Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:8 - ಕನ್ನಡ ಸಮಕಾಲಿಕ ಅನುವಾದ

8 ನ್ಯಾಯವಂತರ ದಾರಿಗಳನ್ನು ದೇವರು ಕಾಯುತ್ತಾರೆ; ತಮ್ಮ ನಂಬಿಗಸ್ತರ ಮಾರ್ಗವನ್ನು ಭದ್ರಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನ್ಯಾಯಮಾರ್ಗವನ್ನು ರಕ್ಷಿಸುತ್ತಾ, ತನ್ನ ಭಕ್ತರ ದಾರಿಯನ್ನು ನೋಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನ್ಯಾಯಮಾರ್ಗವನ್ನು ಕಾಯುವನಾತ, ಭಕ್ತರ ಹಾದಿಯನ್ನು ಭದ್ರವಾಗಿಸುವನಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನ್ಯಾಯಮಾರ್ಗವನ್ನು ರಕ್ಷಿಸುತ್ತಾ ತನ್ನ ಭಕ್ತರ ದಾರಿಯನ್ನು ನೋಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆತನು ನ್ಯಾಯವಂತರನ್ನು ಕಾಪಾಡುತ್ತಾನೆ; ತನ್ನ ಪವಿತ್ರ ಜನರಿಗೆ ಕಾವಲಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:8
20 ತಿಳಿವುಗಳ ಹೋಲಿಕೆ  

ಅವರು ನನ್ನ ಪ್ರಾಣವನ್ನು ಚೈತನ್ಯಗೊಳಿಸುತ್ತಾರೆ. ತಮ್ಮ ಹೆಸರಿನ ನಿಮಿತ್ತ ನನ್ನನ್ನು ನೀತಿ ಮಾರ್ಗದಲ್ಲಿ ನಡೆಸುತ್ತಾರೆ.


ಅವರು ತಮ್ಮ ಪರಿಶುದ್ಧರ ಪಾದಗಳನ್ನು ಕಾಯುವರು. ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು. “ತನ್ನ ಶಕ್ತಿಯಿಂದ ಒಬ್ಬನೂ ಜಯಿಸನು.


ಯೆಹೋವ ದೇವರು, ತಮ್ಮನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾರೆ. ಆದರೆ ದುಷ್ಟರೆಲ್ಲರನ್ನು ದಂಡಿಸುತ್ತಾರೆ.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ


ದೇವರು ನಮ್ಮ ಜೀವನವನ್ನು ಕಾಪಾಡಿ, ನಮ್ಮ ಕಾಲು ಎಡವದಂತೆ ಮಾಡಿದ್ದಾರೆ.


ಅಂತ್ಯಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ದೇವರು ನಿಮ್ಮ ನಂಬಿಕೆಯ ಮುಖಾಂತರ ನಿಮ್ಮನ್ನು ತಮ್ಮ ಶಕ್ತಿಯಿಂದ ಕಾಯುತ್ತಾರೆ.


ನೀತಿಯ ಮಾರ್ಗದಲ್ಲಿಯೂ ನ್ಯಾಯದ ದಾರಿ ನಡುವೆಯೂ ನಾನು ನಡೆಯುತ್ತೇನೆ.


ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ; ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು. ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು; ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು.


ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.


ನಿಶ್ಚಯವಾಗಿ ನೀವು ಜನರನ್ನು ಪ್ರೀತಿಸುತ್ತೀರಿ. ಪರಿಶುದ್ಧ ಜನರು ನಿಮ್ಮ ಆಶ್ರಯದಲ್ಲಿಯೇ ಇದ್ದಾರೆ. ನಿಮ್ಮ ಪಾದಗಳಿಗೆ ಎಲ್ಲರೂ ಎರಗುವರು. ನಿಮ್ಮಿಂದಲೇ ಬೋಧನೆ ಪಡೆಯುವರು.


ಸಿಂಹವು ಅಲ್ಲಿ ಇರದು, ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗವು. ಅದು ಅಲ್ಲಿ ಕಾಣುವುದೇ ಇಲ್ಲ. ಆದರೆ ಬಿಡುಗಡೆಯಾದವರೇ ಅಲ್ಲಿ ನಡೆಯುವರು.


ಅವನ ದೇವರ ನಿಯಮವೂ ಅವನ ಹೃದಯದಲ್ಲಿ ಇದೆ; ಅವನ ಹೆಜ್ಜೆ ಕದಲುವುದಿಲ್ಲ.


ಯೆಹೋವ ದೇವರನ್ನು ಪ್ರೀತಿಸುವವರು ಕೆಟ್ಟದ್ದನ್ನು ಹಗೆ ಮಾಡುವರು; ದೇವರು ತಮ್ಮ ಭಕ್ತರ ಪ್ರಾಣಗಳನ್ನು ಕಾಪಾಡಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು