Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:5 - ಕನ್ನಡ ಸಮಕಾಲಿಕ ಅನುವಾದ

5 ಶ್ರದ್ಧೆಯುಳ್ಳವನ ಯೋಜನೆಗಳಿಂದ ಸಮೃದ್ಧಿ; ಆತುರತೆಯು ಬಡತನಕ್ಕೆ ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗೆಲ್ಲಾ ಕೊರತೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಶ್ರಮಜೀವಿಗಳ ಯೋಜನೆಯಿಂದ ಸಮೃದ್ಧಿ; ತಾಳ್ಮೆಯಿಲ್ಲದ ತ್ವರೆಯಿಂದ ಅಧೋಗತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ; ಆತುರಪಡುವವರಿಗೆಲ್ಲಾ ಕೊರತೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕಷ್ಟಪಟ್ಟು ದುಡಿಯುವವನ ಆಲೋಚನೆಗಳು ಲಾಭಕ್ಕೆ ನಡೆಸುತ್ತವೆ. ಆದರೆ ಆತುರತೆಯಲ್ಲೇ ಇರುವವನು ಬಡವನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:5
10 ತಿಳಿವುಗಳ ಹೋಲಿಕೆ  

ಆಲಸ್ಯದ ಕೈ ದರಿದ್ರನನ್ನಾಗಿ ಮಾಡುವದು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.


ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ; ಆದರೆ ಶ್ರಮಪಡುವವರ ಆಸೆಗಳು ಸಂಪೂರ್ಣವಾಗಿ ಈಡೇರುವವು.


ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.


ತಾಳ್ಮೆಯುಳ್ಳವನು ಬಹು ವಿವೇಕಿ, ಮುಂಗೋಪಿಯು ಮೂರ್ಖತನವನ್ನು ಎತ್ತಿಹಿಡಿಯುವನು.


ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ; ತನಗೆ ಬಡತನವು ಬರುವುದನ್ನು ಅವನು ಯೋಚಿಸುವುದಿಲ್ಲ.


ಪ್ರಾರಂಭದಲ್ಲಿ ತ್ವರೆಯಾಗಿ ಪಡೆದುಕೊಂಡ ಆಸ್ತಿಯೂ ಅಂತ್ಯದಲ್ಲಿ ಆಶೀರ್ವಾದವಾಗಿರುವುದಿಲ್ಲ.


ಪರಿಜ್ಞಾನವಿಲ್ಲದ ಆಸಕ್ತಿಯು ಯುಕ್ತವಲ್ಲ; ತನ್ನ ಹೆಜ್ಜೆಗಳಲ್ಲಿ ದುಡುಕುವವನು ದಾರಿ ತಪ್ಪುವನು.


ದುಡುಕಿ ಮಾತನಾಡುವ ವ್ಯಕ್ತಿಯನ್ನು ನೀನು ನೋಡಿದ್ದೀಯೋ? ಅಂಥವನಿಗಿಂತಲೂ ಬುದ್ಧಿಹೀನನ ವಿಷಯದಲ್ಲಿ ಹೆಚ್ಚು ನಿರೀಕ್ಷೆ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು