕೂ, ಯೆರೂಸಲೇಮನ್ನು ಸ್ಥಿರಪಡಿಸುವುದಕ್ಕೂ, ತನ್ನ ದೇವರಾದ ಯೆಹೋವ ದೇವರು ದಾವೀದನ ನಿಮಿತ್ತ ಯೆರೂಸಲೇಮಿನಲ್ಲಿ ಅವನಿಗೆ ದೀಪವನ್ನು ಉಳಿಸಿದರು.


ಆದರೆ ನಿನ್ನ ತಂದೆ ದಾವೀದನಿಗೋಸ್ಕರ ನಿನ್ನ ಕಾಲದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಿದುಕೊಳ್ಳುವೆನು.


ಯೋಸೇಫನು ಎಫ್ರಾಯೀಮನ ಮರಿಮೊಮ್ಮಕ್ಕಳನ್ನೂ ಕಂಡನು. ಮನಸ್ಸೆಯ ಮಗ ಮಾಕೀರನ ಮಕ್ಕಳೂ ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.


ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ಕಾಣುವೆನೆಂದು ನಾನು ನೆನಸಿರಲಿಲ್ಲ. ಆದರೆ ನಿನ್ನ ಸಂತಾನವನ್ನು ಸಹ ದೇವರು ನನಗೆ ಕಾಣುವಂತೆ ಅನುಗ್ರಹಿಸಿದ್ದಾನೆ,” ಎಂದನು.


ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.


“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು