Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:29 - ಕನ್ನಡ ಸಮಕಾಲಿಕ ಅನುವಾದ

29 ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ಸೇವೆ ಸಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ತನ್ನ ಕೆಲಸದಲ್ಲಿ ನಿಪುಣನಾದವನನ್ನು ಗುರುತುಹಚ್ಚು; ಅಂಥವನು ರಾಜರನ್ನಲ್ಲದೆ ನೀಚರನ್ನು ಸೇವಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ತನ್ನ ಕೆಲಸದಲ್ಲಿ ಚಟುವಟಿಕೆಯಾಗಿರುವವನನ್ನು ನೋಡು; ಇಂಥವನು ರಾಜರನ್ನು ಸೇವಿಸುವನಲ್ಲದೆ ನೀಚರನ್ನು ಸೇವಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಚತುರ ಕೆಲಸಗಾರನು ರಾಜರ ಸೇವೆಗೆ ಯೋಗ್ಯನಾಗಿದ್ದಾನೆ. ಅವನು ಸಾಮಾನ್ಯರ ಸೇವೆ ಮಾಡಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:29
19 ತಿಳಿವುಗಳ ಹೋಲಿಕೆ  

ಯಾರೊಬ್ಬಾಮನು ಪರಾಕ್ರಮಶಾಲಿಯಾಗಿರುವುದರಿಂದ ಸೊಲೊಮೋನನು ಈ ಪ್ರಾಯಸ್ಥನು ಕೆಲಸಮಾಡತಕ್ಕವನೆಂದು ಕಂಡು, ಯೋಸೇಫನ ಗೋತ್ರದ ಸಮಸ್ತ ಆಳುಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು.


“ಆಗ ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.


ಚುರುಕು ಕೈಯುಳ್ಳವನು ಆಳುವನು; ಸೋಮಾರಿಗಳು ಗುಲಾಮರಾಗುವರು.


ಆಲಸ್ಯದ ಕೈ ದರಿದ್ರನನ್ನಾಗಿ ಮಾಡುವದು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.


“ಆಗ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ, ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಯೋಸೇಫನು ಈಜಿಪ್ಟಿನ ಅರಸನಾದ ಫರೋಹನ ಮುಂದೆ ನಿಂತಾಗ, ಮೂವತ್ತು ವರ್ಷದವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು, ಈಜಿಪ್ಟ್ ದೇಶದಲ್ಲೆಲ್ಲಾ ಸಂಚಾರಮಾಡಿದನು.


ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ಸೇವೆಯನ್ನು ಮಾಡಿರಿ.


ನಿನ್ನ ಜನರು ಭಾಗ್ಯವಂತರು. ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಅಧಿಪತಿಗಳು ಭಾಗ್ಯವಂತರು.


ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.


ಈಜಿಪ್ಟ್ ದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದ ಕಡೆ ನಿನ್ನ ತಂದೆಯೂ, ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಪ್ರಾಂತದಲ್ಲಿ ಅವರು ವಾಸವಾಗಿರಲಿ. ಅವರಲ್ಲಿ ಯಾರಾದರೂ ಸಮರ್ಥರೆಂದು ನೀನು ತಿಳಿದರೆ, ಅವರನ್ನು ನಮಗಿರುವ ಪಶುಗಳ ಮೇಲೆ ವಿಚಾರಕರನ್ನಾಗಿ ಇರಿಸು,” ಎಂದನು.


ಹಾಗೆಯೇ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಇವನನ್ನು ಬಹಳವಾಗಿ ಮೆಚ್ಚಿದನು. ಅವನನ್ನು ತನ್ನ ಆಯುಧ ಹೊರುವವರಲ್ಲಿ ಒಬ್ಬನನ್ನಾಗಿ ನೇಮಿಸಿಕೊಂಡನು.


ಆಳುವವನ ಸಂಗಡ ನೀನು ಊಟಕ್ಕೆ ಕುಳಿತಿರುವಾಗ, ನಿನ್ನ ಎದುರಿನಲ್ಲಿ ಏನಿದೆ ಎಂದು ಶ್ರದ್ಧೆಯಿಂದ ಗಮನಿಸು.


ಫರೋಹನು ತನ್ನ ಸೇವಕರಿಗೆ, “ಯೋಸೇಫನಂಥ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ?” ಎಂದನು.


ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನ ಮುಂದೆ ತಿಳಿಸಿದರು. ಸೌಲನು ದಾವೀದನನ್ನು ಕರೆಯಿಸಿದನು.


ಅವರು ಅಸಾಯೇಲನನ್ನು ಎತ್ತಿಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಳಿಟ್ಟರು. ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.


ಇವರೇ ನೆಟಾಯಿಮ್, ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಕುಂಬಾರರು. ಅವರು ಅಲ್ಲಿಯೇ ಇದ್ದು ಅರಸನಿಗೋಸ್ಕರ ಕೆಲಸ ಮಾಡುತ್ತಿದ್ದರು.


ಶಾರೀರಿಕ ನ್ಯೂನತೆ ಇಲ್ಲದವರಾಗಿಯೂ, ಸುಂದರವಾಗಿಯೂ, ಅವರು ಎಲ್ಲಾ ರೀತಿಯ ವಿಷಯಗಳನ್ನು ಕಲಿಯುವ ಸಾಮರ್ಥ್ಯವನ್ನು ಹೊಂದಿರಬೇಕು. ಅವರು ವಿವೇಕವುಳ್ಳವರಾಗಿಯೂ ಮತ್ತು ತ್ವರಿತವಾಗಿ ಅರ್ಥಮಾಡಿಕೊಳ್ಳುವವರಾಗಿಯೂ, ಅರಸನ ಅರಮನೆಯಲ್ಲಿ ಸೇವೆ ಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಬಾಬಿಲೋನಿಯರ ವಿದ್ಯೆಯನ್ನೂ, ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.


ಅರಸನು ಅವರ ಸಂಗಡ ಮಾತನಾಡಿದನು. ಅವರೆಲ್ಲರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ್ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದ್ದರಿಂದಲೇ ಇವರು ಅರಸನ ಸನ್ನಿಧಿಯ ಸೇವಕರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು