Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:23 - ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ ಯೆಹೋವ ದೇವರು ಅವರ ವ್ಯಾಜ್ಯವನ್ನು ನಡೆಸಿ, ಸೂರೆ ಮಾಡಿದವರ ಪ್ರಾಣವನ್ನು ಸೂರೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರನೇ ಅವರ ಪರವಾಗಿ ವಾದಿಸುವನು; ಸೂರೆಮಾಡಬಂದವರ ಪ್ರಾಣವನ್ನು ಆತನೆ ಸೂರೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನೇ ಅವರ ವ್ಯಾಜ್ಯವನ್ನು ನಡಿಸಿ ಸೂರೆಮಾಡಿದವರ ಜೀವವನ್ನು ಸೂರೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯಾಕೆಂದರೆ ಯೆಹೋವನು ಅವರ ಪರವಾಗಿ ವಾದಿಸುವನು; ಅವರನ್ನು ದರೋಡೆ ಮಾಡಬೇಕೆಂದಿರುವವರ ಪ್ರಾಣಗಳನ್ನು ತೆಗೆದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:23
23 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಬಡವನಿಗೆ ವ್ಯಾಜ್ಯವನ್ನು, ಬಲಹೀನರಿಗೆ ನ್ಯಾಯವನ್ನೂ ತೀರಿಸುವರೆಂದೂ ನಾನು ಬಲ್ಲೆನು.


“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”


ಏಕೆಂದರೆ ಅವನ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ. “ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ. ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ. ಅದರ ಸಮುದ್ರವನ್ನು ಒಣಗಿಸುತ್ತೇನೆ. ಅದರ ಬುಗ್ಗೆಯನ್ನು ಬತ್ತಿಹೋಗುವಂತೆ ಮಾಡುತ್ತೇನೆ.


ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ, “ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ, ತನ್ನ ಸೇವಕನನ್ನು ಕೇಡು ಮಾಡಗೊಡದ ಹಾಗೆ ತಡೆದ ಯೆಹೋವ ದೇವರು ಸ್ತುತಿಹೊಂದಲಿ. ಏಕೆಂದರೆ ಯೆಹೋವ ದೇವರು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದರು,” ಎಂದನು. ದಾವೀದನು ಅಬೀಗೈಲಳನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ಅವಳ ಸಂಗಡ ಮಾತನಾಡಲು ಸೇವಕರನ್ನು ಕಳುಹಿಸಿದನು.


ಯೆಹೋವ ದೇವರೇ, “ನಿಮ್ಮ ಹಾಗೆ ಯಾರು ಇದ್ದಾರೆ? ಬಡವನನ್ನು ಅವನಿಗಿಂತ ಬಲಿಷ್ಠನಿಂದ ಕಾಪಾಡುತ್ತೀರಿ ದರಿದ್ರನನ್ನೂ, ಕೊರತೆಯುಳ್ಳವನನ್ನೂ ಸುಲಿದುಕೊಳ್ಳುವವನಿಂದ ಬಿಡಿಸುತ್ತೀರಿ,” ಎಂದು ನನ್ನ ಪೂರ್ಣ ಪ್ರಾಣವೇ ಹೇಳುವುದು.


ದೇವರೇ, ನನ್ನನ್ನು ನಿರ್ದೋಷಿ ಎಂದು ನಿರ್ಣಯಿಸಿರಿ, ಭಕ್ತಿಹೀನ ಜನತೆಯ ವಿರೋಧವಾಗಿ ನನ್ನ ನ್ಯಾಯವನ್ನು ವಾದಿಸಿರಿ. ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸಿರಿ.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ ಅವರು ನನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡೆಸುವ ತನಕ ಅವರ ಕೋಪವನ್ನು ತಾಳುವೆನು. ಆತನು ನನ್ನನ್ನು ಬೆಳಕಿಗೆ ತರುವನು. ಆತನ ನೀತಿಯನ್ನು ನೋಡುವೆನು.


