Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:14 - ಕನ್ನಡ ಸಮಕಾಲಿಕ ಅನುವಾದ

14 ಗುಟ್ಟಾಗಿ ಕೊಡುವ ಬಹುಮಾನವು ಕೋಪವನ್ನು ಅಡಗಿಸುವುದು; ಮಡಿಲಲ್ಲಿ ಇಟ್ಟ ಲಂಚವು ಮಹಾ ಕೋಪವನ್ನು ಆರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಗುಟ್ಟಾಗಿ ಬಹುಮಾನ ಕೊಟ್ಟು ಸಿಟ್ಟನ್ನು ಅಡಗಿಸುತ್ತಾರೆ; ಮಡಿಲಲ್ಲಿ ಲಂಚವನ್ನು ಮುಚ್ಚಿಟ್ಟು ಕೋಪವನ್ನು ಆರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಗುಪ್ತ ಬಹುಮಾನವು ಕೋಪವನ್ನಾರಿಸುವದು; ಮಡಲಲ್ಲಿಟ್ಟ ಲಂಚವು ಬಲು ಸಿಟ್ಟನ್ನಣಗಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿನ್ನ ಮೇಲೆ ಕೋಪಗೊಂಡಿರುವವನಿಗೆ ಒಂದು ಉಡುಗೊರೆಯನ್ನು ಗುಟ್ಟಾಗಿ ಕೊಡು. ಗುಟ್ಟಾಗಿ ಕೊಟ್ಟ ಉಡುಗೊರೆಯು ಮಹಾ ಕೋಪವನ್ನೂ ಅಡಗಿಸಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:14
8 ತಿಳಿವುಗಳ ಹೋಲಿಕೆ  

ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ.


ಅನೇಕರು ಅಧಿಪತಿಯಿಂದ ಸಹಾಯ ಪಡೆಯುತ್ತಾರೆ. ಕಾಣಿಕೆಗಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.


ಕೊಡುವವನ ಕಣ್ಣಿಗೆ ಲಂಚವು ಆಕರ್ಷಣೆಯಾಗಿದೆ; ಪ್ರತಿ ತಿರುವಿನಲ್ಲಿಯೂ ಯಶಸ್ಸು ಬರುತ್ತದೆ ಎಂದು ಅವರು ಭಾವಿಸುತ್ತಾರೆ.


ನ್ಯಾಯದ ಮಾರ್ಗಗಳನ್ನು ತಿರುಗಿಸಿಬಿಡುವುದಕ್ಕೆ ದುಷ್ಟನು ಗುಪ್ತವಾಗಿ ಲಂಚವನ್ನು ತೆಗೆದುಕೊಳ್ಳುತ್ತಾನೆ.


ಅವಳು ತನಗೆ ತಂದದ್ದನ್ನು ದಾವೀದನು ತೆಗೆದುಕೊಂಡು ಅವಳಿಗೆ, “ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ನಾನು ನಿನ್ನ ಮಾತನ್ನು ಕೇಳಿ ನಿನ್ನ ಮುಖ ದಾಕ್ಷಿಣ್ಯವನ್ನು ನೋಡಿದೆನು,” ಎಂದನು.


ಆಗ ಅವರ ತಂದೆ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮೊಂದಿಗೆ ಇಟ್ಟುಕೊಂಡು, ಆ ಮನುಷ್ಯನಿಗೆ ಕಾಣಿಕೆ ತೆಗೆದುಕೊಂಡು ಹೋಗಿರಿ. ಅಂದರೆ, ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಆಕ್ರೋಡು ಮತ್ತು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.


ಇದಲ್ಲದೆ, ‘ನಿನ್ನ ದಾಸ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು,’ ” ಎಂದು ಆಜ್ಞಾಪಿಸಿದನು. ಏಕೆಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ಕಾಣುವೆನು. ಅವನು ನನ್ನನ್ನು ಅಂಗೀಕರಿಸುವನೇನೋ ಎಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು