Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:15 - ಕನ್ನಡ ಸಮಕಾಲಿಕ ಅನುವಾದ

15 ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ; ಸೋಮಾರಿಯು ಹಸಿವೆಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮೈಗಳ್ಳತನ ಗಾಢನಿದ್ರೆಯಲ್ಲಿ ಮುಳುಗಿಸುವುದು; ಸೋಮಾರಿಯು ಹಸಿವಿನಿಂದ ಬಳಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವದು; ಸೋಮಾರಿಯು ಹಸಿವೆಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸೋಮಾರಿಗೆ ಗಾಢವಾದ ನಿದ್ರೆ. ಮೈಗಳ್ಳನಿಗೆ ಹಸಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:15
14 ತಿಳಿವುಗಳ ಹೋಲಿಕೆ  

ಏಕೆಂದರೆ ಕುಡುಕರೂ ಹೊಟ್ಟೆಬಾಕರೂ ದುರ್ಗತಿಗೆ ಬರುವರು; ತೂಕಡಿಕೆಯು ಹರಕು ಬಟ್ಟೆಗಳನ್ನು ಹೊದಿಸುವದು.


ನೀವು ನಿದ್ರೆಯನ್ನು ಪ್ರೀತಿಸಿದರೆ, ನೀವು ಬಡತನದಲ್ಲಿ ಕೊನೆಗೊಳ್ಳುತ್ತೀರಿ; ನಿಮ್ಮ ಕಣ್ಣುಗಳನ್ನು ತೆರೆದರೆ, ಸಾಕಷ್ಟು ಆಹಾರ ಇರುತ್ತದೆ!


ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಉಣ್ಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು.


ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನು ಸ್ವಲ್ಪ ವಿಶ್ರಾಂತಿಗಾಗಿ ಕೈ ಮುದುರಿಕೊಳ್ಳುವೆ ಎನ್ನುವೆಯಾ?


ಆದ್ದರಿಂದ ಹೀಗೆ ಹೇಳಲಾಗಿದೆ: “ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ಇಸ್ರಾಯೇಲಿನ ಕಾವಲುಗಾರರು ಕುರುಡರು. ಅವರೆಲ್ಲರೂ ಅರಿವಿಲ್ಲದವರು. ಅವರೆಲ್ಲರೂ ಮೂಕ ನಾಯಿಗಳು, ಅವು ಬೊಗಳಲಾರವು, ಕನಸು ಕಾಣುತ್ತವೆ, ಬಿದ್ದುಕೊಂಡಿರುತ್ತವೆ. ನಿದ್ರೆಯನ್ನು ಪ್ರೀತಿಸುತ್ತವೆ.


ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ, ಅವನು ಅದನ್ನು ಮತ್ತೆ ತನ್ನ ಬಾಯಿಗೆ ತರುವುದಿಲ್ಲ!


ಆಕೆಯು ತನ್ನ ಗೃಹಕೃತ್ಯಗಳನ್ನೆಲ್ಲಾ ಚೆನ್ನಾಗಿ ನೋಡಿಕೊಳ್ಳುತ್ತಾಳೆ. ಸೋಮಾರಿಯಾಗಿ ಕೆಲಸಮಾಡದೆ ಆಹಾರವನ್ನು ತಿನ್ನುವುದಿಲ್ಲ.


ಹೀಗೆ ನಿನಗೆ ಬಡತನವು ಕಳ್ಳನಂತೆಯೂ ಕೊರತೆಯು ಶಸ್ತ್ರಧಾರಿಯಂತೆಯೂ ನಿನ್ನ ಮೇಲೆ ಬರುವುವು.


ತನ್ನ ಕೆಲಸದಲ್ಲಿ ಸೋಮಾರಿಯಾಗಿರುವವನು, ಕೆಡುಕನಿಗೆ ಸಹೋದರನಾಗಿದ್ದಾನೆ.


ಸೋಮಾರಿಯು, “ಹೊರಗೆ ಸಿಂಹವಿದೆ! ಅದು ನನ್ನನ್ನು ಬೀದಿಗಳಲ್ಲಿ ಕೊಂದುಹಾಕುತ್ತದೆ,” ಎಂದು ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು