Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:13 - ಕನ್ನಡ ಸಮಕಾಲಿಕ ಅನುವಾದ

13 ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನೇ ಕೂಗಿದಾಗ ಯಾರೂ ಅವನಿಗೆ ಉತ್ತರ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಡವನ ಮೊರೆಗೆ ಕಿವಿ ಮುಚ್ಚಿಕೊಳ್ಳುವವನೇ, ನೀನೇ ಮೊರೆಯಿಡುವಾಗ ಉತ್ತರಕೊಡುವವರಾರು ನಿನಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬಡವನ ಮೊರೆಗೆ ಕಿವಿಮುಚ್ಚಿಕೊಳ್ಳುವವನು ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಡವರಿಗೆ ಸಹಾಯಮಾಡದವನು ತಾನೇ ಕೊರತೆಯಲ್ಲಿರುವಾಗ ಯಾರೂ ಅವನಿಗೆ ಸಹಾಯ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:13
20 ತಿಳಿವುಗಳ ಹೋಲಿಕೆ  

ಬಡವರಿಗೆ ದಾನ ಮಾಡುವವನು, ಕೊರತೆ ಪಡುವುದಿಲ್ಲ; ಆದರೆ ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುವವನಿಗೆ ಅನೇಕ ಶಾಪಗಳು.


ನಿಮಗೆ ವಿರೋಧವಾಗಿ ತಪ್ಪುಮಾಡುವವರನ್ನು ನೀವು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮನ್ನು ಕ್ಷಮಿಸುವರು.


“ಆಗ ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರ ಕೊಡೆನು. ಅವರು ನನ್ನನ್ನು ಆತುರದಿಂದ ಹುಡುಕುವರು, ಆದರೆ ಅವರು ನನ್ನನ್ನು ಕಂಡುಕೊಳ್ಳುವುದಿಲ್ಲ.


ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ಹಾವಿನ ವಿಷದ ಹಾಗೆ ಅವರಲ್ಲಿ ವಿಷ ಇದೆ. ಘಟಸರ್ಪದ ಹಾಗೆ ಮಂದವಾಗಿದ್ದಾರೆ.


ಅವರು ಸಹಾಯಕ್ಕಾಗಿ ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇರಲಿಲ್ಲ ಯೆಹೋವ ದೇವರಿಗೂ ಮೊರೆಯಿಟ್ಟರು, ಆದರೆ ಅವರೂ ಉತ್ತರ ಕೊಡಲಿಲ್ಲ.


ಈ ಮಾತಿಗೆ ಅವರು ತಮ್ಮ ಕಿವಿಗಳನ್ನು ಮುಚ್ಚಿಕೊಂಡು, ಆರ್ಭಟಿಸುತ್ತಾ, ಅವನ ಕಡೆಗೆ ಓಡಿಹೋಗಿ ಅವನನ್ನು ಹೊಡೆದರು.


ನಾನು ನನ್ನ ಬಟ್ಟೆಯನ್ನು ಝಾಡಿಸಿ, “ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಅವನ ಆಸ್ತಿಪಾಸ್ತಿಯಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಿ, ಬರಿದಾಗಲಿ,” ಎಂದೆನು. ಅದಕ್ಕೆ ಸಭೆಯವರೆಲ್ಲರೂ, “ಆಮೆನ್” ಎಂದು ಹೇಳಿ ಯೆಹೋವ ದೇವರನ್ನು ಸ್ತುತಿಸಿದರು. ಜನರು ತಾವು ಕೊಟ್ಟ ಮಾತಿನ ಪ್ರಕಾರ ನಡೆದುಕೊಂಡರು.


ಮನೆಯಜಮಾನರು ಒಂದು ಸಾರಿ ಎದ್ದು ಬಾಗಿಲನ್ನು ಮುಚ್ಚಿಕೊಂಡರೆ, ನೀವು ಹೊರಗೆ ನಿಂತುಕೊಂಡು ಬಾಗಿಲನ್ನು ತಟ್ಟುತ್ತಾ, ‘ಸ್ವಾಮಿ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದು ಹೇಳುವುದಕ್ಕೆ ಆರಂಭಿಸಿದಾಗ, “ಆತನು ನಿಮಗೆ ಉತ್ತರವಾಗಿ, ‘ನೀವು ಯಾರು? ಎಲ್ಲಿಯವರೋ ನಾನು ನಿಮ್ಮನ್ನು ಅರಿಯೆನು,’ ಎಂದು ಹೇಳುವನು.


ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರ ಸಹೋದರಿಯರನ್ನು ನೋಡಿ, ಕರುಣೆ ತೋರಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವುದು ಹೇಗೆ?


ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ನಾನು ರಕ್ಷಿಸುವವನಾಗಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು