Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:1 - ಕನ್ನಡ ಸಮಕಾಲಿಕ ಅನುವಾದ

1 ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬೇರೆಯವರೊಡನೆ ಸೇರದವನು ಸ್ವೇಚ್ಛಾನುಸಾರ ನಡೆಯುವನು; ಇತರರು ಸುಜ್ಞಾನವೆನ್ನುವುದನ್ನೇ ವಿರೋಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಜನರಲ್ಲಿ ಸೇರದವನು ಸ್ವೇಚ್ಫಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸ್ನೇಹಭಾವವಿಲ್ಲದವನು ಮಾಡುವುದೆಲ್ಲ ಸ್ವಾರ್ಥತೆಯಿಂದಲೇ, ಪ್ರತಿಯೊಂದು ಒಳ್ಳೆಯದರ ವಿರುದ್ಧವಾಗಿ ಅವನು ವಾದಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:1
22 ತಿಳಿವುಗಳ ಹೋಲಿಕೆ  

ಕಲಹವನ್ನು ತಡೆಯುವವನು, ಮಾನಕ್ಕೆ ಯೋಗ್ಯನು; ಆದರೆ ಬುದ್ಧಿಹೀನನು ಮಾತ್ರ ಜಗಳವಾಡಲು ಒತ್ತಾಯಿಸುತ್ತಾನೆ.


ನಾನು ವಿನೋದಗಾರರ ಕೂಟದಲ್ಲಿ ಕೂತುಕೊಳ್ಳಲಿಲ್ಲ, ಉಲ್ಲಾಸ ಪಡಲೂ ಇಲ್ಲ; ನೀವು ನನ್ನ ಮೇಲೆ ಕೈ ಇಟ್ಟಿದ್ದರಿಂದ ಒಂಟಿಗನಾಗಿ ಕೂತುಕೊಂಡೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ;


ಮಗನೇ, ಯೆಹೋವ ದೇವರಿಗೂ, ಅರಸನಿಗೂ ಭಯಪಡು; ತಿರುಗಿಬೀಳುವವರ ಸಹವಾಸ ಮಾಡಬೇಡ,


ಇವರು ನಿಮ್ಮಲ್ಲಿ ಭಿನ್ನಾಭಿಪ್ರಾಯವನ್ನು ಉಂಟುಮಾಡುವವರೂ ಪ್ರಾಪಂಚಿಕ ಮನುಷ್ಯರೂ ಪವಿತ್ರಾತ್ಮ ದೇವರಿಲ್ಲದವರೂ ಆಗಿದ್ದಾರೆ.


ಬೆಳಗಾಗುವ ಮೊದಲೇ, ಇನ್ನೂ ಕತ್ತಲಿರುವಾಗ, ಯೇಸು ಎದ್ದು ಏಕಾಂತ ಸ್ಥಳಕ್ಕೆ ಹೊರಟುಹೋಗಿ, ಅಲ್ಲಿ ಪ್ರಾರ್ಥನೆ ಮಾಡುತ್ತಿದ್ದರು.


ಹೃದಯಕ್ಕೆ ತನ್ನ ವ್ಯಥೆಯು ಗೊತ್ತು; ಪರನು ಅದರ ಸಂತೋಷದಲ್ಲಿ ಪಾಲಾಗುವುದಿಲ್ಲ.


“ಪರಲೋಕ ರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಕ್ಷೇಪಕ್ಕೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ಕಂಡುಕೊಂಡು ಮುಚ್ಚಿಟ್ಟು, ಅದರ ಸಂತೋಷದ ನಿಮಿತ್ತ ಹೊರಟುಹೋಗಿ, ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.


ಒಬ್ಬನು ಹಾದುಹೋಗುತ್ತಾ ತನಗೆ ಸಂಬಂಧಿಸದೇ ಇರುವ ವ್ಯಾಜ್ಯದಲ್ಲಿ ತಲೆಹಾಕುವವನು ನಾಯಿಯ ಕಿವಿ ಹಿಡಿದವನಂತೆ ಇದ್ದಾನೆ.


ಏಕೆಂದರೆ ನನಗೂ ನಿಮ್ಮ ಜನರಿಗೂ ನಿಮ್ಮ ದೃಷ್ಟಿಯಲ್ಲಿ ದಯೆ ದೊರಕಿತೆಂದು ಯಾವುದರಿಂದ ತಿಳಿದುಬರುವುದು? ನೀವು ನನ್ನೊಂದಿಗೆ ಹೋಗುವುದರಿಂದಲ್ಲವೋ? ಹೀಗೆ ನಾನೂ ನಿಮ್ಮ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕವಾಗಿರುವೆವು,” ಎಂದನು.


ಚಾಡಿಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ; ಆದಕಾರಣ ಹರಟೆ ಹೊಡೆಯುವವನ ಸಹವಾಸ ಮಾಡಬೇಡ.


ಕಲಹದ ಪ್ರಾರಂಭವು ಆಣೆಕಟ್ಟು ಒಡೆದಂತೆ ಇರುವುದು; ಆದಕಾರಣ ಆ ಕಲಹಕ್ಕೆ ಕೈಹಾಕುವುದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನಾಗುವುದಕ್ಕೆ ಕರೆಹೊಂದಿದವನೂ ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಗೊಂಡವನೂ ಆಗಿರುವ ಪೌಲನು ಬರೆಯುವ ಪತ್ರ.


ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯವನ್ನು ತಿಳಿದುಕೊಳ್ಳುವ ಜ್ಞಾನ ನಿಮಗೆ ಕೊಡಲಾಗಿದೆ. ಆದರೆ ಹೊರಗಿನವರಿಗೆ ಎಲ್ಲವೂ ಸಾಮ್ಯದ ರೂಪದಲ್ಲಿ ಹೇಳಲಾಗಿದೆ.


ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.


ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”


ಆಗ ಸರ್ವಶಕ್ತರಾದ ಯೆಹೋವ ದೇವರ ಆಲಯದಲ್ಲಿದ್ದ ಯಾಜಕರ ಸಂಗಡ ಮತ್ತು ಪ್ರವಾದಿಗಳ ಸಂಗಡ ನಾನು ಮಾತನಾಡಿ, “ಇಷ್ಟು ವರ್ಷ ಮಾಡಿದ ಪ್ರಕಾರ, ಐದನೆಯ ತಿಂಗಳಿನಲ್ಲಿ ಉಪವಾಸವಿದ್ದು, ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.


ಮಗನೇ, ಜ್ಞಾನವನ್ನೂ ತಿಳುವಳಿಕೆಯನ್ನೂ ಕಾಪಾಡಿಕೋ, ನಿನ್ನ ಕಣ್ಣುಗಳಿಂದ ಅವು ತಪ್ಪಿಹೋಗದೆ ಇರಲಿ.


ಸಮಾಲೋಚನೆಯೂ ಒಳ್ಳೆಯ ನ್ಯಾಯವೂ ನನ್ನಲ್ಲಿದೆ. ನನ್ನಲ್ಲಿ ಒಳನೋಟವೂ ಶಕ್ತಿಯೂ ಇವೆ.


ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ, ಅದು ಮೆಲುಕು ಹಾಕುವಂಥಾದ್ದಾದರೆ ಅದರ ಮಾಂಸವನ್ನು ತಿನ್ನಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು