Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:7 - ಕನ್ನಡ ಸಮಕಾಲಿಕ ಅನುವಾದ

7 ಉತ್ತಮವಾದ ಪದಗಳು ಮೂರ್ಖನಿಗೆ ಸೂಕ್ತವಲ್ಲ; ಆಳುವವನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಆಯುಕ್ತವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಉತ್ತಮವಾದ ಮಾತು ಮೂರ್ಖನಿಗೆ ಅಯುಕ್ತ, ಸುಳ್ಳುಮಾತು ಉತ್ತಮನಿಗೆ ಮತ್ತೂ ಅಯುಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಉತ್ತಮವಾದ ಮಾತು ಮೂರ್ಖನಿಗೆ ಹಿಡಿಸದು; ಸುಳ್ಳುಮಾತು ಉತ್ತಮನಿಗೆ ಮತ್ತೂ ಹಿಡಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಉತ್ತಮವಾದ ಮಾತು ಮೂರ್ಖನಿಗೆ ಅಯುಕ್ತ; ಸುಳ್ಳುಮಾತು ಉತ್ತಮನಿಗೆ ಮತ್ತೂ ಅಯುಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ವಾಕ್ಚಾತುರ್ಯವು ಮೂಢನಿಗೆ ವಿರುದ್ಧ; ಸುಳ್ಳು ಮಾತು ಗಣ್ಯನಿಗೆ ಇನ್ನೂ ವಿರುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:7
15 ತಿಳಿವುಗಳ ಹೋಲಿಕೆ  

ಒಬ್ಬ ಅಧಿಕಾರಿಯು ಸುಳ್ಳಿಗೆ ಕಿವಿಗೊಟ್ಟರೆ, ಅವನ ಸೇವಕರೆಲ್ಲರೂ ದುಷ್ಟರಾಗುತ್ತಾರೆ.


ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು. ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು, ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು.


ಕುಂಟನ ಕಾಲುಗಳು ಜೋಲಾಡುವ ಹಾಗೆಯೇ, ಬುದ್ಧಿಹೀನರ ಬಾಯಲ್ಲಿ ಜ್ಞಾನೋಕ್ತಿಯು ಇರುತ್ತದೆ.


ಸತ್ಯದ ತುಟಿಯು ಸದಾ ಸ್ಥಿರಗೊಳ್ಳುವುದು, ಸುಳ್ಳಾಡುವ ನಾಲಿಗೆಯು ಕ್ಷಣಿಕ.


ನಿಶ್ಚಯವಾಗಿ ದೇವರು ಕೆಟ್ಟದ್ದನ್ನು ಮಾಡುವುದಿಲ್ಲ, ಸರ್ವಶಕ್ತರು ನ್ಯಾಯವನ್ನು ಡೊಂಕು ಮಾಡುವುದಿಲ್ಲ.


ಇಸ್ರಾಯೇಲಿನ ದೇವರೂ, ಇಸ್ರಾಯೇಲಿನ ಬಂಡೆಯಾದವರೂ ನನಗೆ ಮಾತನಾಡಿದ್ದು: ‘ಮನುಷ್ಯರ ಮೇಲೆ ನೀತಿಯಿಂದ ಆಳುವವನು, ದೇವರ ಭಯದಿಂದ ಆಳುವವನು.


ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ, ಕಠಿಣವಾಗಿಯೂ ಮಾತನಾಡುವ ಸುಳ್ಳಿನ ತುಟಿಗಳು ಮೌನವಾಗಲಿ.


ಹೆಮ್ಮೆಯ ದೃಷ್ಟಿ, ಸುಳ್ಳಾಡುವ ನಾಲಿಗೆ, ನಿರಪರಾಧಿಯ ರಕ್ತವನ್ನು ಸುರಿಸುವ ಕೈಗಳು,


ಸುಳ್ಳಾಡುವ ತುಟಿಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; ಆದರೆ ಸತ್ಯವಂತರಲ್ಲಿ ಅವರು ಆನಂದಿಸುತ್ತಾರೆ.


ಬುದ್ಧಿಹೀನನಿಗೆ ಭೋಗಜೀವನವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವುದು ಸೇವಕನಿಗೆ ಯುಕ್ತವೇ ಅಲ್ಲ.


ಜ್ಞಾನವು ಬುದ್ಧಿಹೀನನಿಗೆ ನಿಲುಕದು; ಪುರದ್ವಾರದಲ್ಲಿ ಕೂಡಿಬಂದ ಸಭೆಯಲ್ಲಿ ಅವನು ತನ್ನ ಬಾಯಿಯನ್ನು ತೆರೆಯುವುದೇ ಇಲ್ಲ.


ಬೇಸಿಗೆಯಲ್ಲಿ ಹಿಮದಂತೆಯೂ, ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನವು ಸರಿಯಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು