Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:1 - ಕನ್ನಡ ಸಮಕಾಲಿಕ ಅನುವಾದ

1 ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ನೀರಿನ ಕಾಲುವೆಗಳಂತೆ ಇವೆ; ತನಗೆ ಬೇಕಾದ ಕಡೆಗೆ ತಿರುಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:1
26 ತಿಳಿವುಗಳ ಹೋಲಿಕೆ  

ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ, ಆದರೆ ಯೆಹೋವ ದೇವರು ಅವನ ಹೆಜ್ಜೆಗಳನ್ನು ಸ್ಥಾಪಿಸುತ್ತಾರೆ.


ಮನುಷ್ಯನ ಹೆಜ್ಜೆಗಳನ್ನು ಯೆಹೋವ ದೇವರು ನಿರ್ದೇಶಿಸುತ್ತಾರೆ. ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಳ್ಳಬಲ್ಲನು?


ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು. ಏಕೆಂದರೆ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವುದಕ್ಕೆ ಅಸ್ಸೀರಿಯ ದೇಶದ ಅರಸನ ಹೃದಯವನ್ನು, ಅವರ ಕಡೆಗೆ ಮನಪರಿವರ್ತಿಸಿದ್ದರಿಂದ ಯೆಹೋವ ದೇವರು ಅವರನ್ನು ಸಂತೋಷಪಡಿಸಿದರು.


ಅವನನ್ನು ಎಲ್ಲಾ ಸಂಕಟಗಳಿಂದ ಬಿಡಿಸಿದರು. ದೇವರು ಯೋಸೇಫನಿಗೆ ಜ್ಞಾನವನ್ನು ಕೊಟ್ಟು ಈಜಿಪ್ಟಿನ ಅರಸನಾದ ಫರೋಹನ ಮೆಚ್ಚುಗೆಗೆ ಪಾತ್ರನಾಗುವಂತೆ ಮಾಡಿದರು. ಹೀಗೆ ಯೋಸೇಫನನ್ನು ಈಜಿಪ್ಟ್ ದೇಶದ ಮೇಲೆಯೂ ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಫರೋಹನು ನೇಮಿಸಿದನು.


ಮನುಷ್ಯನಲ್ಲಿ ತನ್ನ ಹೃದಯದ ಯೋಜನೆಗಳು, ಆದರೆ ಸರಿಯಾದ ಉತ್ತರಕೊಡುವ ಶಕ್ತಿ ಯೆಹೋವ ದೇವರಿಂದಲೇ ಬರುವವು.


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


ಅವರನ್ನು ಸೆರೆಹಿಡಿದವರ ಕರುಣೆ ತೋರುವಂತೆ ಮಾಡಿದರು.


ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು. ಅದು ಈಗಲೇ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸುವೆನು. ಮರುಭೂಮಿಯಲ್ಲಿ ನದಿಗಳನ್ನೂ ಉಂಟುಮಾಡುವೆನು.


ತಮ್ಮ ಜನರನ್ನು ದ್ವೇಷಿಸುವಂತೆಯೂ, ತಮ್ಮ ಸೇವಕರನ್ನು ಕುಯುಕ್ತಿಯಿಂದ ನಡೆಸುವಂತೆಯೂ ದೇವರು ಅವರ ಹೃದಯವನ್ನು ಮಾರ್ಪಡಿಸಿದನು.


ಅದಕ್ಕೆ ಅರಸನು ನನಗೆ, “ನಿನಗೆ ಬೇಕಾಗಿರುವುದೇನು?” ಎಂದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ


ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.


ನೀವು ಬುಗ್ಗೆಯನ್ನೂ, ಪ್ರವಾಹವನ್ನೂ ವಿಭಾಗ ಮಾಡಿದ್ದೀರಿ. ನೀವು ಯಾವಾಗಲೂ ತುಂಬಿ ಹರಿಯುವ ನದಿಗಳನ್ನು ಒಣಗಿಸಿದ್ದೀರಿ.


ಅಗಾಧಕ್ಕೆ, ‘ಒಣಗಿಸಿಬಿಡುವೆನು,’ ‘ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು,’ ಎಂದು ಅನ್ನುವವನೂ;


ಮಹಾಸಾಗರದ ಶಬ್ದಕ್ಕಿಂತಲೂ, ಸಮುದ್ರದ ಬಲವಾದ ಅಲೆಗಳಿಗಿಂತಲೂ ಉನ್ನತದಲ್ಲಿರುವ ಯೆಹೋವ ದೇವರು ಬಲಿಷ್ಠರಾಗಿದ್ದಾರೆ.


ಆರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.


ಮೂರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ನದಿಗಳ ಮೇಲೂ ನೀರಿನ ಬುಗ್ಗೆಗಳ ಮೇಲೂ ಸುರಿಯಲು, ಅವು ರಕ್ತವಾದವು.


ಸಮುದ್ರವೇ, ನಿನಗೆ ಏನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನ್ ನದಿಯೇ, ಏಕೆ ಹಿಂದಿರುಗುತ್ತೀ?


ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ನದಿ ಹಿಂದಿರುಗಿತು.


“ಅವನನ್ನು ಚೆನ್ನಾಗಿ ನೋಡಿಕೋ, ಅವನಿಗೆ ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಹೇಗೆ ಹೇಳುವನೋ, ಹಾಗೆಯೇ ಅವನಿಗೆ ಮಾಡು,” ಎಂದನು.


ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ, ನನ್ನ ಸೂಚಕಕಾರ್ಯಗಳನ್ನೂ, ನನ್ನ ಅದ್ಭುತಕಾರ್ಯಗಳನ್ನೂ ಈಜಿಪ್ಟ್ ದೇಶದಲ್ಲಿ ಹೆಚ್ಚಿಸುವೆನು.


ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು, ಈ ಪಟ್ಟಣದೊಳಗೆ ಬರುವುದೇ ಇಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ:


“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ.


ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು.


ಅರಸನು ಸಕಲ ಕನ್ಯೆಯರಿಗಿಂತ ಹೆಚ್ಚಾಗಿ ಎಸ್ತೇರಳನ್ನು ಮೆಚ್ಚಿಕೊಂಡನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯೆಯರಿಗಿಂತ ಹೆಚ್ಚು ದಯೆಯೂ ಮೆಚ್ಚುಗೆಯೂ ದೊರಕಿತು. ಆದ್ದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಎಸ್ತೇರಳನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಆರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು