Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:25 - ಕನ್ನಡ ಸಮಕಾಲಿಕ ಅನುವಾದ

25 ದುಡುಕಿ ಪ್ರತಿಷ್ಠೆಗಾಗಿ ದೇವರಿಗೆ ಹರಕೆ ಮಾಡಿಕೊಂಡು ಆಮೇಲೆ ವಿಚಾರಿಸುವುದು ಉರುಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ದುಡುಕಿ ದೇವರಿಗೆ ಮುಡಿಪುಕಟ್ಟುವುದು, ಹರಕೆ ಹೊತ್ತ ಮೇಲೆ ವಿಚಾರಮಾಡುವುದು, ಉರುಳಿಗೆ ಸಿಕ್ಕಿಕೊಂಡಂತೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ದುಡುಕಿ ಮುಡುಪುಕಟ್ಟುವದು ಮನುಷ್ಯನಿಗೆ ಉರುಲು; ಹರಕೆಹೊತ್ತ ಮೇಲೆ ವಿಚಾರಪಡಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನೀನು ದೇವರಿಗೆ ಹರಕೆ ಮಾಡುವ ಮೊದಲೇ ಎಚ್ಚರಿಕೆಯಿಂದ ಯೋಚಿಸು. ಹರಕೆ ಮಾಡಿದ ಮೇಲೆ ಹರಕೆ ಮಾಡಬಾರದಾಗಿತ್ತು ಎಂದು ಹೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:25
15 ತಿಳಿವುಗಳ ಹೋಲಿಕೆ  

“ ‘ಇದಲ್ಲದೆ ನೀನು ಆಣೆಯಿಟ್ಟರೆ ಅದನ್ನು ಮೀರಬಾರದು, ಕರ್ತನಿಗೆ ಮಾಡಿದ ಆಣೆಗಳನ್ನು ನೆರವೇರಿಸಲೇಬೇಕು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿರುವುದನ್ನು ಕೇಳಿದ್ದೀರಿ.


“ಯಾರಾದರೂ ಅತಿಕ್ರಮಿಸಿದ್ದರೆ ಮತ್ತು ಯೆಹೋವ ದೇವರ ಪರಿಶುದ್ಧ ಸಂಗತಿಗಳನ್ನು ಅರಿಯದೆ ಪಾಪಮಾಡಿದ್ದರೆ, ಅವರು ತಮ್ಮ ಅತಿಕ್ರಮಕ್ಕಾಗಿ ತಮ್ಮ ಹಿಂಡುಗಳಿಂದ ಕಳಂಕರಹಿತವಾದ ಟಗರನ್ನು ಸಮರ್ಪಿಸಬೇಕು. ಪವಿತ್ರ ಸ್ಥಳಕ್ಕೆ ನೇಮಕವಾದ ಎರಡು ಬೆಳ್ಳಿನಾಣ್ಯ ಅಥವಾ ಹೆಚ್ಚು ಬೆಲೆಬಾಳುವ ಟಗರನ್ನು ಹಿಂಡಿನಿಂದ ತಂದು ಪ್ರಾಯಶ್ಚಿತ್ತ ಬಲಿಗಾಗಿ ಯೆಹೋವ ದೇವರಿಗೆ ಅರ್ಪಿಸಬೇಕು.


ಬುದ್ಧಿಹೀನನ ಬಾಯಿಯು ಅವನ ನಾಶನ; ಅವನ ತುಟಿಗಳು ಅವನ ಪ್ರಾಣಕ್ಕೆ ಪಾಶ.


ಕೇಳಿಸಿಕೊಳ್ಳದೆ ಉತ್ತರ ಕೊಡುವವರಿಗೆ ಅದು ಮೂರ್ಖತನವೂ, ಅವಮಾನವೂ ಆಗಿದೆ.


ನೀನು ದುಡುಕಿ ಮಾತನಾಡಬೇಡ, ದೇವರ ಮುಂದೆ ಮಾತನಾಡಲು ನಿನ್ನ ಹೃದಯವು ಆತುರಪಡದೇ ಇರಲಿ. ದೇವರು ಪರಲೋಕದಲ್ಲಿದ್ದಾರೆ. ನೀನಾದರೋ ಭೂಮಿಯ ಮೇಲೆ ಇರುವೆ, ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.


ಆದರೆ ನೀನು ಹರಕೆ ಮಾಡದಿದ್ದರೆ, ನೀನು ದೋಷಿಯಾಗುವುದಿಲ್ಲ.


ನಿನ್ನ ತುಟಿಗಳಿಂದ ಹೊರಟಿದ್ದನ್ನು ಮಾಡುವುದಕ್ಕೆ ತಪ್ಪಬೇಡ. ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಬಾಯಿಯಿಂದಲೇ ನೀನು ಹರಕೆ ಮಾಡಿದಿಯಲ್ಲವೇ.


ನಿನ್ನ ನೆರೆಯವನ ದ್ರಾಕ್ಷಿ ತೋಟಕ್ಕೆ ಬಂದರೆ, ನಿನ್ನ ಮನಸ್ಸು ತೃಪ್ತಿಯಾಗುವವರೆಗೆ ಹಣ್ಣುಗಳನ್ನು ತಿನ್ನಬಹುದು. ಆದರೆ ನಿನ್ನ ಚೀಲದಲ್ಲಿ ಹಾಕಿಕೊಳ್ಳಬಾರದು.


ಅವರ ತಂದೆಗಳಾದರೂ, ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯವಾಡುವುದಕ್ಕೆ ಬಂದರೆ, ನಾವು ಅವರಿಗೆ, “ಯುದ್ಧದಲ್ಲಿ ನಾವು ಅವನವನಿಗೆ ಹೆಂಡತಿಯನ್ನು ದೊರಕಿಸಿದ ಕಾರಣ, ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಏಕೆಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು