Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:11 - ಕನ್ನಡ ಸಮಕಾಲಿಕ ಅನುವಾದ

11 ಪರಿಹಾಸ್ಯಕಾರರನ್ನು ಶಿಕ್ಷಿಸಿದರೆ, ಮುಗ್ಧರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ, ಅವನು ಪರಿಜ್ಞಾನವನ್ನು ಹೊಂದುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನೂ ಜ್ಞಾನವನ್ನು ಪಡೆಯುವನು, ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳಿವಳಿಕೆಯನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕುಚೋದ್ಯನಿಗೆ ದಂಡನೆಯಾದರೆ ಮುಗ್ಧನಿಗೆ ಜ್ಞಾನಗಳಿಕೆ; ಜ್ಞಾನಿಗೆ ಶಿಕ್ಷೆಯಾದರೆ ತಾನೆ ಹೊಂದುವನು ತಿಳುವಳಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಧರ್ಮನಿಂದಕನಿಗೆ ದಂಡನೆಯಾದರೆ [ನೋಡಿದ] ಮಂದಮತಿಯು ಜ್ಞಾನವನ್ನು ಪಡೆಯುವನು; ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳುವಳಿಕೆಯನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದುರಾಭಿಮಾನಿಯು ದಂಡಿಸಲ್ಪಟ್ಟರೆ ದಡ್ಡನು ಜ್ಞಾನಿಯಾಗುವನು. ಜ್ಞಾನಿಗೆ ಉಪದೇಶಿಸಿದರೆ ತಾನೇ ತಿಳುವಳಿಕೆಯನ್ನು ಹೊಂದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:11
17 ತಿಳಿವುಗಳ ಹೋಲಿಕೆ  

ಪರಿಹಾಸ್ಯಗಾರನನ್ನು ಹೊಡೆದರೆ, ಮುಗ್ಧರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿದರೆ, ಅವನು ಪರಿಜ್ಞಾನವನ್ನು ಗ್ರಹಿಸುವನು.


ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.


ಜ್ಞಾನಿಗೆ ಶಿಕ್ಷಣ ನೀಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿಕೊಳ್ಳುವನು.


ಇದನ್ನು ಅನನೀಯನು ಕೇಳಿಸಿಕೊಂಡಾಗ, ಕೆಳಗೆ ಬಿದ್ದು ಸತ್ತುಹೋದನು. ನಡೆದ ಸಂಗತಿಯನ್ನು ಕೇಳಿದವರೆಲ್ಲರಿಗೂ ಮಹಾ ಭಯವು ಉಂಟಾಯಿತು.


ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು.


ಅದೇ ಗಳಿಗೆಯಲ್ಲಿ, ಮಹಾ ಭೂಕಂಪ ಉಂಟಾಗಿ ಆ ಪಟ್ಟಣದ ಹತ್ತರಲ್ಲೊಂದು ಭಾಗವು ಬಿದ್ದುಹೋಯಿತು. ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರಿಗೆ ಮಹಿಮೆಯನ್ನು ಸಲ್ಲಿಸಿದರು.


ವಿವೇಕವುಳ್ಳವನ ಹೃದಯವು ಪರಿಜ್ಞಾನವನ್ನು ಹುಡುಕುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನೇ ತಿನ್ನುತ್ತದೆ.


ಜ್ಞಾನಿಯು ಜ್ಞಾನೋಕ್ತಿಗಳನ್ನು ಕೇಳಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ; ವಿವೇಚಿಸುವವರು ಮಾರ್ಗದರ್ಶನವನ್ನು ಹೊಂದಿಕೊಳ್ಳಲಿ.


ಆಗ ಅವನ ಪಟ್ಟಣದ ಜನರೆಲ್ಲರೂ ಅವನು ಸಾಯುವಂತೆ ಅವನ ಮೇಲೆ ಕಲ್ಲೆಸೆಯಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಇಸ್ರಾಯೇಲರಲ್ಲಿ ಇದನ್ನು ಕೇಳಿ ಭಯಪಡುವರು.


ಇಸ್ರಾಯೇಲರೆಲ್ಲಾ ಇದನ್ನು ಕೇಳಿ ಭಯಪಟ್ಟು, ಇನ್ನು ಮೇಲೆ ಕೆಟ್ಟದ್ದನ್ನು ಮಾಡದೆ ಇರುವರು.


ಆಗ ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಓಡಿಹೋದರು, ಏಕೆಂದರೆ ಅವರು, “ಭೂಮಿಯು ನಮ್ಮನ್ನು ಸಹ ನುಂಗಿಬಿಟ್ಟೀತು,” ಎಂದು ಹೆದರಿದರು.


ಪರಿಹಾಸ್ಯ ಮಾಡುವವನನ್ನು ಗದರಿಸುವವನು ತನ್ನನ್ನು ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು