Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:9 - ಕನ್ನಡ ಸಮಕಾಲಿಕ ಅನುವಾದ

9 ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜಗಳಗಂಟಿಯೊಡನೆ ಮಹಡಿ ಮನೆಯಲ್ಲಿರುವುದಕ್ಕಿಂತ ಗುಡಿಸಲಿನ ಮೂಲೆಯಲ್ಲಿ ಒಂಟಿಯಾಗಿ ವಾಸಿಸುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವದಕ್ಕಿಂತಲೂ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮನೆಯೊಳಗೆ ವಾದಿಸುವ ಹೆಂಡತಿಯ ಜೊತೆಯಲ್ಲಿ ವಾಸಿಸುವುದಕ್ಕಿಂತ ಮನೆಯ ಮೇಲ್ಛಾವಣಿಗೆಯ ಮೂಲೆಯಲ್ಲಿ ವಾಸಿಸುವುದೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:9
9 ತಿಳಿವುಗಳ ಹೋಲಿಕೆ  

ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕರನು; ಜಗಳವಾಡುವ ಹೆಂಡತಿ ಯಾವಾಗಲೂ ತೊಟ್ಟಿಕ್ಕುವ ಹನಿ.


ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು.


ಕಾಡುವ ಜಗಳಗಂಟಿ ಹೆಂಡತಿಯೊಂದಿಗೆ ವಾಸಮಾಡುವುದಕ್ಕಿಂತ, ಮರಭೂಮಿಯಲ್ಲಿ ವಾಸಿಸುವುದು ಲೇಸು.


ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ಆದರೆ ನಾಚಿಕೆ ಪಡಿಸುವವಳು ಅವನ ಎಲುಬುಗಳಿಗೆ ಕ್ಷಯ ರೋಗದಂತೆ ಇರುವಳು.


ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸಕ್ಕಿಂತಲೂ, ಪ್ರೀತಿ ಇರುವಲ್ಲಿ ಸಸ್ಯಾಹಾರ ಊಟವೇ ಉತ್ತಮ.


ವಿವಾದದೊಂದಿಗೆ ತುಂಬಿದ ಔತಣದ ಮನೆಗಿಂತ, ಶಾಂತಿ ಸಮಾಧಾನದ ಒಣ ತುತ್ತು ಮೇಲು.


ದೋಷಿಯ ಮಾರ್ಗವು ಡೊಂಕು, ಮುಗ್ಧನ ನಡತೆ ಯಥಾರ್ಥ.


ದುಷ್ಟರು ಕೇಡನ್ನು ಅಪೇಕ್ಷಿಸುತ್ತಾರೆ; ಅವನು ತನ್ನ ನೆರೆಯವನಿಗೂ ಯಾವ ದಯೆಯನ್ನೂ ತೋರಿಸನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು