Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:28 - ಕನ್ನಡ ಸಮಕಾಲಿಕ ಅನುವಾದ

28 ಸುಳ್ಳುಸಾಕ್ಷಿಯವನು ನಾಶವಾಗುವನು; ಆದರೆ ಕೇಳಿದ್ದನ್ನೇ ನುಡಿಯುವವನ ಸಾಕ್ಷಿ ಸದಾ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಸುಳ್ಳು ಸಾಕ್ಷಿಯು ಅಳಿದುಹೋಗುವುದು, ಕೇಳಿದ್ದನ್ನೇ ಹೇಳುವವನ ಸಾಕ್ಷಿಯು ಶಾಶ್ವತವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸುಳ್ಳು ಸಾಕ್ಷಿ ಹೇಳುವವನೇ ಅಳಿದುಹೋಗುವನು; ಕೇಳಿದ್ದನ್ನೆ ಹೇಳುವವನ ಸಾಕ್ಷಿ ಅಳಿಯದೆ ಉಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಸುಳ್ಳುಸಾಕ್ಷಿಯು ಅಳಿದುಹೋಗುವದು; ಕೇಳಿದ್ದದ್ದನ್ನೇ ಹೇಳುವವನ ಸಾಕ್ಷಿಯು ಶಾಶ್ವತವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಸುಳ್ಳುಸಾಕ್ಷಿಯು ನಾಶವಾಗುವನು. ಆದರೆ ಎಚ್ಚರಿಕೆಯಿಂದ ಕೇಳುವವನು ಮಾತಾಡುತ್ತಲೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:28
11 ತಿಳಿವುಗಳ ಹೋಲಿಕೆ  

“ನಾನು ನಂಬಿದೆನು, ಆದ್ದರಿಂದ ಮಾತನಾಡುವೆನು,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ. ಅದೇ ನಂಬಿಕೆಯ ಆತ್ಮವನ್ನು ಹೊಂದಿದವರಾದ ನಾವು ಕೂಡಾ ನಂಬಿದ್ದೇವೆ, ಆದ್ದರಿಂದ ನಾವು ಮಾತನಾಡುತ್ತೇವೆ.


ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರಲಾರನು.


ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ; ಸುಳ್ಳಾಡುವವನು ಹಾಳಾಗಿ ಹೋಗುವನು.


ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ.


ಆದರೆ ಅವರು, “ನಿನಗೆ ಹುಚ್ಚುಹಿಡಿದಿದೆ,” ಎಂದರು. ತಾನು ಹೇಳುವುದು ನಿಜ ಎಂದು ಆಕೆ ಒತ್ತಿ ಹೇಳುತ್ತಿರಲು ಅವರು, “ಅದು ಅವನ ದೂತನೇ ಆಗಿರಬೇಕು,” ಎಂದರು.


ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಖಡ್ಗ, ಹರಿತವಾದ ಬಾಣವಾಗಿದ್ದಾನೆ.


ಸತ್ಯದ ತುಟಿಯು ಸದಾ ಸ್ಥಿರಗೊಳ್ಳುವುದು, ಸುಳ್ಳಾಡುವ ನಾಲಿಗೆಯು ಕ್ಷಣಿಕ.


ಅಸತ್ಯವನ್ನಾಡುವ ಸುಳ್ಳುಸಾಕ್ಷಿ ಮತ್ತು ಸಹೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ.


“ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುರುದ್ದೇಶಪೂರಿತ ಸಾಕ್ಷಿಯಾಗುವ ಮೂಲಕ ದುಷ್ಟರಿಗೆ ಸಹಾಯಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು