Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:19 - ಕನ್ನಡ ಸಮಕಾಲಿಕ ಅನುವಾದ

19 ಕೋಪಿಷ್ಟನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ, ತಿರುಗಿ ನೀನು ಬಿಡಿಸಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕಡುಕೋಪಿ ದಂಡನೆಯನ್ನು ಅನುಭವಿಸಲಿ ಬಿಡು; ಒಮ್ಮೆ ಬಿಡಿಸಿದರೆ, ಬಾರಿಬಾರಿಗೂ ಬಿಡಿಸಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ; ಬಿಡಿಸಿದರೆ ಬಾರಿಬಾರಿಗೆ ಬಿಡಿಸಬೇಕಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮುಂಗೋಪಿಯು ತನ್ನ ಕೋಪಕ್ಕೆ ದಂಡ ಕೊಡಲೇಬೇಕು. ಕೊಡಬೇಕಾದ ದಂಡದಿಂದ ತಪ್ಪಿಸಿದರೆ, ಅವನು ಅದೇ ಕಾರ್ಯಗಳನ್ನು ಮತ್ತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:19
11 ತಿಳಿವುಗಳ ಹೋಲಿಕೆ  

ತನ್ನ ಸ್ವಂತ ಆತ್ಮವನ್ನು ಆಳದಿರುವವನು, ಗೋಡೆ ಬಿದ್ದ ಹಾಳೂರಿಗೆ ಸಮಾನ.


ಕೋಪಿಷ್ಟನು ಜಗಳವನ್ನೆಬ್ಬಿಸುವನು, ಮುಂಗೋಪಿಯು ಅನೇಕ ಪಾಪಗಳನ್ನು ಮಾಡುತ್ತಾನೆ.


ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಮರಣಕ್ಕೆ ನೀನು ಕಾರಣನಾಗಬೇಡ.


ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು; ಕಡೆಯಲ್ಲಿ ನೀನು ಜ್ಞಾನಿಯಾಗುವೆ.


ಮೂಢನನ್ನು ಅಸಮಾಧಾನವು ಕೊಲ್ಲುವುದು; ಮುಗ್ಧನನ್ನು ಅಸುಹೆ ಸಾಯುವಂತೆ ಮಾಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು