Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:25 - ಕನ್ನಡ ಸಮಕಾಲಿಕ ಅನುವಾದ

25 ಸೋಮಾರಿಯ ಆಸೆಯು ಅವನನ್ನು ಕೊಲ್ಲುತ್ತದೆ; ಅವನ ಕೈಗಳು ದುಡಿಯುವುದಕ್ಕೆ ನಿರಾಕರಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು, ಅವನ ಕೈಗಳು ದುಡಿಯಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮೈಗಳ್ಳನನ್ನು ಕೊಲ್ಲುವುದು ಅವನ ಇಚ್ಛೆಯೆ; ಬಗ್ಗದು ಅವನ ಕೈ ದುಡಿಮೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸೋಮಾರಿಯ ಆಶೆಯು ಅವನನ್ನು ಕೊಲ್ಲುವದು, ಅವನ ಕೈಗಳು ದುಡಿಯಲೊಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸೋಮಾರಿಯ ಆಸೆ ಅವನನ್ನು ಉಪವಾಸದಿಂದ ಸಾಯಿಸುವುದು, ಯಾಕೆಂದರೆ ಅವನು ದುಡಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:25
13 ತಿಳಿವುಗಳ ಹೋಲಿಕೆ  

ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ; ಆದರೆ ಶ್ರಮಪಡುವವರ ಆಸೆಗಳು ಸಂಪೂರ್ಣವಾಗಿ ಈಡೇರುವವು.


ಚುರುಕು ಕೈಯುಳ್ಳವನು ಆಳುವನು; ಸೋಮಾರಿಗಳು ಗುಲಾಮರಾಗುವರು.


“ಅದಕ್ಕೆ ಅವನ ಯಜಮಾನನು ಉತ್ತರವಾಗಿ, ‘ಮೈಗಳ್ಳನಾದ ದುಷ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.


ಜ್ಞಾನದಿಂದ ಉತ್ತರಿಸಬಲ್ಲ ಏಳು ಜನರಿಗಿಂತ, ತಾನೇ ಜ್ಞಾನಿ ಎಂದು ಸೋಮಾರಿಯು ಭಾವಿಸುತ್ತಾನೆ.


ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ, ಅವನು ಅದನ್ನು ಮತ್ತೆ ತನ್ನ ಬಾಯಿಗೆ ತರುವುದಿಲ್ಲ!


ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ. ಆದರೆ ಯಥಾರ್ಥವಂತನ ಮಾರ್ಗವು ರಾಜಮಾರ್ಗ.


ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವುದಿಲ್ಲ, ಆದರೆ ಶ್ರಮಪಡುವವರು ಅದನ್ನು ತೃಪ್ತಿಯಿಂದ ತಿನ್ನುತ್ತಾರೆ.


ಮೈಗಳ್ಳನು ಮಳೆಗಾಲದಲ್ಲಿ ಉಳುಮೆ ಮಾಡುವುದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಅಪೇಕ್ಷಿಸಿದರೂ ಏನೂ ಸಿಕ್ಕುವುದಿಲ್ಲ.


ಸೋಮಾರಿಯು, “ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಭೀಕರ ಸಿಂಹ ಇದೆ,” ಎಂದು ಹೇಳುತ್ತಾನೆ.


ಸೋಮಾರಿಯು, “ಹೊರಗೆ ಸಿಂಹವಿದೆ! ಅದು ನನ್ನನ್ನು ಬೀದಿಗಳಲ್ಲಿ ಕೊಂದುಹಾಕುತ್ತದೆ,” ಎಂದು ಹೇಳುತ್ತಾನೆ.


ಯೆಹೋಶುವನ ಬಳಿಗೆ ತಿರುಗಿಬಂದು ಅವನಿಗೆ, “ಜನರೆಲ್ಲರೂ ಹೋಗುವ ಅವಶ್ಯಕತೆ ಇಲ್ಲ, ಆಯಿ ಎಂಬ ಪಟ್ಟಣವನ್ನು ಹೊಡೆಯುವುದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಹೋದರೆ ಸಾಕು. ಸೈನ್ಯವನ್ನು ಕಳುಹಿಸಿ ದಣಿಸಬೇಡ. ಏಕೆಂದರೆ ಸ್ವಲ್ಪ ಜನರು ಮಾತ್ರ ಅಲ್ಲಿ ಇದ್ದಾರೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು