Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:11 - ಕನ್ನಡ ಸಮಕಾಲಿಕ ಅನುವಾದ

11 ಶುದ್ಧ ಹೃದಯವನ್ನು ಪ್ರೀತಿಸಿ, ಕೃಪೆಯಿಂದ ಮಾತನಾಡುವವನಿಗೆ ಅರಸನು ಸ್ನೇಹಿತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೃದಯಶುದ್ಧಿಯನ್ನು ಅಪೇಕ್ಷಿಸುವ ಮತ್ತು ಸವಿಮಾತನಾಡುವ ಮನುಷ್ಯನಿಗೆ ರಾಜನ ಸ್ನೇಹವು ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸವಿಮಾತಿನಿಂದ ಅರಸನ ಗೆಳೆತನ ಪಡೆಯಬಹುದು; ಸರ್ವೇಶ್ವರ ಬಯಸುವುದು ಅಂತರಂಗ ಶುದ್ಧಿಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೃದಯಶುದ್ಧಿಯನ್ನಪೇಕ್ಷಿಸುವ ಸವಿಮಾತಾಡುವ ಮನುಷ್ಯನಿಗೆ ರಾಜನ ಸ್ನೇಹವು ದೊರೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀನು ಶುದ್ಧಹೃದಯವನ್ನೂ ಸವಿಮಾತುಗಳನ್ನೂ ಪ್ರೀತಿಸಿದರೆ ರಾಜನು ನಿನಗೆ ಸ್ನೇಹಿತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:11
17 ತಿಳಿವುಗಳ ಹೋಲಿಕೆ  

ಹೃದಯದಲ್ಲಿ ಶುದ್ಧರಾಗಿರುವವರು ಧನ್ಯರು, ಅವರು ದೇವರನ್ನು ಕಾಣುವರು.


ನೀತಿಯ ತುಟಿಗಳಲ್ಲಿ ಅರಸರು ಆನಂದಿಸುತ್ತಾರೆ, ಯಥಾರ್ಥವಾದಿಯನ್ನು ಅವರು ಪ್ರೀತಿಸುತ್ತಾರೆ.


ಜ್ಞಾನವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ಆದರೆ ಮಾನಗೇಡಿ ಸೇವಕನ ಮೇಲೆ ಅರಸನ ಕೋಪ ಎರಗುತ್ತದೆ.


ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು; ನಿಷ್ಕಳಂಕವಾಗಿ ನಡೆಯುವವರೇ ನನ್ನ ಸೇವೆಯಲ್ಲಿರಬೇಕು.


ನೀವು ಎಲ್ಲಾ ಮನುಷ್ಯರಿಗಿಂತ ಅತಿ ಸುಂದರರಾಗಿದ್ದೀರಿ. ನಿಮ್ಮ ತುಟಿಗಳಲ್ಲಿ ಕೃಪೆಯ ಅಭಿಷೇಕವಿದೆ; ಆದ್ದರಿಂದ ದೇವರು ಎಂದೆಂದಿಗೂ ನಿಮ್ಮನ್ನು ಆಶೀರ್ವದಿಸಿದ್ದಾರೆ.


ಎಲ್ಲರೂ ಅವರನ್ನು ಹೊಗಳಿದರು. ಯೇಸುವಿನ ಬಾಯಿಂದ ಬಂದ ಕೃಪೆಯುಳ್ಳ ಮಾತುಗಳಿಗೆ ಆಶ್ಚರ್ಯಪಟ್ಟು, “ಈತನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.


ಆಗ ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನ್ ಪ್ರಾಂತದಲ್ಲಿ ಉನ್ನತ ಪದವಿಗೆ ತಂದನು.


ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.


ಶುದ್ಧಹಸ್ತಗಳೂ ನಿರ್ಮಲವಾದ ಹೃದಯವೂ ಉಳ್ಳವನಾಗಿದ್ದು; ವಂಚನೆಯಿಂದ ಮುಕ್ತನಾಗಿ, ಮೋಸದಿಂದ ಆಣೆ ಇಡದೆಯೂ ಇರುವವನೇ.


ಯೆಹೋವ ದೇವರ ಕಣ್ಣುಗಳು ತಿಳುವಳಿಕೆಯನ್ನು ಕಾಯುತ್ತವೆ; ಅವರು ದ್ರೋಹಿಯ ಮಾತುಗಳನ್ನು ಕೆಡವಿ ಹಾಕುತ್ತಾರೆ.


ಜ್ಞಾನಿಯ ಮಾತುಗಳು ಹಿತಕರ. ಆದರೆ ಬುದ್ಧಿಹೀನನ ಮಾತುಗಳು ಅವನಿಗೆ ವಿನಾಶಕರ.


ನಾತಾನನ ಮಗ ಅಜರ್ಯನು ಅಧಿಪತಿಗಳ ಮೇಲ್ವಿಚಾರಕನು. ನಾತಾನನ ಮಗ ಜಾಬೂದನು ಯಾಜಕನು ಹಾಗು ಅರಸನ ವೈಯಕ್ತಿಕ ಸಲಹೆಗಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು