Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:18 - ಕನ್ನಡ ಸಮಕಾಲಿಕ ಅನುವಾದ

18 ಚೀಟು ಹಾಕುವುದರಿಂದ ವ್ಯಾಜ್ಯಶಮನ; ಬಲಿಷ್ಠ ಪ್ರತಿವಾದಿಗಳ ವಿವಾದಗಳನ್ನು ಸಹ ಬಗೆಹರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಚೀಟುಹಾಕುವುದರಿಂದ ವ್ಯಾಜ್ಯಗಳ ಶಮನ; ಜಟ್ಟಿಗಳ ನಡುವೆ ಕಾಳಗದ ವಿರಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಚೀಟುಹಾಕುವದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಲಿಷ್ಠರಾದ ಇಬ್ಬರು ವಾದಮಾಡುತ್ತಿರುವಾಗ ನಿರ್ಧಾರಕ್ಕಾಗಿ ಚೀಟುಹಾಕಿದರೆ ಅವರ ಜಗಳ ಶಮನವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:18
10 ತಿಳಿವುಗಳ ಹೋಲಿಕೆ  

ಉಡಿಯಲ್ಲಿ ಚೀಟು ಹಾಕಬಹುದು, ಆದರೆ ಪ್ರತಿ ತೀರ್ಪು ಯೆಹೋವ ದೇವರದ್ದೇ.


ಈಗ ಜನರ ನಾಯಕರು ಯೆರೂಸಲೇಮಿನಲ್ಲಿ ನೆಲೆಸಿದರು. ಉಳಿದ ಜನರೊಳಗೆ ಹತ್ತು ಮಂದಿಯಲ್ಲಿ ಒಂಬತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಹತ್ತರಲ್ಲೊಬ್ಬರು ಪವಿತ್ರ ನಗರವಾದ ಯೆರೂಸಲೇಮಿನಲ್ಲಿ ಬಂದು ವಾಸಿಸಲು ಚೀಟುಹಾಕಿದರು.


ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ, ಚಾದೋಕನು, ಅಹೀಮೆಲೆಕನು, ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ, ಆರೋನನ ಪುತ್ರರಾದ ತಮ್ಮ ಸಹೋದರರಿಗೆ ಎದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಕಿರಿಯ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.


ಮೆರಾರೀಯ ಪುತ್ರರಿಗೂ ಅವರ ಕುಟುಂಬಗಳ ಪ್ರಕಾರ ಚೀಟುಹಾಕಿ, ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬುಲೂನನ ಗೋತ್ರದಿಂದಲೂ ಹನ್ನೆರಡು ಪಟ್ಟಣಗಳು ದೊರಕಿದ್ದವು.


ಸೌಲನು ಅವರಿಗೆ, “ನನ್ನ ಮೇಲೆಯೂ ನನ್ನ ಮಗ ಯೋನಾತಾನನ ಮೇಲೆಯೂ ಚೀಟುಹಾಕಿರಿ,” ಎಂದಾಗ, ಯೋನಾತಾನನಿಗೆ ಚೀಟು ಬಿತ್ತು.


ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಬತ್ತುವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಸೊತ್ತಾಗಿ ಪಾಲು ಹಂಚಿದರು.


ಪ್ರತಿವಾದಿ ಬಂದು ಪರಿಶೀಲಿಸುವವರೆಗೆ, ಮೊದಲು ವಾದಿಸುವವನು ನ್ಯಾಯವಂತನೆಂದು ತೋರುತ್ತಾನೆ.


ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಬೇಸರಗೊಂಡ ಸಹೋದರನನ್ನು ಗೆಲ್ಲುವುದು ಕಷ್ಟಕರ; ಅವರ ಕಲಹಗಳು ಕೋಟೆಯ ಬಾಗಿಲಿಗೆ ಅಗುಳಿಗಳಂತೆ ಇವೆ.


ಸೌಲನು ಇಸ್ರಾಯೇಲರ ದೇವರಾದ ಯೆಹೋವ ದೇವರಿಗೆ, “ನೀವು ಪೂರ್ಣ ನಿರ್ಣಯವನ್ನು ದಯಪಾಲಿಸಿರಿ,” ಎಂದು ಹೇಳಿ ಚೀಟು ಹಾಕಿದನು. ಆಗ ಸೌಲನಿಗೂ ಯೋನಾತಾನನಿಗೂ ಚೀಟು ಬಂತು. ಆದರೆ ಜನರು ಪಾರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು