Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:15 - ಕನ್ನಡ ಸಮಕಾಲಿಕ ಅನುವಾದ

15 ನ್ಯಾಯತೀರಿಸುವುದು ನೀತಿವಂತರಿಗೆ ಸಂತೋಷ; ಆದರೆ ಕೆಟ್ಟದ್ದನ್ನು ಮಾಡುವವರಿಗೆ ಭೀತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ, ಕೆಡುಕರಿಗೆ ಕೇಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನ್ಯಾಯವಾದ ತೀರ್ಪಿನಿಂದ ಸಜ್ಜನರಿಗೆ ಸಂತಸ; ದುರ್ಜನರಿಗಾದರೊ ಅದು ತರುತ್ತದೆ ಸಂಕಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ; ಕೆಡುಕರಿಗೆ ಕೇಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನ್ಯಾಯವಾದ ತೀರ್ಪು ಒಳ್ಳೆಯವರಿಗೆ ಸಂತೋಷ; ಕೆಡುಕರಿಗೆ ಬಹುಭಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:15
16 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಮಾರ್ಗವು ನಿರ್ದೋಷಿಗಳಿಗೆ ಆಶ್ರಯವಾಗಿದೆ; ಆದರೆ ಕೇಡು ಮಾಡುವವರಿಗೆ ಅದು ವಿನಾಶಕರವಾಗಿದೆ.


ಆಗ ನಾನು ಅವರಿಗೆ, ‘ನಿಮ್ಮನ್ನು ನಾನೆಂದೂ ಅರಿಯೆನು, ನಿಯಮ ಮೀರಿ ಬಾಳಿದವರೇ ನನ್ನಿಂದ ತೊಲಗಿಹೋಗಿರಿ!’ ಎಂದು ಹೇಳಿಬಿಡುವೆನು.


ಸಂತೋಷಪಟ್ಟು ನೀತಿಯನ್ನು ಕೈಗೊಳ್ಳುವವರನ್ನೂ, ನಿಮ್ಮ ಮಾರ್ಗಗಳನ್ನು ಜ್ಞಾಪಕ ಮಾಡುವವನನ್ನೂ ನೀವು ಸಹಾಯಮಾಡಲು ಬರುತ್ತೀರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಆದ್ದರಿಂದ ನೀವು ಬೇಸರಗೊಂಡಿರುವಿರಿ. ಹಾಗಾದರೆ, ನಮ್ಮಂಥವರಿಗೆ ರಕ್ಷಣೆ ಇದೆಯೇ?


ಜನರು ತಮ್ಮ ಜೀವಮಾನದಲ್ಲಿ ಸಂತೋಷವಾಗಿದ್ದು ಒಳ್ಳೆಯದನ್ನು ಮಾಡುವುದಕ್ಕಿಂತ ಉತ್ತಮವಾದದ್ದೇನೂ ಇಲ್ಲವೆಂದು ನಾನು ಬಲ್ಲೆನು.


ನೀತಿವಂತನು ದುಷ್ಟರ ಮನೆಯನ್ನು ಗಮನಿಸುತ್ತಾನೆ; ದುಷ್ಟರನ್ನು ಕೇಡಿಗೆ ತಳ್ಳುವನು.


ಮಗನೇ, ಬೇರೆಯವನ ಹೆಂಡತಿಗೆ ವಶವಾಗುವುದೇಕೆ? ಅನ್ಯಳ ಎದೆಯನ್ನೇಕೆ ಅಪ್ಪಿಕೊಳ್ಳುವೆ?


ನಿಮ್ಮ ತೀರ್ಪುಗಳಲ್ಲಿ ಉಲ್ಲಾಸಗೊಂಡು, ನಿಮ್ಮ ವಾಕ್ಯವನ್ನು ತಿರಸ್ಕರಿಸದಿರುವೆನು.


ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಭಯಪಟ್ಟು ಅವರ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವವರು ಧನ್ಯರು.


ನನ್ನ ದೇವರೇ, ನಿಮ್ಮ ಚಿತ್ತವನ್ನು ಮಾಡಲು ಬಯಸುತ್ತೇನೆ; ನಿಮ್ಮ ನಿಯಮವು ನನ್ನ ಅಂತರಂಗದಲ್ಲಿ ಇದೆ.”


ಏಕೆಂದರೆ ನಾನು ಹೃದಯಪೂರ್ವಕವಾಗಿ ದೇವರ ನಿಯಮದಲ್ಲಿ ಹರ್ಷಗೊಳ್ಳುವವನಾಗಿದ್ದೇನೆ.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನು ಮಾಡಿ ಅವರ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ನಿಮ್ಮ ನಿಯಮವು ನನಗೆ ಆನಂದವಾಗಿರದಿದ್ದರೆ, ನನ್ನ ಕಷ್ಟದಲ್ಲಿ ನಾನು ನಾಶವಾಗುತ್ತಿದ್ದೆನು.


ವಿವೇಕದ ಹಾದಿಯಿಂದ ತಪ್ಪಿಸಿಕೊಳ್ಳುವವನು ಸತ್ತವರ ಸಹವಾಸದಲ್ಲಿ ವಿಶ್ರಾಂತಿ ಪಡೆಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು