Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:19 - ಕನ್ನಡ ಸಮಕಾಲಿಕ ಅನುವಾದ

19 ಅವಳ ಬಳಿಗೆ ಹೋಗುವ ಯಾವನೂ ಹಿಂದಿರುಗುವುದಿಲ್ಲ; ಜೀವಮಾರ್ಗಗಳನ್ನು ಅಂಥವರು ಹಿಡಿಯುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವಳ ಬಳಿಗೆ ಹೋಗುವವರು ಯಾರೂ ಹಿಂದಿರುಗುವುದಿಲ್ಲ, ಅವರಿಗೆ ಜೀವದ ಮಾರ್ಗವು ದೊರೆಯುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವಳ ಬಳಿಗೆ ಹೋಗುವವರು ಹಿಂದಿರುಗುವುದಿಲ್ಲ, ಅವರಿಗೆ ಜೀವಮಾರ್ಗ ಪುನಃ ದೊರಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವಳ ಬಳಿಗೆ ಹೋಗುವವರು ಯಾರೂ ಹಿಂದಿರುಗುವದಿಲ್ಲ, ಅವರಿಗೆ ಜೀವದ ಮಾರ್ಗವು ದೊರೆಯುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವಳು ಸಮಾಧಿಯಂತೆ ಇದ್ದಾಳೆ. ಅವಳ ಬಳಿಗೆ ಹೋಗುವವನು ಎಂದಿಗೂ ಹಿಂತಿರುಗಿ ಬರುವುದಿಲ್ಲ; ಅವನ ಜೀವನವು ಮೊದಲಿನಂತಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:19
11 ತಿಳಿವುಗಳ ಹೋಲಿಕೆ  

ಕೆಟ್ಟ ಹೆಂಗಸಿನ ಹೃದಯವು ಬೋನೂ ಬಲೆಯೂ ಆಗಿರುತ್ತದೆ. ಅವಳ ಕೈ ಸಂಕೋಲೆ ಆಗಿರುತ್ತದೆ. ಇದು ಮರಣಕ್ಕಿಂತಲೂ ಕಠೋರವಾದದ್ದು ಎಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸುವವನು, ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.


ಆದ್ದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಂತೆ ನಡೆದುಕೊಂಡರು.


“ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವಾಗಲೂ, ನಿಮ್ಮ ಸೊಸೆಯಂದಿರು ವ್ಯಭಿಚಾರ ಮಾಡುವಾಗಲೂ ನಾನು ಅವರನ್ನು ಶಿಕ್ಷಿಸುವುದಿಲ್ಲ. ಏಕೆಂದರೆ ಪುರುಷರು ಸ್ವತಃ ವೇಶ್ಯೆಯರೊಂದಿಗೆ ವಾಸಿಸುತ್ತಾರೆ ಮತ್ತು ದೇವಾಲಯದ ವೇಶ್ಯೆಯರೊಂದಿಗೆ ಬಲಿ ಅರ್ಪಿಸುತ್ತಾರೆ. ಆದ್ದರಿಂದ ವಿವೇಕವಿಲ್ಲದ ಜನರು ನಾಶವಾಗುತ್ತಾರೆ.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ಬದಲಾಗದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಸುಳ್ಳಾಡುವವರಲ್ಲ. ಇದರಿಂದಾಗಿ, ದೇವರ ಆಶ್ರಯವನ್ನು ಹೊಂದುವುದಕ್ಕೆ ಓಡಿಬಂದಿರುವ ನಾವು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಳ್ಳಲು ಬಲವಾದ ಉತ್ತೇಜನ ಉಂಟಾಯಿತು.


ಕೂಷ್ಯನು ತನ್ನ ಚರ್ಮವನ್ನೂ, ಚಿರತೆಯು ತನ್ನ ಮಚ್ಚೆಯನ್ನೂ ಮಾರ್ಪಡಿಸುವುದಕ್ಕಾಗುವುದೋ? ಹಾಗಾದರೆ ಕೆಟ್ಟತನದ ಅಭ್ಯಾಸವುಳ್ಳವರಾದ ನೀವೂ ಸಹ ಒಳ್ಳೆಯದನ್ನು ಮಾಡುವುದಕ್ಕಾದೀತೇ?


ನೀತಿವಂತರ ಮಾರ್ಗವು ಮುಂಜಾನೆಯ ಸೂರ್ಯನ ಬೆಳಕಿನಂತೆ ಇದ್ದು, ದಿನದ ಪೂರ್ಣ ಬೆಳಕಿನವರೆಗೂ ಪ್ರಕಾಶಿಸಿ ಹೊಳೆಯುತ್ತಾ ಇರುವುದು.


ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ. ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ; ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.


ಜೀವಮಾರ್ಗದ ವಿಚಾರ ಅವಳಿಗಿಲ್ಲ; ಆದ್ದರಿಂದ ಅವಳ ಮಾರ್ಗಗಳು ಚಂಚಲವಾಗಿವೆ, ಅದರ ಅರಿವೂ ಅವಳಿಗಿಲ್ಲ.


ನಿನ್ನ ಜೀವನದ ಅಂತ್ಯದಲ್ಲಿ ನಿನ್ನ ದೇಹವೂ ಕ್ಷೀಣಿಸಿದಾಗ, ನೀನು ನರಳಬೇಕಾದೀತು.


ವ್ಯಭಿಚಾರಿಯು ಬುದ್ಧಿಹೀನನಾಗಿದ್ದಾನೆ. ಹಾಗೆ ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು