Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:8 - ಕನ್ನಡ ಸಮಕಾಲಿಕ ಅನುವಾದ

8 ಅರಸನು ತನ್ನ ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವಾಗ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ರಾಜನು ನ್ಯಾಯಾಸನಾರೂಢನಾಗಿ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ರಾಜನು ನ್ಯಾಯಾಸನದ ಮೇಲೆ ವಿರಾಜಿಸುವಾಗ ಕೆಟ್ಟತನವನ್ನು ತೂರಿಬಿಡುವನು ದೃಷ್ಟಿಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರಾಜನು ನ್ಯಾಯಾಸನಾರೂಢನಾಗಿ ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರಾಜನು ನ್ಯಾಯತೀರ್ಪು ಮಾಡುವಾಗ ತನ್ನ ಕಣ್ಣುಗಳಿಂದ ದುಷ್ಟತನವನ್ನು ಶೋಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:8
13 ತಿಳಿವುಗಳ ಹೋಲಿಕೆ  

ಅರಸನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ, ಆಗ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವುದು.


ಜ್ಞಾನಿಯಾದ ಅರಸನು ದುಷ್ಟರನ್ನು ತೂರುವನು; ಅವರ ಮೇಲೆ ಕಣದ ಚಕ್ರವನ್ನು ಎಳೆಯುವನು.


ಅರಸನು ಬಡವರಿಗೆ ಪಕ್ಷಪಾತವಿಲ್ಲದೆ ನ್ಯಾಯತೀರಿಸಿದರೆ, ಅವನ ಸಿಂಹಾಸನವು ಎಂದೆಂದಿಗೂ ಸ್ಥಿರಗೊಳ್ಳುವುದು.


ನ್ಯಾಯ ಪ್ರಿಯ ರಾಜರೇ, ನೀವು ನೀತಿಯನ್ನು ಸ್ಥಿರಪಡಿಸುತ್ತೀರಿ. ನ್ಯಾಯವನ್ನೂ ನೀತಿಯನ್ನೂ ಯಾಕೋಬ್ಯರಲ್ಲಿ ನೀವು ಮನದಟ್ಟಾಗಿಸಿರುವಿರಿ.


ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.


ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು. ಏಕೆಂದರೆ ನೀತಿಯಿಂದ ಸಿಂಹಾಸನವು ಸ್ಥಾಪಿಸಲಾಗುತ್ತದೆ.


ನಿಜವಾಗಿಯೂ ನಿಮ್ಮ ಶತ್ರುಗಳು ಯೆಹೋವ ದೇವರೇ, ನಿಮ್ಮ ಶತ್ರುಗಳು ನಾಶವಾಗುವರು. ಕೇಡು ಮಾಡುವವರೆಲ್ಲರು ಚದರಿಹೋಗುವರು.


ಅರಸನು ಬಡವರ ನ್ಯಾಯ ಸ್ಥಾಪಿಸಲಿ. ಅವನು ಅಗತ್ಯತೆಯಲ್ಲಿರುವವರ ಮಕ್ಕಳನ್ನು ರಕ್ಷಿಸಲಿ. ದಬ್ಬಾಳಿಕೆ ಮಾಡುವವರನ್ನು ದಂಡಿಸಲಿ.


ಮೋಡವಿಲ್ಲದ ಮುಂಜಾನೆ ಸೂರ್ಯೋದಯದ ಸಮಯದಲ್ಲಿಯ ಉದಯದ ಬೆಳಕಿನಂತಿರುವನು. ಭೂಮಿಯಿಂದ ಹುಲ್ಲು ಮೊಳೆಯಿಸುವ ಮಳೆಯ ನಂತರದ ಪ್ರಕಾಶದಂತಿರುವನು.’


“ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.


ಅಲ್ಲಿ ನ್ಯಾಯತೀರಿಸಲು ನ್ಯಾಯಾಸನದ ಮಂಟಪವನ್ನು ಮಾಡಿ, ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ದೇವದಾರುಗಳನ್ನು ಹೊದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು