Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:16 - ಕನ್ನಡ ಸಮಕಾಲಿಕ ಅನುವಾದ

16 ನಿನ್ನ ತುಟಿಗಳು ಯಥಾರ್ಥವಾದವುಗಳನ್ನು ಮಾತಾಡಿದರೆ, ನನ್ನ ಅಂತರಾತ್ಮವು ಸಂತೋಷಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೌದು, ನಿನ್ನ ತುಟಿಗಳು ನೀತಿಯ ನುಡಿಗಳನ್ನಾಡಿದರೆ ನನ್ನ ಅಂತರಾತ್ಮವು ಹಿಗ್ಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿನ್ನ ಬಾಯಿಂದ ಹಿತೋಕ್ತಿಗಳು ಬಂದರೆ ಸಂತೋಷ ನನ್ನ ಅಂತರಾತ್ಮಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೌದು, ನಿನ್ನ ತುಟಿಗಳು ನೀತಿಯನ್ನಾಡಿದರೆ ನನ್ನ ಅಂತರಾತ್ಮವು ಹಿಗ್ಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀನು ಒಳ್ಳೆಯದನ್ನೇ ಹೇಳುವುದನ್ನು ಕೇಳುವಾಗ ನನ್ನ ಹೃದಯಕ್ಕೆ ಸಂತೋಷವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:16
6 ತಿಳಿವುಗಳ ಹೋಲಿಕೆ  

ಕೇಳಿರಿ, ಉತ್ಕೃಷ್ಟ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯುವೆನು.


ಅಶ್ಲೀಲತೆ, ಬುದ್ಧಿಹೀನ ಮಾತು, ಅಸಭ್ಯ ಹರಟೆ ಇವು ಬೇಡ, ಇವು ಅಯುಕ್ತವಾಗಿವೆ, ಪ್ರತಿಯಾಗಿ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ.


ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ಆದಕಾರಣ ನಾನು ಆ ರಹಸ್ಯವನ್ನು ಮಾಡಬಯಸುವ ರೀತಿಯಲ್ಲಿ ಸ್ಪಷ್ಟವಾಗಿ ಸಾರುವಂತೆಯೂ ಬೇಡಿಕೊಳ್ಳಿರಿ.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ.


ಪಾಪಿಗಳನ್ನು ನೋಡಿ ನಿನ್ನ ಹೃದಯವು ಅಸೂಯೆಪಡದಿರಲಿ; ಆದರೆ ಯೆಹೋವ ದೇವರ ಭಯದಲ್ಲಿರಲು ಯಾವಾಗಲೂ ಆಸಕ್ತನಾಗಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು