Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:2 - ಕನ್ನಡ ಸಮಕಾಲಿಕ ಅನುವಾದ

2 ನೀನು ಜ್ಞಾನಕ್ಕೆ ಕಿವಿಗೊಟ್ಟು, ತಿಳುವಳಿಕೆಗೆ ನಿನ್ನ ಹೃದಯವನ್ನು ತಿರುಗಿಸು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, ಹೃದಯವನ್ನು ವಿವೇಕದ ಕಡೆಗೂ ತಿರುಗಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜ್ಞಾನದ ಕಡೆಗೆ ಕಿವಿಗೊಡು, ವಿವೇಕದ ಕಡೆಗೆ ಮನತಿರುಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಕಿವಿಯನ್ನು ಜ್ಞಾನದ ಕಡೆಗೂ ಹೃದಯವನ್ನು ವಿವೇಕದ ಕಡೆಗೂ ತಿರುಗಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜ್ಞಾನಕ್ಕೆ ಕಿವಿಗೊಡು; ಅದನ್ನು ಅರ್ಥಮಾಡಿಕೊಳ್ಳಲು ನಿನ್ನಿಂದಾದಷ್ಟು ಪ್ರಯತ್ನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:2
15 ತಿಳಿವುಗಳ ಹೋಲಿಕೆ  

ಶಿಸ್ತಿಗೆ ನಿನ್ನ ಹೃದಯವನ್ನೂ ತಿಳುವಳಿಕೆಯ ಮಾತುಗಳಿಗೆ ನಿನ್ನ ಕಿವಿಗಳನ್ನೂ ಕೊಡು.


ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು.


ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿನಗಳನ್ನು ಲೆಕ್ಕಿಸುವುದಕ್ಕೆ ನಮಗೆ ಕಲಿಸಿಕೊಡಿರಿ.


ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.”


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಜ್ಞಾನವನ್ನು ತಿಳಿದುಕೊಳ್ಳುವುದಕ್ಕೂ ಭೂಮಿಯ ಮೇಲೆ ಮಾಡುವ ಪರಿಶ್ರಮವನ್ನು ನೋಡುವುದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು. ಜನರು ರಾತ್ರಿ ಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ಹಚ್ಚಗೊಡದವರೂ ಇದ್ದಾರೆ.


ನಾನು ಇದನ್ನೆಲ್ಲಾ ನೋಡಿ, ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡೆಸುವ ಕಾಲವೂ ಇದೆ.


ಜ್ಞಾನದ ಮೂಲ ತತ್ವವನ್ನೂ, ದುಷ್ಟತನದ ಮೂಢತನವನ್ನೂ, ಮೂಢತ್ವದ ಹುಚ್ಚುತನವನ್ನೂ ಪರೀಕ್ಷಿಸಿ ತಿಳಿದುಕೊಳ್ಳುವಂತೆ ಮನಸ್ಸುಮಾಡಿದೆನು.


ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.


ಹೌದು, ನೀನು ಒಳನೋಟಕ್ಕಾಗಿ ಮೊರೆಯಿಟ್ಟು, ತಿಳುವಳಿಕೆಗಾಗಿ ನಿನ್ನ ಸ್ವರವೆತ್ತಿ,


ಮಕ್ಕಳೇ, ತಂದೆಯ ಶಿಕ್ಷಣವನ್ನು ಕೇಳಿರಿ; ತಿಳುವಳಿಕೆಯನ್ನು ಗ್ರಹಿಸಲಿಕ್ಕೆ ಗಮನಕೊಡಿರಿ.


ಮಗನೇ, ನನ್ನ ಮಾತುಗಳಿಗೆ ಗಮನಕೊಡು; ನನ್ನ ನುಡಿಗಳಿಗೆ ಕಿವಿಗೊಡು.


ವ್ಯಭಿಚಾರಿಯು ಬುದ್ಧಿಹೀನನಾಗಿದ್ದಾನೆ. ಹಾಗೆ ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು