Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:19 - ಕನ್ನಡ ಸಮಕಾಲಿಕ ಅನುವಾದ

19 ಚಾಡಿಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ; ಆದಕಾರಣ ಹರಟೆ ಹೊಡೆಯುವವನ ಸಹವಾಸ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಗುಟ್ಟನ್ನು ರಟ್ಟು ಮಾಡದಿರನು ಚಾಡಿಕೋರ; ತುಟಿ ಬಿಗಿಹಿಡಿಯದವನ ಗೊಡವೆ ನಿನಗೆ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಚಾಡಿಕೋರನು ಗುಟ್ಟು ರಟ್ಟುಮಾಡುವನು; ಆದದರಿಂದ ತುಟಿಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬೇರೆಯವರ ಬಗ್ಗೆ ಸುಳ್ಳುಸುದ್ದಿ ಹಬ್ಬಿಸುವವನನ್ನು ನಂಬಬೇಡ; ಅತಿಯಾಗಿ ಮಾತಾಡುವವನ ಸ್ನೇಹಿತನೂ ಆಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:19
9 ತಿಳಿವುಗಳ ಹೋಲಿಕೆ  

ಚಾಡಿಕೋರನು ರಹಸ್ಯಗಳನ್ನು ಬಹಿರಂಗಪಡಿಸುತ್ತಾನೆ, ಆದರೆ ನಂಬಿಗಸ್ತನು ಆ ಸಂಗತಿಯನ್ನು ಮುಚ್ಚುತ್ತಾನೆ.


ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಹೊಟ್ಟೆಯ ಒಳಭಾಗಗಳಿಗೆ ಇಳಿದು ಹೋಗುವುವು.


ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.


“ ‘ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ. “ ‘ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ. ನಾನೇ ಯೆಹೋವ ದೇವರು.


ಮಗನೇ, ಯೆಹೋವ ದೇವರಿಗೂ, ಅರಸನಿಗೂ ಭಯಪಡು; ತಿರುಗಿಬೀಳುವವರ ಸಹವಾಸ ಮಾಡಬೇಡ,


ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುತ್ತಾನೆ.


ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸುಮ್ಮನಿರಿಸುವೆನು; ಗರ್ವದ ಕಣ್ಣೂ, ಅಹಂಕಾರದ ಹೃದಯವೂ ಉಳ್ಳವನನ್ನು ಸಹಿಸಲಾರೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು