ಜ್ಞಾನೋಕ್ತಿಗಳು 22:5 - ಕನ್ನಡ ಸಮಕಾಲಿಕ ಅನುವಾದ5 ದುಷ್ಟರ ದಾರಿಯಲ್ಲಿ ಮುಳ್ಳುಗಳೂ, ಉರುಲುಗಳೂ ಇವೆ; ತನ್ನ ಜೀವವನ್ನು ಕಾಪಾಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ವಕ್ರಬುದ್ಧಿಯುಳ್ಳವನ ಹಾದಿತುಂಬ ಮುಳ್ಳು, ಉರುಳು; ಅದರಿಂದ ದೂರವಿರುವನು ಪ್ರಾಣದಾಸೆಯುಳ್ಳವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ ಉರುಲುಗಳೂ ತುಂಬಿವೆ; ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ವಕ್ರಬುದ್ಧಿಯುಳ್ಳವರು ಅನೇಕ ಆಪತ್ತುಗಳಿಗೆ ಸಿಕ್ಕಿಕ್ಕೊಂಡಿದ್ದಾರೆ. ಆದರೆ ತನ್ನ ಆತ್ಮದ ಬಗ್ಗೆ ಚಿಂತಿಸುವವನು ಆ ಆಪತ್ತುಗಳಿಂದ ದೂರವಿರುವನು. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವ ದೇವರು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿಬಿಡುವುದಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನೊಳಗಿಂದ ನೀವು ನಾಶವಾಗುವವರೆಗೂ ಅವರು ನಿಮಗೆ ಉರುಲೂ ಬೋನೂ ಆಗಿರುವರು. ಇದಲ್ಲದೆ ದೇವರು ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯವಾಗಿ ತಿಳಿದುಕೊಳ್ಳುವಿರಿ.