ಅವರ ವಿಮೋಚಕನು ಬಲಿಷ್ಠನೇ, ಸೇನಾಧೀಶ್ವರ ಯೆಹೋವ ದೇವರೆಂಬುದೇ ಅವರ ಹೆಸರು; ಅವರು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ, ಬಾಬಿಲೋನಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ, ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವರು.


ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ, ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು. ಏಕೆಂದರೆ ನೀನು ಮಾನವರ ರಕ್ತ ಸುರಿಸಿದ್ದಿ. ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿ ಇರುವುದೆಲ್ಲವನ್ನು ನಾಶಮಾಡಿದ್ದೀ.


ಹಾಳು ಮಾಡುತ್ತಿರುವವನೇ, ನಿನಗೆ ಕಷ್ಟ! ನಿನ್ನನ್ನು ಯಾರೂ ಸೂರೆಮಾಡದಿದ್ದರೂ ನೀನು ಸೂರೆಮಾಡುತ್ತಿರುವೆ; ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆ ಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳು ಮಾಡುತ್ತಿರುವ ನೀನು, ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ, ವಿಧವೆಯರಿಗೆ ರಕ್ಷಕರಾಗಿದ್ದಾರೆ.


ಯೆಹೋವ ದೇವರೇ, ನನ್ನ ಸಂಗಡ ವ್ಯಾಜ್ಯ ಮಾಡುವವರ ಸಂಗಡ ವ್ಯಾಜ್ಯ ಮಾಡಿರಿ; ನನಗೆ ವಿರೋಧವಾಗಿ ಯುದ್ಧ ಮಾಡುವವರ ಸಂಗಡ ಯುದ್ಧಮಾಡಿರಿ.


ಯೆಹೋವ ದೇವರು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ. ಹೌದು, ಯೆಹೋವ ದೇವರು ತಾವೇ ನನಗೋಸ್ಕರ ನಿನ್ನ ವಿಷಯವಾಗಿ ಮುಯ್ಯಿಗೆ ಮುಯ್ಯಿ ಮಾಡಲಿ. ಆದರೆ ನಾನು ನಿನ್ನ ಮೇಲೆ ನನ್ನ ಕೈಯೆತ್ತುವುದಿಲ್ಲ.


ಯೆಹೋವ ದೇವರು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ, ನನ್ನ ಪರವಾಗಿ ವಾದಿಸಿ, ನನ್ನನ್ನು ನಿನ್ನ ಕೈಯಿಂದ ತಪ್ಪಿಸಿಬಿಡಲಿ,” ಎಂದನು.


“ಯಾವ ವಿಧವೆಯನ್ನು, ದಿಕ್ಕಿಲ್ಲದ ಮಗುವನ್ನು ಬಾಧಿಸಬೇಡಿರಿ.


ನೀವು ಯಾವ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ಕೂಗಿದರೆ ನಾನು ನಿಶ್ಚಯವಾಗಿ ಅವರ ಕೂಗನ್ನು ಕೇಳುವೆನು.


ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು. ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂ ಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ.


ಯೆಹೋವ ದೇವರು ಕುಗ್ಗಿದವರೆಲ್ಲರಿಗೂ ನೀತಿಯನ್ನೂ, ನ್ಯಾಯವನ್ನೂ ಕಾರ್ಯರೂಪಕ್ಕೆ ತರುವರು.


ನಿಶ್ಚಯವಾಗಿ ನೀತಿವಂತರು ನಿಮ್ಮ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿಮ್ಮ ಸನ್ನಿಧಿಯಲ್ಲಿ ಬಾಳುವರು.


ದುಷ್ಟರ ಹಿಂಸೆಯು ಅವರನ್ನು ನಾಶಪಡಿಸುವುದು; ಏಕೆಂದರೆ ನ್ಯಾಯವಾದದ್ದನ್ನು ಮಾಡುವುದನ್ನು ಅವರು ನಿರಾಕರಿಸುತ್ತಾರೆ.


“ ‘ಆದರೂ ನಿನ್ನನ್ನು ನುಂಗಿಬಿಡುವವರನ್ನು ನುಂಗಿಬಿಡಲಾಗುವುದು. ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಹೋಗುವನು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು. ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು