Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:6 - ಕನ್ನಡ ಸಮಕಾಲಿಕ ಅನುವಾದ

6 ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳಿಗೆ ಶಿಕ್ಷಣವನ್ನು ಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದರಿಂದ ದೂರ ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಾಲ್ಯದಲ್ಲೇ ಮಕ್ಕಳನ್ನು ಸರಿದಾರಿಯಲ್ಲಿ ಪಳಗಿಸು; ಮುಪ್ಪಿನಲ್ಲೂ ಅವರು ಆ ಪದ್ಧತಿ ಮೀರಿ ನಡೆಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಹುಡುಗನನ್ನು ಶಿಕ್ಷಿಸು; ಮುಪ್ಪಿನಲ್ಲಿಯೂ ಓರೆಯಾಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮಗನಿಗೆ ಬಾಲ್ಯದಲ್ಲಿಯೇ ಒಳ್ಳೆಯ ಮಾರ್ಗವನ್ನು ಉಪದೇಶಿಸು. ಅವನು ಬೆಳೆದು ದೊಡ್ಡವನಾದಾಗ ಅದೇ ರೀತಿಯಲ್ಲಿ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:6
11 ತಿಳಿವುಗಳ ಹೋಲಿಕೆ  

ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸಬೇಡಿರಿ; ಕರ್ತನ ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಮಕ್ಕಳನ್ನು ಬೆಳೆಸಿರಿ.


ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು.


ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ.


ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.


ನಿಮ್ಮ ಕಣ್ಣುಗಳಿಂದ ನೋಡಿದ ಕಾರ್ಯಗಳನ್ನು ನೀವು ಮರೆಯದ ಹಾಗೆಯೂ, ನೀವು ಬದುಕುವ ದಿನಗಳೆಲ್ಲಾ ಅವು ನಿಮ್ಮ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು, ಕಾಪಾಡಿಕೊಳ್ಳಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ, ನಿಮ್ಮ ಮಕ್ಕಳ ಮಕ್ಕಳಿಗೂ ಬೋಧಿಸಿರಿ.


ಆದ್ದರಿಂದ ನಾನು ಅವನನ್ನು ಯೆಹೋವ ದೇವರಿಗೆ ಒಪ್ಪಿಸಿದ್ದೇನೆ. ಅವನು ಜೀವಿಸಿರುವವರೆಗೆ ಯೆಹೋವ ದೇವರಿಗೆ ಸಮರ್ಪಿತನಾಗಿರುವನು,” ಎಂದಳು. ಆಮೇಲೆ ಅವರೆಲ್ಲರೂ ಅಲ್ಲಿ ಯೆಹೋವ ದೇವರನ್ನು ಆರಾಧಿಸಿದರು.


ಆದರೆ ಬಾಲಕನಾದ ಸಮುಯೇಲನು ನಿಲುವಿನಿಂದಲೂ ಯೆಹೋವ ದೇವರ ಕೃಪೆಯಲ್ಲಿಯೂ ಜನರೊಂದಿಗೂ ಬೆಳೆಯುತ್ತಾ ಬಂದನು.


ನೀವು ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ, ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.


ಮಾನೋಹನು, “ನೀನು ಹೇಳಿದ ಮಾತುಗಳು ನೆರವೇರುವಾಗ, ನಾವು ಆ ಕೂಸಿಗೋಸ್ಕರ ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು