Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:23 - ಕನ್ನಡ ಸಮಕಾಲಿಕ ಅನುವಾದ

23 ವ್ಯತ್ಯಾಸದ ತೂಕಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; ಅಪ್ರಾಮಾಣಿಕ ತಕ್ಕಡಿಗಳು ಅವರನ್ನು ಮೆಚ್ಚಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತೂಕದ ಕಲ್ಲನ್ನು ಹೆಚ್ಚಿಸುವುದು, ತಗ್ಗಿಸುವುದು ಯೆಹೋವನಿಗೆ ಅಸಹ್ಯ, ಮೋಸದ ತಕ್ಕಡಿ ಒಳ್ಳೆಯದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ತಾರತಮ್ಯದ ತೂಕದ ಕಲ್ಲು ಸರ್ವೇಶ್ವರನಿಗೆ ಅಸಹ್ಯ; ಮೋಸದ ತಕ್ಕಡಿಯನ್ನು ಬಳಸುವುದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ತೂಕದ ಕಲ್ಲನ್ನು ಹೆಚ್ಚಿಸುವದು ತಗ್ಗಿಸುವದು ಯೆಹೋವನಿಗೆ ಅಸಹ್ಯ; ಮೋಸದ ತ್ರಾಸು ಒಳ್ಳೇದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನಿಗೆ ಅನ್ಯಾಯದ ಅಳತೆಮಾಪಕವು ಅಸಹ್ಯ; ಮೋಸದ ತಕ್ಕಡಿಗಳು ಅಪರಾಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:23
6 ತಿಳಿವುಗಳ ಹೋಲಿಕೆ  

ಮೋಸದ ತೂಕಗಳೂ, ಮೋಸದ ಅಳತೆಗಳೂ ಇವೆರಡೂ ಯೆಹೋವ ದೇವರಿಗೆ ಅಸಹ್ಯ.


ಅವನು ವ್ಯಾಪಾರಿಯಾಗಿದ್ದು, ಅವನ ಕೈಯಲ್ಲಿ ಮೋಸದ ತಕ್ಕಡಿ ಇದೆ. ಇತರರಿಂದ ಕಸಿದುಕೊಳ್ಳಬೇಕೆಂಬುದೇ ಅವನ ದುರಾಶೆ.


ನ್ಯಾಯವಾದ ತಕ್ಕಡಿಯೂ ನ್ಯಾಯವಾದ ಎಫಾವೂ ನ್ಯಾಯವಾದ ಬಾತ್ ಅಳತೆಯೂ ನಿಮಗಿರಬೇಕು.


ಮೋಸದ ತಕ್ಕಡಿ ಯೆಹೋವ ದೇವರಿಗೆ ಅಸಹ್ಯವಾಗಿದೆ; ಆದರೆ ನ್ಯಾಯದ ತೂಕ ಅವರಿಗೆ ಮೆಚ್ಚುಗೆ.


ನೀವು ಹೇಳುವುದೇನೆಂದರೆ, “ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಯಾವಾಗ ಕೊನೆಗೊಳ್ಳುತ್ತದೆ? ಗೋಧಿಯನ್ನು ಮಾರುವ ಹಾಗೆ ಸಬ್ಬತ್ ದಿನವು ಯಾವಾಗ ಮುಗಿಯುವುದು? ಕೊಳಗವನ್ನು ಚಿಕ್ಕದಾಗಿಯೂ ತೊಲಗಳನ್ನು ದೊಡ್ಡದಾಗಿಯೂ, ಕಳ್ಳತಕ್ಕಡಿಗಳನ್ನು ಮೋಸಕ್ಕಾಗಿಯೂ ಮಾಡೋಣವೆಂದೂ,


ಹೆಚ್ಚು ಕಡಿಮೆಯಾಗಿರುವ ಎರಡು ವಿಧವಾದ ಕಳ್ಳ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿಟ್ಟುಕೊಳ್ಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು